Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:14 - ಕನ್ನಡ ಸಮಕಾಲಿಕ ಅನುವಾದ

14 “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ. ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ. ಆದ್ದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! (ವಿಧವೆಯರ ಮನೆಮಾರುಗಳನ್ನು ನೀವು ನುಂಗಿಬಿಡುತ್ತೀರಿ. ನಟನೆಗಾಗಿ ಉದ್ದುದ್ದ ಜಪತಪಗಳನ್ನು ಮಾಡುತ್ತೀರಿ, ನೀವು ಅತಿ ಕಠಿಣವಾದ ದಂಡನೆಗೆ ಗುರಿಯಾಗುವಿರಿ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ತುಮಿ ಘೊ ಮರಲ್ಲ್ಯಾ ಬಾಯ್ಕಾಮನ್ಸಾಕ್ನಿ ಮೊಸ್ ಕರುನ್ ತೆಂಚ್ಯಾ ಘರಾನಿತ್ಲೆ ಸಗ್ಳೆ ಕಾಡುನ್ ಘೆತ್ಯಾಶಿ ಅನಿ ಲಾಂಬ್-ಲಾಂಬ್ ಮಾಗ್ನಿಯಾ ಕರುನ್ ಅಪ್ನಿ ಬರಿ ಲೊಕಾ ಮನುನ್ ದಾಕ್ವುತ್ಯಾಶಿ! ಹೆಚೆಸಾಟ್ನಿ ತುಮ್ಕಾ ಮೊಟಿ ಶಿಕ್ಷಾ ರಾಕುನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:14
14 ತಿಳಿವುಗಳ ಹೋಲಿಕೆ  

“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ, ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.


ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.


“ಯಾವ ವಿಧವೆಯನ್ನು, ದಿಕ್ಕಿಲ್ಲದ ಮಗುವನ್ನು ಬಾಧಿಸಬೇಡಿರಿ.


ವಿಧವೆಯರನ್ನು ಬರಿದಾಗಿ ಕಳುಹಿಸಿಬಿಟ್ಟೆ; ದಿಕ್ಕಿಲ್ಲದವರ ತೋಳುಗಳನ್ನು ಮುರಿದುಬಿಟ್ಟೆ.


“ನಾನು ಬಡವರ ಬಯಕೆಗಳನ್ನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನ್ನು ನಾನು ಮಂಕಾಗಿಸಿದೆನೋ?


ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಸೊದೋಮ್ ಪಟ್ಟಣದ ಗತಿಯು ಹೆಚ್ಚು ತಾಳಬಹುದಾಗಿರುವುದು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


“ಹಾವುಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆಯಿಂದ ಹೇಗೆ ತಪ್ಪಿಸಿಕೊಂಡೀರಿ?


ದಂಡನೆಗೆ ಯೋಗ್ಯವಾದದ್ದನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳಿಗೆ ಗುರಿಯಾಗುವನು. ಯಾವನಿಗೆ ಹೆಚ್ಚು ಕೊಡಲಾಗಿದೆಯೋ, ಅವನಿಂದ ಹೆಚ್ಚು ಕೇಳಲಾಗುವುದು; ಯಾವನಿಗೆ ಹೆಚ್ಚಾಗಿ ಒಪ್ಪಿಸಿರುವುದೋ, ಅವನಿಂದ ಹೆಚ್ಚಾಗಿಯೇ ಕೇಳಲಾಗುವುದು.”


ಇಂಥವರು ಮನೆಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ಪ್ರೇರಣೆ ಹೊಂದಿ ಸುಲಭವಾಗಿ ಮೋಸಹೋಗುವ ಸ್ತ್ರೀಯರನ್ನು ವಶಮಾಡಿಕೊಳ್ಳುವರು.


ಏಕೆಂದರೆ, ಅನೇಕ ದಂಗೆಕೋರ ಜನರೂ ಬರೀ ಮಾತನಾಡುವವರೂ ಮೋಸಗೊಳಿಸುವವರೂ ಮುಖ್ಯವಾಗಿ ಸುನ್ನತಿಯಾಗಬೇಕೆಂದು ಹೇಳುವ ಗುಂಪಿನವರೂ ಇದ್ದಾರೆ.


ನನ್ನ ಪ್ರಿಯರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವುದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಇವರು ಕಾಮುಕದಿಂದ ತುಂಬಿದ ಕಣ್ಣು ಮತ್ತು ಪಾಪವನ್ನು ಬಿಡಲೊಲ್ಲದ ಚಪಲಚಿತ್ತರೂ ಮರುಳುಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು