ಮತ್ತಾಯ 22:46 - ಕನ್ನಡ ಸಮಕಾಲಿಕ ಅನುವಾದ46 ಅದಕ್ಕೆ ಯಾರೂ ಒಂದು ಮಾತನ್ನು ಸಹ ಯೇಸುವಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರಿಗೂ ಧೈರ್ಯ ಬರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಇದಕ್ಕೆ ಉತ್ತರವಾಗಿ ಒಂದು ಮಾತು ಹೇಳಲೂ ಫರಿಸಾಯರಿಂದ ಆಗಲಿಲ್ಲ. ಅದು ಮಾತ್ರವಲ್ಲ, ಅಂದಿನಿಂದ ಯೇಸುವನ್ನು ಪ್ರಶ್ನಿಸಲು ಯಾರೂ ಧೈರ್ಯಗೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಇನ್ನೇನಾದರೂ ಕೇಳುವದಕ್ಕೆ ಯಾರಿಗೂ ಧೈರ್ಯ ಹುಟ್ಟಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಯೇಸುವಿನ ಪ್ರಶ್ನೆಗೆ ಉತ್ತರಕೊಡಲು ಫರಿಸಾಯರಲ್ಲಿ ಯಾರಿಗೂ ಸಾಧ್ಯವಾಗಲಿಲ್ಲ. ಅಂದಿನಿಂದ ಯೇಸುವನ್ನು ವಂಚಿಸುವುದಕ್ಕಾಗಿ ಪ್ರಶ್ನೆ ಕೇಳಲು ಯಾರೂ ಧೈರ್ಯಪಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ಹಿತ್ತೆ ಜೆಜುಕ್ ಜಬಾಬ್ ದಿವ್ಕ್ ಕೊನಾಕ್ಬಿ ಹೊವ್ಕ್ ನಾ. ತ್ಯಾ ದಿಸಾಕ್ನಾ ಜೆಜುಕ್ ಸವಾಲ್ ಇಚಾರುಕ್ ಕೊನಾಕ್ಬಿ ಧೈರೊ ಹೊವ್ಕ್ ನಾ. ಅಧ್ಯಾಯವನ್ನು ನೋಡಿ |