Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಯೇಸು ಅವರಿಗೆ, “ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಯೇಸು, “ಇವುಗಳನ್ನೆಲ್ಲಾ ನೀವು ನೋಡುತ್ತಾ ಇದ್ದೀರಲ್ಲವೆ? ನಾನು ನಿಮಗೆ ಹೇಳುತ್ತೇನೆ ಕೇಳಿ: ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಆತನು - ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವದಿಲ್ಲ, ಎಲ್ಲಾ ಕೆಡವಲ್ಪಡುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಯೇಸು “ಈ ಕಟ್ಟಡಗಳನ್ನೆಲ್ಲ ನೋಡುತ್ತಿದ್ದೀರಾ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇವುಗಳೆಲ್ಲಾ ನಾಶವಾಗುತ್ತವೆ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದಂತೆ ಎಲ್ಲಾ ಕಲ್ಲುಗಳು ಕೆಡವಲ್ಪಡುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆನಿ ತೆಂಕಾ,“ಸಗ್ಳೆ ಬರೆ-ಬರೆ ತುಮ್ಕಾ ಅತ್ತಾ ದಿಸುಕ್ ಲಾಗ್ಲಾ ಹೊಯ್. ಖರೆ ಮಿಯಾ ತುಮ್ಕಾ ಸಾಂಗ್ತಾ ಹೆಂಚ್ಯಾತ್ಲೊ ಎಕ್ ಸೈತ್ ಗುಂಡೊ ಅಪ್ನಾಚ್ಯಾ ಜಾಗ್ಯಾ ವರ್‍ತಿ ರ್‍ಹಾಯ್ನಾ; ಹರ್ ಎಕ್ ಗುಂಡೊ ಕೊಸ್ಳುನ್ ಪಾಡ್ವುನ್ ಹೊತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:2
8 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ಗೋಡೆಯೊಳಗಿನ ನಿನ್ನನ್ನೂ ನಿನ್ನ ಮಕ್ಕಳನ್ನೂ ನೆಲಕ್ಕೆ ಬಡಿಯುವರು. ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ ದೇವರು ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲ,” ಎಂದರು.


“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವುದರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.


ಪಟ್ಟಣದಲ್ಲಿ ನಾನು ಆಲಯವನ್ನೇ ಕಾಣಲಿಲ್ಲ. ಏಕೆಂದರೆ ಕರ್ತ ಆಗಿರುವ ಸರ್ವಶಕ್ತ ದೇವರೂ, ಕುರಿಮರಿಯಾಗಿರುವವರೂ ಆಲಯವಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು