Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:13 - ಕನ್ನಡ ಸಮಕಾಲಿಕ ಅನುವಾದ

13 “ಆದ್ದರಿಂದ ಎಚ್ಚರವಾಗಿರಿ, ಏಕೆಂದರೆ ಮನುಷ್ಯಪುತ್ರನಾದ ನನ್ನ ಬರುವ ದಿನವನ್ನಾಗಲಿ ಗಳಿಗೆಯನ್ನಾಗಲಿ ನೀವು ಅರಿಯದವರಾಗಿದ್ದೀರಿ, ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದಕಾರಣ ಆ ದಿನವಾದರೂ ಗಳಿಗೆಯಾದರೂ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ಮನುಷ್ಯಕುಮಾರನು ಬರುವ ದಿನವಾಗಲಿ ಸಮಯವಾಗಲಿ ನಿಮಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆಚೆಸಾಟ್ನಿ ತುಮಿ ಕನ್ನಾಬಿ ಉಶಾರ್ಕಿತ್ ರ್‍ಹಾವಾ, ಕಸ್ಯಾಕ್ ಮಟ್ಲ್ಯಾರ್ ಮಾನ್ಸಾಚೊ ಲೆಕ್ ಯೆತಲೊ ದಿಸ್ ನಾಹೊಲ್ಯಾರ್ ಎಳ್ ತುಮ್ಕಾ ಗೊತ್ತ್ ನಾ. ಮನುನ್ ಜೆಜುನ್ ಮುಗಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:13
12 ತಿಳಿವುಗಳ ಹೋಲಿಕೆ  

ಆದಕಾರಣ ನಾವು ಇತರರಂತೆ ನಿದ್ರೆ ಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿರೋಣ.


“ಇಗೋ, ನಾನು ಕಳ್ಳನು ಬರುವಂತೆ ಬರುತ್ತೇನೆ. ಬೆತ್ತಲೆಯಾಗಿ ತಿರುಗಾಡಿ, ಜನರಿಂದ ಅವಮಾನಗೊಳ್ಳದಂತೆ ಎಚ್ಚರವಾಗಿದ್ದು ತನ್ನ ವಸ್ತ್ರವನ್ನು ಯಾವನು ಕಾಪಾಡಿಕೊಳ್ಳುತ್ತಾನೋ ಅವನು ಧನ್ಯನು.”


ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ,” ಎಂದರು.


ಎಚ್ಚರವಾಗಿರಿ, ವಿಶ್ವಾಸದಲ್ಲಿ ಸ್ಥಿರವಾಗಿ ನಿಲ್ಲಿರಿ, ಧೈರ್ಯವಾಗಿರಿ, ಬಲಗೊಳ್ಳಿರಿ.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು,


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.


ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು. ಶ್ರಮೆಗಳನ್ನು ತಾಳಿಕೋ. ಸುವಾರ್ತಿಕನ ಕೆಲಸವನ್ನು ಮಾಡು. ನಿನ್ನ ಸೇವೆಯ ಎಲ್ಲಾ ಕರ್ತವ್ಯಗಳನ್ನು ನೆರವೇರಿಸು.


ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.


“ಆದರೆ ಆತನು ಉತ್ತರವಾಗಿ, ‘ನಾನು ನಿಮ್ಮನ್ನು ಅರಿಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ,’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು