Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:6 - ಕನ್ನಡ ಸಮಕಾಲಿಕ ಅನುವಾದ

6 ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ, ಆದರೆ ನೀವು ಕಳವಳಗೊಳ್ಳದಂತೆ ನೋಡಿಕೊಳ್ಳಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದೂ ಅಲ್ಲದೆ, ನೀವು ರಣಕಹಳೆಗಳನ್ನೂ ಸಮರಗಳ ಸುದ್ದಿಯನ್ನೂ ಕೇಳುವಿರಿ. ಆಗ ಕಳವಳಪಡದಂತೆ ಎಚ್ಚರಿಕೆಯಿಂದಿರಿ. ಇವೆಲ್ಲವು ಸಂಭವಿಸಲೇಬೇಕು. ಆದರೆ ಇದಿನ್ನೂ ಕಾಲಾಂತ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಯುದ್ಧಗಳಾಗುವದನ್ನೂ ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳಬೇಕಾಗಿರುವದು. ಕಳವಳಪಡದಂತೆ ನೋಡಿಕೊಳ್ಳಿರಿ; ಯಾಕಂದರೆ ಹಾಗಾಗುವದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತುಮ್ಚ್ಯಾ ಜಗ್ಗೊಳ್ ತುಮ್ಕಾ ಝಗ್ಡ್ಯಾಂಚೊ ಅವಾಜ್ ಆಯ್ಕೊ ಯೆತಾ ಅನಿ ಧುರ್‍ಲ್ಯಾ ಝಗ್ಡ್ಯಾಂಚಿ ಬಾತ್ಮಿಯಾ ತುಮ್ಕಾ ಆಯ್ಕುಕ್ ಗಾವ್ತಾತ್; ಖರೆ ತುಮಿ ಭಿವ್‍ನಕಾಶಿ. ಅಸ್ಲಿ ಸಗ್ಳಿ ಘಡಿತಾ ಘಡುಕುಚ್ ಪಾಜೆ ತೆಚೊ ಅರ್ತ್‍ ಸರ್‍ತೊ ಕಾಲ್ ಯೆಲೊ ಮನುನ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:6
32 ತಿಳಿವುಗಳ ಹೋಲಿಕೆ  

ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ. ಇವುಗಳೆಲ್ಲಾ ಮೊದಲು ಸಂಭವಿಸಬೇಕು. ಆದರೂ ಕೂಡಲೇ ಅಂತ್ಯ ಬರುವುದಿಲ್ಲ,” ಎಂದರು.


“ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ನೀವು ದೇವರನ್ನು ನಂಬಿರಿ; ನನ್ನನ್ನೂ ನಂಬಿರಿ.


ಕ್ರಿಸ್ತ ಯೇಸುವಿನ ದಿನವು ಈಗಾಗಲೇ ಬಂದಿದೆಯೆಂದು ಪ್ರವಾದನೆಯಿಂದಾಗಲಿ, ಪ್ರಸಂಗದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದು ನೀವು ಬೇಗನೆ ಚಂಚಲರಾಗಿ ಕಳವಳಪಡಬೇಡಿರಿ.


ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.


ಅವರಿಗೆ ಅಶುಭದ ಸುದ್ದಿಯ ಭಯ ಇರುವುದಿಲ್ಲ; ಅವರ ಹೃದಯವು ಯೆಹೋವ ದೇವರಲ್ಲಿ ಭರವಸವಿಟ್ಟು ಸ್ಥಿರವಾಗಿರುವುದು.


ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು.


ನೀವು ನಿಮ್ಮ ಸಹನೆಯಿಂದ, ನಿಮ್ಮ ಪ್ರಾಣಗಳನ್ನು ಕಾಪಾಡಿಕೊಳ್ಳುವಿರಿ.


ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ಏಕೆಂದರೆ, ‘ಆತನು ಪಾತಕರಲ್ಲಿ ಒಬ್ಬನಂತೆ ಎಣಿಸಿಕೊಂಡನು,’ ಎಂಬುದಾಗಿ ಪವಿತ್ರ ವೇದದಲ್ಲಿ ಬರೆದಿರುವುದೆಲ್ಲವೂ ನೆರವೇರಬೇಕು ಎಂದು ನಾನು ನಿಮಗೆ ಹೇಳುತ್ತೇನೆ. ಹೌದು, ನನ್ನ ವಿಷಯವಾಗಿ ಬರೆದದ್ದು ನೆರವೇರಲಿದೆ,” ಎಂದರು.


ಹಾಗಾದರೆ ಇವುಗಳು ಹೀಗೆಯೇ ಆಗಬೇಕೆಂಬ ಪವಿತ್ರ ವೇದದ ವಾಕ್ಯಗಳು ನೆರವೇರುವುದು ಹೇಗೆ?” ಎಂದರು.


“ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: “ ‘ಒಂದು ಖಡ್ಗವು, ಒಂದು ಖಡ್ಗವು ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಬಹಳವಾಗಿ ಮಸೆಯಲಾಗಿದೆ. ಥಳಥಳಿಸುತ್ತಾ ನುಂಗುವಹಾಗಿದೆ.


“ಅಯ್ಯೋ, ಯೆಹೋವ ದೇವರ ಖಡ್ಗವೇ, ಎಷ್ಟರವರೆಗೆ ವಿಶ್ರಮಿಸಿಕೊಳ್ಳದೇ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ; ವಿಶ್ರಮಿಸಿಕೋ, ಸುಮ್ಮನಿರು.


ಅವನಿಗೆ, ಈ ಪ್ರಕಾರ ಹೇಳಬೇಕು: ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರು, ಮತ್ತು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.


ಇದನ್ನು ಕೇಳಿ ಹೆರೋದ ರಾಜನು ಮತ್ತು ಯೆರೂಸಲೇಮಿನ ಜನರೆಲ್ಲರು ಕಳವಳಗೊಂಡರು.


ಆಗ ಕೆಂಪು ಬಣ್ಣದ ಬೇರೊಂದು ಕುದುರೆಯು ಹೊರಟು ಬಂದಿತು. ಅದರ ಸವಾರನಿಗೆ ಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವುದಕ್ಕೂ ಅಧಿಕಾರವು ಕೊಡಲಾಗಿತ್ತು. ಅವನಿಗೆ ದೊಡ್ಡ ಕತ್ತಿಯು ಸಹ ಕೊಡಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು