Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:33 - ಕನ್ನಡ ಸಮಕಾಲಿಕ ಅನುವಾದ

33 “ಹಾವುಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆಯಿಂದ ಹೇಗೆ ತಪ್ಪಿಸಿಕೊಂಡೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ಎಲೈ ಸರ್ಪಗಳೇ, ವಿಷಸರ್ಪಗಳ ಪೀಳಿಗೆಯೇ, ನರಕ ದಂಡನೆಯಿಂದ ನೀವು ಹೇಗೆ ತಾನೆ ಪಾರಾಗುವಿರಿ? ಇಗೋ ಕೇಳಿ: ‘ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಪಂಡಿತರನ್ನೂ ಧರ್ಮಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಗೆ ಹೇಗೆ ತಪ್ಪಿಸಿಕೊಂಡೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ನೀವು ಸರ್ಪಗಳು! ನೀವು ವಿಷಕರವಾದ ಹಾವುಗಳ ಕುಟುಂಬದವರು! ನೀವು ದೇವರಿಂದ ತಪ್ಪಿಸಿಕೊಳ್ಳಲಾರಿರಿ. ನೀವೆಲ್ಲರು ಅಪರಾಧಿಗಳೆಂಬ ತೀರ್ಪುಹೊಂದಿ ನರಕಕ್ಕೆ ಹೋಗುವಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಸಾಪಾ ಸರ್ಕೆ ತುಮಿ, ಅನಿ ಸಾಪಾಚಿ ಪಿಳ್ಗಿ ತುಮಿ! ನರ್‍ಕಾತ್ ಜಾತಲ್ಯಾ ಶಿಕ್ಷಾತ್ನಾ ಚುಕ್ವುನ್ ಘೆವ್ಕ್ ಹೊತಾ ಮನುನ್ ತುಮ್ಚ್ಯಾನ್ ಯೌಜುಕ್ ತರ್ ಕಶೆ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:33
17 ತಿಳಿವುಗಳ ಹೋಲಿಕೆ  

ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?


ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ಆಗ ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ, ಯೋಹಾನನು, “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?


ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.


ಆ ದಿನದಲ್ಲಿ ಕರಾವಳಿಯ ನಿವಾಸಿಗಳು, ‘ಇಗೋ, ಅಸ್ಸೀರಿಯದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ, ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?’ ಎಂದುಕೊಳ್ಳುವರು.”


ಹಾಗಾದರೆ ನಿಮ್ಮ ಪಿತೃಗಳ ಅಪರಾಧದ ಅಳತೆಯನ್ನು ನೀವೇ ಪೂರ್ಣಗೊಳಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು