Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:31 - ಕನ್ನಡ ಸಮಕಾಲಿಕ ಅನುವಾದ

31 “ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಎಲ್ಲಾ ದೇವದೂತರೊಂದಿಗೆ ಕೂಡಿಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕೂತುಕೊಳ್ಳುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಮತ್ತೆ ಬರುವಾಗ ರಾಜನಾಗಿ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಮಾನ್ಸಾಚೊ ಲೆಕ್ ರಾಜಾಚಿ ಪದ್ವಿ ಘೆವ್ನ್ ಯೆತಾನಾ, ಸಗ್ಳಿ ದೆವಾಚಿ ದುತಾ ತೆಚ್ಯಾ ವಾಂಗ್ಡಾ ರ್‍ಹಾತ್ಯಾತ್ ಅನಿ ತೊ ಅಪ್ನಾಚ್ಯಾ ಮಹಿಮೆಚ್ಯಾ ಸಿವಾಸನಾ ವರ್‍ತಿ ಬಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:31
24 ತಿಳಿವುಗಳ ಹೋಲಿಕೆ  

“ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.


ಯೇಸು ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸಮಸ್ತವೂ ನವೀಕರಣವಾಗುವಾಗ, ಮನುಷ್ಯಪುತ್ರನಾದ ನಾನು ನನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಂಡಿರಲು, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯತೀರಿಸುವಿರಿ.


ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.


ಯಾರಾದರೂ ವ್ಯಭಿಚಾರದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯವಾಗಿ ನಾಚಿಕೊಳ್ಳುವರೋ ಅವರ ವಿಷಯದಲ್ಲಿ ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿಕೊಳ್ಳುವೆನು,” ಎಂದು ಹೇಳಿದರು.


ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ, “ಇಗೋ, ಕರ್ತದೇವರು ತಮ್ಮ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು


ಯೆಹೋವ ದೇವರು ಸದಾ ಆಳುವವರು; ಅವರು ನ್ಯಾಯಕ್ಕಾಗಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ.


ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು.


ಯಾರಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವುದಾದರೆ, ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯೊಡನೆಯೂ ಪರಿಶುದ್ಧ ದೂತರೊಡನೆಯೂ ಬರುವಾಗ, ಅವರ ವಿಷಯದಲ್ಲಿ ನಾಚಿಕೊಳ್ಳುವೆನು.


ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗುವಿರಿ. ಏಕೆಂದರೆ ಬೆಟ್ಟಗಳ ತಗ್ಗು ಆಚೆಲಿನವರೆಗೂ ಮುಟ್ಟುವುದು. ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ, ನೀವು ಭೂಕಂಪಕ್ಕೆ ಓಡಿ ಹೋದ ಹಾಗೆ, ಓಡಿಹೋಗುವಿರಿ. ನನ್ನ ದೇವರಾದ ಯೆಹೋವ ದೇವರು ಬರುವರು. ನಿಮ್ಮ ಸಂಗಡ ಪರಿಶುದ್ಧರೆಲ್ಲರು ಸಹ ಬರುವರು.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನು ಕಂಡೆನು. ಅದರ ಮೇಲೆ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ಓಡಿಹೋಗಿ ಸ್ಥಳ ಕಾಣಿಸದಂತಾದವು.


ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಅದಕ್ಕೆ ಯೇಸು, “ಹೌದು ನಾನೇ, ಇದಲ್ಲದೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ಕಾಣುವಿರಿ,” ಎಂದರು.


ಅದಕ್ಕೆ ಯೇಸು ಅವನಿಗೆ, “ನೀನೇ ಹೇಳಿದ್ದೀ; ಆದರೂ ಇನ್ನು ಮೇಲೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀವು ಕಾಣುವಿರಿ ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: “ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿಮ್ಮ ರಾಜದಂಡವಾಗಿದೆ.


ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು.


“ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು,” ಎಂದು ಹೇಳಿದರು.


ಆದರೆ ಇಂದಿನಿಂದ ಮನುಷ್ಯಪುತ್ರನಾದ ನಾನು ಸರ್ವಶಕ್ತರಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡಿರುವೆನು,” ಎಂದರು.


“ಮಧ್ಯರಾತ್ರಿಯಲ್ಲಿ, ‘ನೋಡಿರಿ, ಮದುಮಗನು ಬರುತ್ತಿದ್ದಾನೆ, ಅವನನ್ನು ಎದುರುಗೊಳ್ಳುವುದಕ್ಕಾಗಿ ಹೊರಡಿರಿ,’ ಎಂಬ ಕೂಗಾಯಿತು.


ಯೆಹೋವ ದೇವರ ಸಂಗಡ ವಿವಾದಿಸುವವರು ಚದರಿಹೋಗುವರು. ಅವರು ಆಕಾಶದಲ್ಲಿಂದ ಅವರ ಮೇಲೆ ಗುಡುಗುವರು, ಯೆಹೋವ ದೇವರು ಲೋಕಾಂತ್ಯದವರೆಗೂ ನ್ಯಾಯತೀರಿಸುವರು. “ತಮ್ಮ ಅರಸನಿಗೆ ಬಲ ಕೊಡುವರು. ತಮ್ಮ ಅಭಿಷಿಕ್ತನ ಕೊಂಬನ್ನು ಉನ್ನತ ಮಾಡುವರು.”


ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!


ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು