Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:16 - ಕನ್ನಡ ಸಮಕಾಲಿಕ ಅನುವಾದ

16 ಐದು ಚಿನ್ನದ ನಾಣ್ಯಗಳನ್ನು ಹೊಂದಿದವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಪಾಂಚ್ ಹಜಾರ್ ಸೊನ್ಯಾಚ್ಯಾ ಪೈಸ್ಯಾಂಚ್ಯಾ ಗಾಲಿಯಾ ಘೆಟಲ್ಲೊ ಗೆಲೊ ಅನಿ ತೆ ಪೈಸೆ ಯಾವಾರಾತ್ ಘಾಟ್ಲ್ಯಾನ್. ಅನಿ ಅನಿ ಪಾಚ್ ಹಜಾರ್ ಸೊನ್ಯಾಚ್ಯಾ ಪೈಸೆ ಖಮ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:16
27 ತಿಳಿವುಗಳ ಹೋಲಿಕೆ  

ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯದಾಗಿ ಪಾಲುಗಾರನಾಗಿರತಕ್ಕದ್ದು.


“ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.


ಆದರೆ ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಯೆಹೋವ ದೇವರಿಗೆ ಪರಿಶುದ್ಧವಾಗುವುದು. ಅವಳ ಆದಾಯವು ಯೆಹೋವ ದೇವರ ಸನ್ನಿಧಾನದಲ್ಲಿ ವಾಸಿಸುವವರೆಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.


ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.


ಅರಸರು ನಿನಗೆ ಸಾಕು ತಂದೆಗಳು. ಅವರ ರಾಣಿಯರು ನಿನಗೆ ದಾದಿಗಳಾಗುವರು. ಅವರು ಭೂಮಿಯ ಕಡೆಗೆ ತಮ್ಮ ಮುಖವನ್ನು ಬಾಗಿಸಿ, ಅಡ್ಡಬಿದ್ದು, ನಿನ್ನ ಪಾದದ ಧೂಳನ್ನು ನೆಕ್ಕುವರು. ಆಗ ನಾನೇ ಯೆಹೋವ ಎಂದು ನೀನು ತಿಳಿದುಕೊಳ್ಳುವೆ. ಏಕೆಂದರೆ ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿಕೆಗೆ ಈಡಾಗರು.”


ಆಗ ಅರಸನಾದ ದಾವೀದನು ಎದ್ದು ನಿಂತು, “ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ. ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ನಿಮಿತ್ತವಾಗಿಯೂ, ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಗೆ ಆಲಯವನ್ನು ನಾನು ಕಟ್ಟಿಸಲು ಮನಸ್ಸು ಮಾಡಿ, ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.


ಅವನು ಲೆಕ್ಕ ತೆಗೆದುಕೊಳ್ಳಲು ಪ್ರಾರಂಭಿಸಿದಾಗ, ಹತ್ತು ಕೋಟಿ ಚಿನ್ನದ ನಾಣ್ಯಗಳ ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.


ಅದೇ ಪ್ರಕಾರ, ಎರಡು ಚಿನ್ನದ ನಾಣ್ಯಗಳನ್ನು ಹೊಂದಿದವನು ಸಹ ಇನ್ನು ಬೇರೆ ಎರಡು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.


ಆ ವ್ಯಕ್ತಿ ತನ್ನ ಹತ್ತು ಕೆಲಸಗಾರರನ್ನು ಕರೆದು, ಅವರಿಗೆ ಹತ್ತು ನಾಣ್ಯಗಳನ್ನು ಒಪ್ಪಿಸಿ, ‘ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರಿ,’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು