Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:9 - ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ನೀವು ಮುಖ್ಯ ಬೀದಿಗಳಿಗೆ ಹೊರಟುಹೋಗಿ ಅಲ್ಲಿ ಕಂಡವರನ್ನೆಲ್ಲಾ ಮದುವೆಗೆ ಆಹ್ವಾನಿಸಿರಿ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ಹೆದ್ದಾರಿಗಳಿಗೆ ಹೋಗಿ ಕಂಡಕಂಡವರನ್ನೆಲ್ಲಾ ಉತ್ಸವಕ್ಕೆ ಕರೆಯಿರಿ’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಈಗ ನಾಲ್ಕು ಹಾದಿಗಳು ಕೂಡುವ ಸ್ಥಳಗಳಿಗೆ ಹೋಗಿ ಕಂಡವರನ್ನೆಲ್ಲಾ ಮದುವೆಯ ಊಟಕ್ಕೆ ಕರೆಯಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ಬೀದಿಯ ಮೂಲೆಮೂಲೆಗಳಿಗೆ ಹೋಗಿ ನೀವು ಕಂಡ ಜನರನ್ನೆಲ್ಲ ಔತಣಕ್ಕೆ ಆಹ್ವಾನಿಸಿರಿ’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅತ್ತಾ ತುಮಿ ಮೊಟ್ಯಾ-ಮೊಟ್ಯಾ ವನಿಯಾತ್ನಿ ಜಾವಾ ಅನಿ ಕವ್ಡಿ ಗಾವ್ತಾತ್ ತವ್ಡ್ಯಾ ಲೊಕಾಕ್ನಿ ಗರ್‍ದಿಚ್ಯಾ ಜೆವ್ನಾಕ್ ಬಲ್ವುನ್ ಹಾನಾ.” ಮನುನ್ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:9
16 ತಿಳಿವುಗಳ ಹೋಲಿಕೆ  

ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ


ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ: “ ‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’ ”


ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.


ಬಾಬಿಲೋನಿನ ಅರಸನು, ಮಾರ್ಗವು ಒಡೆಯುವ ಸ್ಥಳದಲ್ಲಿ ಶಕುನವನ್ನು ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿದನು; ಮೂರ್ತಿಗಳ ಹತ್ತಿರ ವಿಚಾರಿಸಿದನು; ಅವನು ಹತ್ಯೆ ಮಾಡಿದ ಪ್ರಾಣಿಯ ಯಕೃತ್ತನ್ನು ಪರೀಕ್ಷಿಸುತ್ತಾರೆ.


ಅವರಲ್ಲಿ ಓಡಿಹೋದವರನ್ನು ಕಡಿದುಬಿಡುವುದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು. ಕಷ್ಟದ ದಿವಸದಲ್ಲಿ ಅವರಲ್ಲಿ ಉಳಿದುಕೊಂಡವರನ್ನು ಹಿಡಿದುಕೊಡಬಾರದಾಗಿತ್ತು.


“ತರುವಾಯ ಅವನು ತನ್ನ ಸೇವಕರಿಗೆ, ‘ಮದುವೆಯ ಔತಣ ಸಿದ್ಧವಾಗಿದೆ, ಆದರೆ ಆಹ್ವಾನಿತರು ಸಿದ್ಧರಾಗಿರಲಿಲ್ಲ.


ಆಗ ಆ ಸೇವಕರು ಮುಖ್ಯ ಬೀದಿಗಳಿಗೆ ಹೋಗಿ ತಾವು ಕಂಡ ಕೆಟ್ಟವರನ್ನೂ ಒಳ್ಳೆಯವರನ್ನೂ ಕರೆತಂದರು. ಹೀಗೆ ಮದುವೆ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.


“ಅವರು, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ,’ ಎಂದರು. “ಆಗ ಅವನು, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ,’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು