Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:27 - ಕನ್ನಡ ಸಮಕಾಲಿಕ ಅನುವಾದ

27 “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಸುಣ್ಣ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ. ಆದರೆ ಒಳಗೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಸುಣ್ಣ ಬಳಿದ ಸಮಾಧಿಗಳು. ಹೊರನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಚಂದವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಸುಣ್ಣ ಹಚ್ಚಿದ ಸಮಾಧಿಗಳಂತಿದ್ದೀರಿ. ಆ ಸಮಾಧಿಗಳ ಹೊರಭಾಗ ಚಂದವಾಗಿ ಕಾಣುತ್ತದೆ. ಆದರೆ ಒಳಭಾಗ ಸತ್ತವರ ಎಲುಬುಗಳಿಂದಲೂ ಎಲ್ಲಾ ಬಗೆಯ ಹೊಲಸುಗಳಿಂದಲೂ ತುಂಬಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ತುಮಿ ಬರೆ ಕರುನ್ ಚುನ್ನೊ ಮಾರಲ್ಲ್ಯಾ ಸಾರಿ ಸರ್ಕೆ ಹಾಸಿ. ತ್ಯಾತುರ್ ಭುತ್ತುರ್ ಸಗ್ಳೆ ಹಡ್ಡಾ ಅನಿ ಕುಸ್ಕೆ-ಮಸ್ಕೆ ಭರಲ್ಲೆ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:27
7 ತಿಳಿವುಗಳ ಹೋಲಿಕೆ  

ಆಗ ಪೌಲನು ಅವನಿಗೆ, “ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವರು. ಮೋಶೆಯ ನಿಯಮದ ಪ್ರಕಾರ ನನ್ನ ನ್ಯಾಯವಿಚಾರಣೆ ಮಾಡಲು ನೀನು ಕುಳಿತುಕೊಂಡು, ನಿಯಮಕ್ಕೆ ವಿರುದ್ಧವಾಗಿ ನನ್ನನ್ನು ಹೊಡೆಯಬೇಕೆಂದು ಆಜ್ಞಾಪಿಸುತ್ತೀಯೋ?” ಎಂದನು.


“ನಿಮಗೆ ಕಷ್ಟ, ಏಕೆಂದರೆ ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ, ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು,” ಎಂದು ಹೇಳಿದರು.


“ಇದಲ್ಲದೆ ಬಯಲಿನಲ್ಲಿ ಖಡ್ಗದಿಂದ ಹತನಾದ ವ್ಯಕ್ತಿಯನ್ನು ಮುಟ್ಟಿದವರೂ ಅಥವಾ ಬೇರೆ ಯಾವ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬನ್ನಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರೆಲ್ಲರೂ ಏಳು ದಿವಸ ಅಪವಿತ್ರರಾಗಿರುವರು.


ಕೆಟ್ಟ ಹೃದಯದಿಂದ ಸವಿನುಡಿಯುವ ತುಟಿಯು, ಬೆಳ್ಳಿಯ ಹೊದಿಕೆಯಿಂದ ಮುಚ್ಚಲ್ಪಟ್ಟ ಬೋಕಿಯಂತೆ ಇದೆ.


ಅದರಂತೆಯೇ, ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ನೀವು ಒಳಗೆ ಕಪಟದಿಂದಲೂ ಅನ್ಯಾಯದಿಂದಲೂ ತುಂಬಿದವರಾಗಿದ್ದೀರಿ.


ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡುವವರೂ ತಮಗೆ ಕ್ರಿಸ್ತ ಯೇಸುವಿನ ಶಿಲುಬೆಯ ನಿಮಿತ್ತ ಹಿಂಸೆಯಾಗಬಾರದೆಂಬುದಕ್ಕಾಗಿಯೇ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಿಮ್ಮನ್ನು ಒತ್ತಾಯ ಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು