Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:37 - ಕನ್ನಡ ಸಮಕಾಲಿಕ ಅನುವಾದ

37 “ಆಗ ಆ ನೀತಿವಂತರು ಉತ್ತರವಾಗಿ ನನಗೆ, ‘ಕರ್ತನೇ, ನೀನು ಯಾವಾಗ ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವುದಕ್ಕೆ ಕೊಟ್ಟೆವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅದಕ್ಕೆ ಆ ಸಜ್ಜನರು, ‘ಸ್ವಾಮೀ, ತಾವು ಯಾವಾಗ ಹಸಿದಿದ್ದನ್ನು ಕಂಡು ನಾವು ಆಹಾರ ಕೊಟ್ಟೆವು? ಬಾಯಾರಿದ್ದನ್ನು ಕಂಡು ಕುಡಿಯಲು ಕೊಟ್ಟೆವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅದಕ್ಕೆ ನೀತಿವಂತರು - ಸ್ವಾಮೀ, ಯಾವಾಗ ನೀನು ಹಸಿದದ್ದನ್ನು ಕಂಡು ನಿನಗೆ ಊಟಕ್ಕೆ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವದಕ್ಕೆ ಕೊಟ್ಟೆವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ಆಗ ಒಳ್ಳೆಯ ಜನರು, ‘ಪ್ರಭುವೇ, ನೀನು ಹಸಿದಿದ್ದನ್ನು ನೋಡಿ ಯಾವಾಗ ನಿನಗೆ ಆಹಾರ ಕೊಟ್ಟೆವು? ನೀನು ಬಾಯಾರಿದ್ದನ್ನು ನೋಡಿ ಯಾವಾಗ ಕುಡಿಯುವುದಕ್ಕೆ ಕೊಟ್ಟೆವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತನ್ನಾ ತ್ಯಾ ಬರ್‍ಯಾ ವಾಟೆನ್ ಚಲಲ್ಲ್ಯಾ ಲೊಕಾನಿ, ಧನಿಯಾ ಅಮಿ ಕನ್ನಾ ತುಕಾ ತಿಯಾ ಭುಕೆನ್ ಹೊತ್ತೆ ಬಗುನ್ ಜೆವಾನ್ ದಿಲಾವ್ ಅನಿ ಸೊಸೆನ್ ಹೊತ್ತೆ ಬಗುನ್ ಫಿವ್ಕ್ ದಿಲಾವ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:37
9 ತಿಳಿವುಗಳ ಹೋಲಿಕೆ  

ಆದರೆ ನೀನು ದಾನಧರ್ಮ ಮಾಡುವಾಗ, ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೆ ತಿಳಿಯದಿರಲಿ.


“ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ.


ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.


ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


ಯೆಹೋವ ದೇವರ ಭಯವೇ ಜ್ಞಾನವನ್ನು ಕಲಿಸುತ್ತದೆ. ನಮ್ರತೆ ಗೌರವಕ್ಕೆ ಮೊದಲು ಬರುತ್ತದೆ.


ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು, ಅವರು ತೃಪ್ತಿಹೊಂದುವರು.


ನಾನು ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿದಿರಿ. ನಾನು ಅಸ್ವಸ್ಥನಾಗಿದ್ದೆನು, ನೀವು ನನ್ನನ್ನು ಉಪಚರಿಸಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ,’ ಎಂದು ಹೇಳುವೆನು.


ನೀನು ಪರದೇಶಿಯಾಗಿರುವುದನ್ನು ನಾವು ಯಾವಾಗ ಕಂಡು ನಿನಗೆ ಆಶ್ರಯ ಕೊಟ್ಟೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು