Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:29 - ಕನ್ನಡ ಸಮಕಾಲಿಕ ಅನುವಾದ

29 “ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ, “ ‘ಸೂರ್ಯನು ಕತ್ತಲಾಗುವನು; ಚಂದ್ರನು ಕಾಂತಿಹೀನನಾಗುವನು. ಆಕಾಶದಿಂದ ನಕ್ಷತ್ರಗಳು ಬೀಳುವವು; ಮತ್ತು ಆಕಾಶದ ಶಕ್ತಿಗಳು ಕದಲುವವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆ ದಿನಗಳ ಸಂಕಟವು ತೀರಿದಕೂಡಲೆ ಸೂರ್ಯನು ಕತ್ತಲಾಗಿಹೋಗುವನು, ಚಂದ್ರನು ಬೆಳಕುಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಆ ದಿನಗಳ ಸಂಕಟವು ತೀರಿದ ಕೂಡಲೇ, ‘ಸೂರ್ಯನು ಕತ್ತಲಾಗುವನು. ಚಂದ್ರನು ಕಾಂತಿಹೀನನಾಗುವನು. ನಕ್ಷತ್ರಗಳು ಆಕಾಶದಿಂದ ಕಳಚಿಬೀಳುವವು. ಆಕಾಶಮಂಡಲವು ಕಂಪಿಸುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತ್ಯಾ ದಿಸಾಂಚೊ ಕಸ್ಟ್ ಸರಲ್ಲ್ಯಾ ತನ್ನಾಚ್, ದಿಸಾ ವರ್‍ತಿ ಕಾಳೊಕ್ ಪಡ್ತಾ, ಅನಿ ಚಂದ್ರಾಮ್ ಉಡ್ವೊಡ್ ದಿ ನಾ, ಚಿಕಿಯಾ ಮಳ್ಬಾ ವೈನಾ ಖಾಲ್ತಿ ಪಡ್ತಾತ್, ಅನಿ ಮಳ್ಬಾ ವೈಲಿ ಸಗ್ಳಿ ಸಾಮಾನಾ ಹಾಲ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:29
21 ತಿಳಿವುಗಳ ಹೋಲಿಕೆ  

“ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ, “ಆ ದಿನದಲ್ಲಿ,” ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡುತ್ತೇನೆ.


ಸೂರ್ಯ, ಚಂದ್ರರು ಕಪ್ಪಾಗುವುವು. ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವುವು.


ಏಕೆಂದರೆ, ಆಕಾಶದ ನಕ್ಷತ್ರಗಳು ಮತ್ತು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವುದಿಲ್ಲ.


ಆಮೇಲೆ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಹಿರಿಯರ ಮುಂದೆ ಮಹಿಮೆಯಿಂದ ಆಳುವಾಗ, ಚಂದ್ರನಿಗೆ ಅವಮಾನವಾಗುವುದು, ಸೂರ್ಯನು ನಾಚಿಕೆ ಪಡುವನು.


ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವುದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿ ಎಲೆ ಒಣಗಿ, ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಸುಕ್ಕುಗಟ್ಟಿದ ಅಂಜೂರ ಹಣ್ಣುಗಳು ಉದುರುವಂತೆ ತಾರಾಮಂಡಲವೆಲ್ಲಾ ಬಾಡಿ ಬೀಳುವದು.


ನಾಲ್ಕನೆಯ ದೇವದೂತನು ತನ್ನ ತುತೂರಿಯನ್ನು ಊದಿದನು, ಆಗ ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ ಮೂರನೇ ಭಾಗವು ಕತ್ತಲಾಯಿತು. ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ, ಮೂರನೇ ಭಾಗವು ಕತ್ತಲಾಯಿತು. ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಹೋಯಿತು. ರಾತ್ರಿಯು ಹಾಗೆಯೇ ಆಯಿತು.


ಅವುಗಳ ಮುಂದೆ ಭೂಮಿಯು ನಡುಗುತ್ತದೆ. ಆಕಾಶಗಳು ಅದರುತ್ತವೆ. ಸೂರ್ಯ ಚಂದ್ರರು ಕಪ್ಪಾಗುತ್ತವೆ. ನಕ್ಷತ್ರಗಳು ಇನ್ನು ಮುಂದೆ ಹೊಳೆಯುವುದಿಲ್ಲ.


ಹೀಗೆ ಯೆಹೋವ ದೇವರ ದಿವಸವು ಬೆಳಕಲ್ಲ, ಕತ್ತಲೆಯೇ. ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲೆಯೇ.


ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.


ಇವೆಲ್ಲವೂ ಪ್ರಸವವೇದನೆಯ ಪ್ರಾರಂಭ ಮಾತ್ರ.


ಸೂರ್ಯ ಚಂದ್ರ ನಕ್ಷತ್ರಗಳೂ ನಿನಗೆ ಮೊಬ್ಬಾಗಿ, ಮಳೆಯ ಮೋಡಗಳು ಮತ್ತೆ ಬರುವುದಕ್ಕಿಂತ ಮೊದಲು ದೇವರನ್ನು ಸ್ಮರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು