Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:31 - ಕನ್ನಡ ಸಮಕಾಲಿಕ ಅನುವಾದ

31 ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು. ಆಗ ಅವರು ಆತನಿಂದ ಆಯ್ಕೆಯಾದವರನ್ನು ನಾಲ್ಕು ದಿಕ್ಕುಗಳಿಂದಲೂ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ತುತೂರಿಯ ಘೋಷಣೆಯೊಂದಿಗೆ ಆತನು ತನ್ನ ದೂತರನ್ನು ನಾಲ್ಕು ದಿಕ್ಕುಗಳಿಗೂ ಕಳುಹಿಸುವನು. ಅವರು ಹೋಗಿ ಆತನಿಂದ ಆಯ್ಕೆಯಾದ ಜನರನ್ನು ವಿಶ್ವದ ಅಷ್ಟದಿಕ್ಕುಗಳಿಂದ ಒಟ್ಟುಗೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮತ್ತು ಆತನು ತುತೂರಿಯ ಮಹಾ ಶಬ್ದದಿಂದ ತನ್ನ ದೂತರನ್ನು ಕಳುಹಿಸುವನು. ಅವರು ಆತನು ಆದುಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕೂ ದಿಕ್ಕುಗಳಿಂದ ಒಟ್ಟುಗೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಮೊಟ್ಯಾ ಪಂವ್ಯಾಚ್ಯಾ ವಾಜ್ಪಾಚ್ಯಾ ವಾಂಗ್ಡಾಚ್ ತೊ ಅಪ್ನಾಚ್ಯಾ ದುತಾಕ್ನಿ ಧಾಡುನ್ ದಿತಾ, ಅನಿ ತೆನಿ ಜಗಾಚ್ಯಾ ಚಾರಿ ದಿಕ್ಕಾಕ್ನಿ ಪತರ್ ಜಾವ್ನ್ ಮಾನ್ಸಾಚ್ಯಾ ಲೆಕಾನ್ ಎಚುನ್ ಕಾಡಲ್ಲ್ಯಾಕ್ನಿ ಗೊಳಾ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:31
44 ತಿಳಿವುಗಳ ಹೋಲಿಕೆ  

ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು.


ನಾನು ನನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ನಾನು ಆರಿಸಿಕೊಂಡವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವೆನು.


ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.


ಆದರೆ ಒಂದು ಕ್ಷಣದಲ್ಲೇ, ರೆಪ್ಪೆ ಬಡಿಯುವಷ್ಟರಲ್ಲಿ, ಕಡೇ ತುತೂರಿಯು ಊದಲಾಗುವುದು. ತುತೂರಿ ಧ್ವನಿಯಾಗುವಾಗ, ಸತ್ತವರು ಅಮರತ್ವಪಡೆದು ಎಬ್ಬಿಸಲಾಗುವರು, ನಾವು ರೂಪಾಂತರವಾಗುವೆವು.


ಜನಾಂಗಗಳಿಗೆ ಗುರುತಾಗಿ ಧ್ವಜವನ್ನೆತ್ತಿ ಇಸ್ರಾಯೇಲಿನಿಂದ ತಳ್ಳಿಬಿಟ್ಟವರನ್ನು ಕೂಡಿಸುವನು. ಯೆಹೂದದಿಂದ ಚದರಿದವರನ್ನು ಭೂಮಿಯ ನಾಲ್ಕು ಕಡೆಗಳಿಂದ ಒಟ್ಟುಗೂಡಿಸುವನು.


ಮನುಷ್ಯಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಪಾಪಕ್ಕೆ ಆತಂಕವಾದ ಎಲ್ಲವನ್ನೂ, ಕೇಡುಮಾಡುವ ಎಲ್ಲರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ,


ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಬರುವಿಕೆಯನ್ನೂ ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನೂ ಕುರಿತು ನಾವು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:


ಆ ರಹಸ್ಯವೋ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕಾಲವು ಪರಿಪೂರ್ಣಗೊಂಡಾಗ ಕ್ರಿಸ್ತನಲ್ಲಿ ಒಂದುಗೂಡಿಸುವುದಾಗಿದೆ.


ಚದುರಿರುವ ದೇವರ ಮಕ್ಕಳನ್ನು ಒಂದಾಗಿ ಕೂಡಿಸುವುದಕ್ಕಾಗಿಯೂ ಯೇಸು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.


“ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು.


“ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿರಿ, ರಕ್ಷಣೆಯನ್ನು ಪಡೆಯಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


‘ನಾನು ಒಪ್ಪಿಸಿಬಿಡು,’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ,’ ಎಂದು ದಕ್ಷಿಣದಿಕ್ಕಿಗೂ ಹೇಳಿ, ದೂರದಲ್ಲಿರುವ ನನ್ನ ಪುತ್ರರನ್ನೂ, ದಿಗಂತಗಳಲ್ಲಿರುವ ನನ್ನ ಪುತ್ರಿಯರನ್ನೂ,


ಲೋಕದಲ್ಲಿರುವ ಎಲ್ಲರೂ ಎಚ್ಚರವಾಗಿ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು; ಜನಾಂಗಗಳ ಕುಟುಂಬಗಳೆಲ್ಲಾ ದೇವರ ಮುಂದೆ ಅಡ್ಡಬೀಳುವವು.


“ಎಲೈ, ನೀವು ಹೊರಗೆ ಬಂದು ಉತ್ತರ ದೇಶದಿಂದ ಓಡಿಹೋಗಿರಿ. ಏಕೆಂದರೆ ಆಕಾಶದ ನಾಲ್ಕು ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು. ಅವರೆಲ್ಲರು ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ. ನಿನ್ನ ಪುತ್ರರು ದೂರದಿಂದ ಬರುವರು, ನಿನ್ನ ಪುತ್ರಿಯರು ಕಂಕುಳಿನಲ್ಲಿ ಕುಳಿತು ಬರುವರು.


ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವ ದೇವರು ಹೇಳುವುದೇನೆಂದರೆ,” ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವೆ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿಕೊಳ್ಳುವೆ.


ಯೆಹೋವ ದೇವರು ಮತ್ತು ಅವರ ರೋಷಕ್ಕೆ ಆಯುಧಗಳಾದವರು ದೂರದೇಶದಿಂದ ಎಂದರೆ, ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾರೆ.


ಇದಾದನಂತರ ನಾಲ್ಕು ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿರುವುದನ್ನು ಕಂಡೆನು. ಅವರು ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ತಡೆಹಿಡಿದಿದ್ದರು.


ಇದಲ್ಲದೆ ಯೆಹೋವ ದೇವರು ಅವರ ಮೇಲೆ ಕಾಣಿಸಿಕೊಳ್ಳುವರು. ಆತನ ಬಾಣಗಳು ಮಿಂಚಿನ ಹಾಗೆ ಹೊರಡುವುವು. ಸಾರ್ವಭೌಮ ಯೆಹೋವ ದೇವರು ತುತೂರಿಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗುವರು.


ನಿಮ್ಮಲ್ಲಿ ಯಾರಾದರೂ ಭೂಮಿಯ ಕಟ್ಟಕಡೆಯವರೆಗೂ ಚದರಿ ಹೋಗಿದ್ದರೂ, ಅಲ್ಲಿಂದ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ಸಹ ಕರೆದುತರುವರು.


ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತೂರಿಗಳನ್ನು ಕೊಡಲಾಗಿತ್ತು.


ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ: “ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ.”


ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


“ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.


ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗುವಿರಿ. ಏಕೆಂದರೆ ಬೆಟ್ಟಗಳ ತಗ್ಗು ಆಚೆಲಿನವರೆಗೂ ಮುಟ್ಟುವುದು. ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ, ನೀವು ಭೂಕಂಪಕ್ಕೆ ಓಡಿ ಹೋದ ಹಾಗೆ, ಓಡಿಹೋಗುವಿರಿ. ನನ್ನ ದೇವರಾದ ಯೆಹೋವ ದೇವರು ಬರುವರು. ನಿಮ್ಮ ಸಂಗಡ ಪರಿಶುದ್ಧರೆಲ್ಲರು ಸಹ ಬರುವರು.


ದಾನಿಯೇಲನು, “ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿಯು ಮಹಾಸಾಗರವನ್ನು ಕಲಕುತ್ತಿದ್ದವು.


ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರಮಾಡಿರಿ.


ಅಮಾವಾಸ್ಯೆಯಲ್ಲಿಯೂ ಉತ್ಸವ ದಿವಸವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ದೇವರು ನಮ್ಮನ್ನು ಆಶೀರ್ವದಿಸುವರು. ಭೂಮಿಯಲ್ಲಿರುವ ಎಲ್ಲರೂ ದೇವರಲ್ಲಿ ಭಯಭಕ್ತಿಯುಳ್ಳವರಾಗಿರುವರು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.


ಎಫ್ರಾಯೀಮಿನೊಳಗಿಂದ ರಥಗಳನ್ನೂ ಯೆರೂಸಲೇಮಿನೊಳಗಿಂದ ಯುದ್ಧದ ಕುದುರೆಗಳನ್ನೂ ತೆಗೆದುಬಿಡುವೆನು. ಯುದ್ಧದ ಬಿಲ್ಲು ಸಹ ಮುರಿದು ಹಾಕಲಾಗುವುದು. ಇತರ ರಾಷ್ಟ್ರಗಳಿಗೆ ಸಮಾಧಾನಕರವಾಗಿರುವುದು. ಆತನ ದೊರೆತನವು ಸಮುದ್ರದಿಂದ ಸಮುದ್ರಕ್ಕೂ, ನದಿಯಿಂದ ಭೂಮಿಯ ಅಂತ್ಯಗಳವರೆಗೂ ಇರುವುದು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯ ಏನೆಂದರೆ: ಆ ಏಳು ನಕ್ಷತ್ರಗಳು, ಆ ಏಳು ಸಭೆಗಳ ಸಂದೇಶಕರು, ಆ ಏಳು ದೀಪಸ್ತಂಭಗಳು, ಆ ಏಳು ಸಭೆಗಳಾಗಿರುತ್ತವೆ.


ಮೂರನೆಯ ದಿನದಲ್ಲಿ ಉದಯವಾದಾಗ, ಬೆಟ್ಟದ ಮೇಲೆ ಗುಡುಗು, ಮಿಂಚು, ದಟ್ಟವಾದ ಮೇಘ ಮತ್ತು ತುತೂರಿಯ ಮಹಾ ಧ್ವನಿ ಉಂಟಾದವು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.


ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿದ ಪೂರ್ವಕಾಲವನ್ನು ವಿಚಾರಿಸಿ ನೋಡಿರಿ. ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ವಿಚಾರಿಸಿರಿ. ಇಂಥ ಅದ್ಭುತಕಾರ್ಯ ಉಂಟಾಯಿತೇ? ಇಲ್ಲವೆ ಇಂಥ ಸುದ್ದಿ ಕೇಳಿದ್ದುಂಟ್ಟೋ?


ದೂತನು ನನಗೆ, “ಇವು ಸ್ವರ್ಗದ ನಾಲ್ಕು ಆತ್ಮಗಳು. ಇವು ಇಡೀ ಜಗತ್ತಿನ ಕಡೆಗೆ ಯೆಹೋವ ದೇವರ ಮುಂದೆ ನಿಂತಲ್ಲಿಂದ ಹೊರಟಿವೆ.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


“ಅಂಜೂರ ಮರದ ದೃಷ್ಟಾಂತದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.


ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು, ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು