Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:19 - ಕನ್ನಡ ಸಮಕಾಲಿಕ ಅನುವಾದ

19 ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ ಕಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಹಾಗೂ ಹಾಲೂಡಿಸುವ ತಾಯಂದಿರ ಗೋಳೇನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ಆ ದಿನಗಳಲ್ಲಿ ಬಸುರಿಯರಿಗೂ ಮೊಲೆಕೂಸಿರುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಆ ಸಮಯದಲ್ಲಿ ಗರ್ಭಿಣಿಯರಿಗೂ ಮೊಲೆಕೂಸುಗಳಿರುವ ಸ್ತ್ರೀಯರಿಗೂ ಎಂಥಾ ಗೋಳಾಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಹ್ಯಾ ದಿಸಾತ್ನಿ ಗರ್‍ವಾರ್ ಹೊತ್ತ್ಯಾ ಬಾಯ್ಕಾಮನ್ಸಾಂಚಿ ಅನಿ ಥಾನ್ ಫಿತಲಿ ಪೊರಾ ಹೊತ್ತ್ಯಾ ಅವ್ಸಿಯಾಂಚಿ ಗತ್ ಕಾಯ್ ಅಸಿಲ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:19
12 ತಿಳಿವುಗಳ ಹೋಲಿಕೆ  

ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ! ದೇಶದಲ್ಲಿ ಈ ಜನರು ಮಹಾ ವಿಪತ್ತಿಗೂ ಕೋಪಕ್ಕೂ ಗುರಿಯಾಗುವರು.


ಕನಿಕರ ತುಂಬಿದ ಸ್ತ್ರೀಯರ ಕೈಗಳು ತಮ್ಮ ಸ್ವಂತ ಮಕ್ಕಳನ್ನೇ ಬೇಯಿಸಿದವು. ಇವರು ನನ್ನ ಜನರ ನಾಶದಲ್ಲಿ ಅವರಿಗೆ ಆಹಾರವಾದರು.


ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ, ತನ್ನ ದೋಷಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು, ವೈರಿಗಳು ಅವಳ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.”


ಸೌಲನ ಮಗ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಸೌಲನೂ, ಯೋನಾತಾನನೂ ಮರಣ ಹೊಂದಿದರೆಂಬ ವರ್ತಮಾನ ಇಜ್ರೆಯೇಲ್ ಎಂಬ ಪಟ್ಟಣದಿಂದ ಬಂದಾಗ, ಅವನು ಐದು ವರ್ಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.


ಆ ಸಮಯದಲ್ಲಿ ಮೆನಹೇಮನು ತಿರ್ಚದಿಂದ ತಿಪ್ಸಹು ಪಟ್ಟಣಕ್ಕೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲುಗಳನ್ನು ತನಗೆ ತೆರೆಯದೆ ಇದ್ದುದರಿಂದ ಎಲ್ಲರನ್ನೂ, ಅದರ ಮೇರೆಗಳಲ್ಲಿದ್ದವರೆಲ್ಲರನ್ನೂ ಸಂಹರಿಸಿದನು. ತಿಪ್ಸಹವನ್ನು ಹಾಳು ಮಾಡಿ, ಎಲ್ಲಾ ಗರ್ಭಿಣಿಯರ ಹೊಟ್ಟೆಗಳನ್ನು ಸೀಳಿಸಿದನು.


“ಮಕ್ಕಳು ಹೇಳುವುದೇನೆಂದು ನಿನಗೆ ಕೇಳಿಸುತ್ತಿದೆಯೋ?” ಎಂದು ಯೇಸುವನ್ನು ಕೇಳಿದರು. ಯೇಸು, “ಹೌದು,” ಎಂದು ಉತ್ತರಿಸಿ ಅವರಿಗೆ, “ ‘ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ,’ ಎಂಬುದನ್ನು ಓದಲಿಲ್ಲವೋ?” ಎಂದರು.


ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗದಿರಲಿ.


ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ, ಸಬ್ಬತ್ ದಿನದಲ್ಲಾಗಲಿ ಆಗದಂತೆ ಪ್ರಾರ್ಥಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು