Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:15 - ಕನ್ನಡ ಸಮಕಾಲಿಕ ಅನುವಾದ

15 “ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಪ್ರವಾದಿ ದಾನಿಯೇಲನು ಸೂಚಿಸಿರುವ ‘ವಿನಾಶಕರ ವಿಕಟ ಮೂರ್ತಿ’ ಪವಿತ್ರಸ್ಥಾನದಲ್ಲಿ ನಿಂತಿರುವುದನ್ನು ನೀವು ಕಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದದರಿಂದ ಪ್ರವಾದಿಯಾದ ದಾನಿಯೇಲನು ಹೇಳಿದಂಥ ಹಾಳುಮಾಡುವ ಅಸಹ್ಯ ವಸ್ತುವು ಪವಿತ್ರಸ್ಥಾನದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಈ ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 “ದಾನಿಯೆಲ್ ಪ್ರವಾದ್ಯಾನ್ ಸಾಂಗಲ್ಲಿ ಸತ್ತ್ಯಾನಾಸ್ ಕರ್‍ತಲಿ ಬುರ್ಶಿ ಸಂಗತ್” ತುಮ್ಕಾ ದಿಸ್ತಾ. ತಿ ಎಕ್ ಪವಿತ್ರ್ ಜಾಗ್ಯಾರ್ ಇಬೆ ರ್‍ಹಾತಾ. ವಾಚ್ವುತಲ್ಯಾಕ್ ಸೂಚನಾ: ಅಶೆ ಮಟ್ಲ್ಯಾರ್ ಕಾಯ್ ಮನುನ್ ಕಳ್ವುನ್ ಘೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:15
19 ತಿಳಿವುಗಳ ಹೋಲಿಕೆ  

ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಅರ್ಧದಲ್ಲಿ ಯಜ್ಞವನ್ನೂ, ಅರ್ಪಣೆಯನ್ನೂ ನಿಲ್ಲಿಸುವನು. ದೇವಾಲಯದಲ್ಲಿ ಹಾಳುಮಾಡುವ ಅಸಹ್ಯ ವಸ್ತುವನ್ನು ಅವನು ಸ್ಥಾಪಿಸುವನು. ಇದು ಅವನ ಮೇಲೆ ನಿರ್ಣಯವಾದದ್ದು, ಸುರಿಯುವ ತನಕ ಇರುವುದು,” ಎಂದು ಹೇಳಿದನು.


“ಪ್ರತಿದಿನದ ಯಜ್ಞವು ಸಕಾಲಕ್ಕೆ ನಿಂತುಹೋಗುವುದು. ಆ ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ, 1,290 ದಿನಗಳು ಕಳೆಯಬೇಕು.


“ಆದರೆ ‘ಅಸಹ್ಯ ವಸ್ತು’ ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ ಓದುವವನು ತಿಳಿದುಕೊಳ್ಳಲಿ. ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.


“ಸೈನ್ಯಗಳು ಯೆರೂಸಲೇಮಿಗೆ ಮುತ್ತಿಗೆ ಹಾಕುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲವು ಸಮೀಪಿಸಿದೆ ಎಂದು ತಿಳಿದುಕೊಳ್ಳಿರಿ.


ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲಸುಮಾಡಿ, ನಿತ್ಯ ಯಜ್ಞವನ್ನು ನಿಲ್ಲಿಸುವುದು. ಹಾಳುಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವುದು.


ಈ ಪ್ರವಾದನೆಯ ವಾಕ್ಯಗಳನ್ನು ಓದುವಂಥವರೂ ಕೇಳುವಂಥವರೂ ಈ ಪ್ರವಾದನೆಯ ವಾಕ್ಯಗಳಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಏಕೆಂದರೆ ಸಮಯವು ಸಮೀಪವಾಗಿದೆ.


ನಿನ್ನ ಶತ್ರುಗಳು ನಿನ್ನ ಸುತ್ತಲೂ ಅಡ್ಡಗೋಡೆಯನ್ನು ಕಟ್ಟಿ, ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಬಂಧಿಸುವ ದಿನಗಳು ಬರುವವು.


ನೀನು ವಿಜ್ಞಾಪನೆ ಮಾಡಿದ ಕೂಡಲೇ ಉತ್ತರ ಸಿಕ್ಕಿತು. ಅದನ್ನು ನಿನಗೆ ತಿಳಿಸುವುದಕ್ಕೆ ನಾನು ಬಂದಿದ್ದೇನೆ. ಏಕೆಂದರೆ ನೀನು ಅತಿ ಪ್ರಿಯನಾಗಿರುವೆ. ಆದ್ದರಿಂದ ವಿಷಯವನ್ನು ಗ್ರಹಿಸಿಕೊಂಡು ದರ್ಶನವನ್ನು ತಿಳಿದುಕೋ.


“ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.


ಆದ್ದರಿಂದ ದಾರಿಬಿಟ್ಟು ಹೋಗದಂತೆ, ನಾವು ಕೇಳಿದ ಸಂಗತಿಗಳಿಗೆ ಹೆಚ್ಚು ಲಕ್ಷ್ಯ ಕೊಡುವವರಾಗಿರಬೇಕು.


ಸುಳ್ಳುಸಾಕ್ಷಿಗಳನ್ನು ಹಾಜರುಪಡಿಸಿ, “ಈ ಮನುಷ್ಯನು ಈ ಪವಿತ್ರಸ್ಥಳಕ್ಕೂ ಮೋಶೆಯ ನಿಯಮಕ್ಕೂ ವಿರೋಧವಾಗಿ ಮಾತನಾಡುತ್ತಲೇ ಇದ್ದಾನೆ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.”


“ಇಸ್ರಾಯೇಲರೇ, ನಮಗೆ ಸಹಾಯಮಾಡಿರಿ! ನಮ್ಮ ಜನರಿಗೂ ನಮ್ಮ ನಿಯಮಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲಾ ಜನರಿಗೆ ಬೋಧಿಸುತ್ತಿರುವ ಮನುಷ್ಯನು ಇವನೇ. ಅಷ್ಟೇ ಅಲ್ಲ, ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪವಿತ್ರ ಸ್ಥಳವನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿ ಹೇಳಿದರು.


ಆ ಮನುಷ್ಯನು ನನಗೆ, “ಮನುಷ್ಯಪುತ್ರನೇ ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ಮತ್ತು ನಾನು ತೋರಿಸುವ ಎಲ್ಲಾ ಸಂಗತಿಗಳಿಗೆ ನೀನು ಮನಸ್ಸಿಡು. ನಾನು ನಿನಗೆ ಅವುಗಳನ್ನೆಲ್ಲಾ ತೋರಿಸುವುದಕ್ಕಾಗಿಯೇ ಇಲ್ಲಿಗೆ ನಿನ್ನನ್ನು ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ಜನರಿಗೆ ತಿಳಿಸು,” ಎಂದರು.


ನಾವು ಈತನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಆತನನ್ನೇ ನಂಬುವರು. ರೋಮನ್ನರು ಬಂದು ನಮ್ಮ ದೇವಾಲಯವನ್ನೂ ರಾಷ್ಟ್ರವನ್ನೂ ನಾಶಮಾಡುವರು,” ಎಂದರು.


“ ‘ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವುವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನೆಂಬುದಕ್ಕೆ ಇದೇ ನಿಮಗೆ ಗುರುತು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಇವರಲ್ಲಿ ಯೆಹೂದದಿಂದ ದಾನಿಯೇಲ, ಹನನ್ಯ, ಮೀಶಾಯೇಲ್, ಅಜರ್ಯ ಎಂಬವರಿದ್ದರು.


ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು