Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:9 - ಕನ್ನಡ ಸಮಕಾಲಿಕ ಅನುವಾದ

9 ಭೂಮಿಯಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿರಿ, ಪರಲೋಕದಲ್ಲಿ ಇರುವವರೇ ನಿಮ್ಮ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಹದಲ್ಲಿ ನೀವು ಯಾರನ್ನೂ ‘ಪಿತನೇ’ ಎಂದು ಸಂಬೋಧಿಸಬೇಡಿ. ಏಕೆಂದರೆ ನಿಮ್ಮ ಪಿತ ಒಬ್ಬರೇ. ಅವರು ಸ್ವರ್ಗದಲ್ಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಮ್ಮ ತಂದೆ ಎಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮಗೆ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈ ಲೋಕದಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿ. ನಿಮಗೆ ಒಬ್ಬನೇ ತಂದೆ. ಆತನು ಪರಲೋಕದಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮಿ ಹಿತ್ತೆ ಹ್ಯಾ ಜಗಾತ್ ಕೊನಾಕ್ಬಿ ಬಾಬಾ ಮನುನ್ ಬಲ್ವುತಲೆ ನಕ್ಕೊ, ಕಶ್ಯಾಕ್ ಮಟ್ಲ್ಯಾರ್ ಸರ್‍ಗಾ ವೈಲೊ ದೆವ್ ಎಕ್ಲೊಚ್ ತುಮ್ಚೊ ಬಾಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:9
16 ತಿಳಿವುಗಳ ಹೋಲಿಕೆ  

ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.


ಇದು ಮಾತ್ರವಲ್ಲದೆ, ನಮ್ಮನ್ನು ಶಿಕ್ಷಿಸಿದ ಇಹಲೋಕದ ಶಾರೀರಿಕ ತಂದೆಗಳನ್ನು ನಾವು ಸನ್ಮಾನಿಸಿದೆವಷ್ಟೆ. ಆತ್ಮಗಳಿಗೆ ತಂದೆಯಾದ ದೇವರಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?


“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”


ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ತಮ್ಮಲ್ಲಿ ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುವರಲ್ಲವೇ!


ಏಕೆಂದರೆ, ನಿಮಗೆ ಕ್ರಿಸ್ತ ಯೇಸುವಿನಲ್ಲಿ ಹತ್ತು ಸಾವಿರ ಮಂದಿ ಪೋಷಕರು ಇದ್ದರೂ, ತಂದೆಗಳು ಬಹುಮಂದಿ ಇಲ್ಲ. ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ತಂದೆಯಾದೆನು.


ಇದಲ್ಲದೆ, “ನಾನು ನಿಮಗೆ ತಂದೆಯಾಗಿರುವೆನು. ನೀವು ನನಗೆ ಪುತ್ರಪುತ್ರಿಯರು ಆಗಿರುವಿರಿ,” ಎಂದು ಸರ್ವಶಕ್ತ ಆಗಿರುವ ಕರ್ತದೇವರು ಹೇಳುತ್ತಾರೆ.


“ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದಕ್ಕೆ ಕಿವಿಗೊಡಿರಿ,” ಎಂದು ಪ್ರಾರಂಭಿಸಿದನು.


ಎಲೀಷನು ಅದನ್ನು ಕಂಡು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥ ಮತ್ತು ಸಾರಥಿಯಾದ್ದಾತನೇ!” ಎಂದು ಕೂಗಿದನು. ಮತ್ತೆ ಅವನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡುತುಂಡಾಗಿ ಹರಿದನು.


ಇವೆಲ್ಲವನ್ನು ದೇವರನ್ನು ಅರಿಯದವರು ಹುಡುಕುತ್ತಾರೆ. ಇವೆಲ್ಲಾ ನಿಮಗೆ ಅವಶ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಯು ತಿಳಿದಿದ್ದಾರೆ.


ಆಗ ಎಲೀಷನು ಮರಣಕರ ವ್ಯಾಧಿಯಿಂದ ಬಳಲುತ್ತಿದ್ದಾಗ, ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು, ಅವನ ಮೇಲೆ ಬಿದ್ದು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥಗಳೂ ಕುದುರೆ ಸವಾರರು ಆಗಿದ್ದವನೇ!” ಎಂದು ಹೇಳುತ್ತಾ ಅತ್ತನು.


ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ, “ನನ್ನ ತಂದೆಯೇ, ನಾನು ಸಂಹರಿಸಲೋ, ಸಂಹರಿಸಲೋ?” ಎಂದನು.


ಗುರುವೆಂದೂ ಕರೆಯಿಸಿಕೊಳ್ಳಬೇಡಿರಿ. ಏಕೆಂದರೆ ಕ್ರಿಸ್ತನೊಬ್ಬನೇ ನಿಮ್ಮ ಗುರುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು