ಮತ್ತಾಯ 23:4 - ಕನ್ನಡ ಸಮಕಾಲಿಕ ಅನುವಾದ4 ಹೊರುವುದಕ್ಕೆ ಭಾರವಾದ ಮತ್ತು ಹೊರಲಾಗದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಅವರು ಹೊರಿಸುತ್ತಾರೆ. ತಾವಾದರೋ ತಮ್ಮ ಬೆರಳಿನಿಂದಲೂ ಅವುಗಳನ್ನು ಮುಟ್ಟುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಭಾರವಾದ ಹಾಗೂ ಹೊರಲಾಗದ ಹೊರೆಗಳನ್ನು ಕಟ್ಟಿ ಮಾನವರ ಹೆಗಲ ಮೇಲೆ ಹೇರುತ್ತಾರೆ. ತಾವಾದರೋ ಅವನ್ನು ಕಿರುಬೆರಳಿನಿಂದಲೂ ಮುಟ್ಟಲೊಲ್ಲರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ಬೇರೆಯವರಿಗೆ ಕಷ್ಟಕರವಾದ ನಿಯಮಗಳನ್ನು ಕೊಟ್ಟು ಅವುಗಳಿಗೆ ವಿಧೇಯರಾಗಬೇಕೆಂದು ಒತ್ತಾಯ ಮಾಡುತ್ತಾರೆ. ತಾವಾದರೋ ಆ ನಿಯಮಗಳಲ್ಲಿ ಯಾವದನ್ನಾದರೂ ಅನುಸರಿಸಲು ಪ್ರಯತ್ನಿಸುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಲೊಕಾಕ್ನಿ ಡುಬ್ರಿರ್ ವಾವುನ್ ಘೆವ್ಕ್ ತರಾಸ್ ಹೊತಾ ತಸ್ಲಿ ವಜ್ಜಿ ತೆನಿ ಭಾಂದ್ತ್ಯಾತ್, ಖರೆ ತೆ ವಜ್ಜೆ ವಾವುಕ್ ಮಜತ್ ಕರುಕ್ ಮನುನ್ ಎಕ್ ಬೊಟ್ ಸೈತ್ ಲಾವುಕ್ ತೆನಿ ಮನ್ ಕರಿನಾತ್. ಅಧ್ಯಾಯವನ್ನು ನೋಡಿ |