Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:37 - ಕನ್ನಡ ಸಮಕಾಲಿಕ ಅನುವಾದ

37 ಆದರೆ ನೋಹನ ದಿವಸಗಳು ಇದ್ದಂತೆಯೇ, ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನೋಹನ ದಿನಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಬರೋಣವು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನೋವನ ಕಾಲದಲ್ಲಿ ಆದಂತೆಯೇ ನರಪುತ್ರನು ಬರುವಾಗಲೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನೋಹನ ದಿವಸಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಪ್ರತ್ಯಕ್ಷತೆಯೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ನೋಹನ ಕಾಲದಲ್ಲಿ ಸಂಭವಿಸಿದಂತೆಯೇ ಮನುಷ್ಯಕುಮಾರನು ಬರುವಾಗಲೂ ಸಂಭವಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ನೊಯೆಚ್ಯಾ ಕಾಲಾತ್ ಕಶೆ ಘಡ್ಲೆ ತಸೆಚ್ ಮಾನ್ಸಾಚೊ ಲೆಕ್ ಯೆತಲ್ಯಾ ಕಾಲಾತ್‍ಬಿ ಘಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:37
14 ತಿಳಿವುಗಳ ಹೋಲಿಕೆ  

ಈ ಜಲದಿಂದ ಆ ಸಮಯದಲ್ಲಿ ಜಗತ್ತು ಪ್ರಳಯದಲ್ಲಿ ನಾಶವಾಯಿತು.


ದೇವರು ಪುರಾತನ ಜಗತ್ತನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಲೋಕದ ಮೇಲೆ ಜಲಪ್ರಳಯವನ್ನು ಬರಮಾಡಿದರು. ಆದರೆ ನೀತಿಯನ್ನು ಸಾರುತ್ತಿದ್ದ ನೋಹನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ರಕ್ಷಿಸಿದರು.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


ಜಲಪ್ರಳಯವು ಬಂದು ಅವರನ್ನು ಕೊಚ್ಚಿಕೊಂಡು ಹೋಗುವವರೆಗೂ ಅವರಿಗೆ ಅದು ತಿಳಿದಿರಲಿಲ್ಲ. ಹಾಗೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.


ಆದರೆ ನೋಹನಿಗೆ ಯೆಹೋವ ದೇವರ ದಯೆ ದೊರಕಿತು.


ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.


ಯೇಸು ಓಲಿವ್ ಗುಡ್ಡದ ಮೇಲೆ ಕುಳಿತುಕೊಂಡಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಈ ಸಂಗತಿಗಳು ಸಂಭವಿಸುವುದು ಯಾವಾಗ? ನಿನ್ನ ಆಗಮನದ ಹಾಗೂ ಲೋಕಾಂತ್ಯದ ಸೂಚನೆ ಏನು? ನಮಗೆ ತಿಳಿಸು,” ಎಂದು ಕೇಳಿದರು.


ಏಕೆಂದರೆ ಮಿಂಚು ಪೂರ್ವದಿಂದ ಮಿನುಗಿ ಪಶ್ಚಿಮದವರೆಗೆ ಹೊಳೆಯುವಂತೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.


“ಆಗ ಮನುಷ್ಯಪುತ್ರನಾದ ನನ್ನ ಸೂಚನೆಯು ಆಕಾಶದಲ್ಲಿ ಕಾಣುವುದು. ಭೂಮಿಯ ಎಲ್ಲಾ ಜನಾಂಗದವರು ಗೋಳಾಡುವರು. ಮನುಷ್ಯಪುತ್ರನಾದ ನಾನು ಆಕಾಶದ ಮೇಘಗಳಲ್ಲಿ, ಶಕ್ತಿಯಿಂದಲೂ ಮಹಾಪ್ರಭಾವದಿಂದಲೂ ಬರುವುದನ್ನು ಅವರು ಕಾಣುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು