Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:11 - ಕನ್ನಡ ಸಮಕಾಲಿಕ ಅನುವಾದ

11 ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅನೇಕ ಸುಳ್ಳುಪ್ರವಾದಿಗಳು ತಲೆಯೆತ್ತಿಕೊಂಡು ಎಷ್ಟೋಮಂದಿಯನ್ನು ವಂಚಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬಹುಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅನೇಕ ಸುಳ್ಳುಪ್ರವಾದಿಗಳು ಬಂದು ಎಷ್ಟೋ ಜನರನ್ನು ವಂಚಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಲೈ ಝುಟೆ ಪ್ರವಾದಿ ಉಟ್ತಾತ್ ಅನಿ ಲೊಕಾಕ್ನಿ ಪಿಶೆ ಕರ್‍ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:11
13 ತಿಳಿವುಗಳ ಹೋಲಿಕೆ  

ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


“ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.


ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಗೊಟ್ಟು ವಿಶ್ವಾಸದಲ್ಲಿ ಬಿದ್ದುಹೋಗುವರೆಂದು ಪವಿತ್ರಾತ್ಮ ದೇವರು ಸ್ಪಷ್ಟವಾಗಿ ಹೇಳುತ್ತಾರೆ.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು, ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು.


ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.


ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳಿದ್ದಾರೆ. ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.


ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.


ನಿಮ್ಮೊಳಗಿಂದಲೂ ಜನರು ಎದ್ದು ವಕ್ರಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳೆದುಕೊಳ್ಳುವರು.


ಅನ್ಯಾಯವು ಹೆಚ್ಚಾಗುವುದರಿಂದ ಬಹುಜನರ ಪ್ರೀತಿಯು ತಣ್ಣಗಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು