Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:2 - ಕನ್ನಡ ಸಮಕಾಲಿಕ ಅನುವಾದ

2 “ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಇರುವುದೆಂದು ನೀವು ಬಲ್ಲಿರಿ. ಆಗ ಮನುಷ್ಯಪುತ್ರನಾದ ನನ್ನನ್ನು ಶಿಲುಬೆಗೆ ಹಾಕಲು ಹಿಡಿದುಕೊಡುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿಮಗೆ ಗೊತ್ತಿರುವ ಹಾಗೆ ಪಾಸ್ಕಹಬ್ಬಕ್ಕೆ ಇನ್ನು ಎರಡು ದಿನಗಳಿವೆ. ಆಗ ನರಪುತ್ರನನ್ನು ಶಿಲುಬೆಗೇರಿಸಲು ಹಿಡಿದೊಪ್ಪಿಸುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ಬಲ್ಲಿರಿ; ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿಕೊಡೋಣವಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಾಳಿದ್ದು ಪಸ್ಕಹಬ್ಬವೆಂಬುದು ನಿಮಗೆ ತಿಳಿದಿದೆ. ಅಂದು ಮನುಷ್ಯಕುಮಾರನನ್ನು ಶಿಲುಬೆಗೇರಿಸಲು ವೈರಿಗಳಿಗೆ ಒಪ್ಪಿಸುವರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 “ತುಮ್ಕಾ ಗೊತ್ತ್ ಹೊತ್ತ್ಯಾ ಸರ್ಕೆ ದೊನ್ ದಿಸಾಂಚ್ಯಾ ಮಾನಾ ಪಾಸ್ಕಾಚೊ ಸನ್ ಹಾಯ್ ಅನಿ ಮಾನ್ಸಾಚ್ಯಾ ಲೆಕಾಕ್ ಕುರ್ಸಾರ್ ಮಾರುಕ್ ಮನುನ್ ಧರುನ್ ದಿವ್ನ್ ಹೊತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:2
17 ತಿಳಿವುಗಳ ಹೋಲಿಕೆ  

ಅವರನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು. ಏಕೆಂದರೆ ಅನೇಕ ಸಾರಿ ಯೇಸು ತಮ್ಮ ಶಿಷ್ಯರೊಂದಿಗೆ ಅಲ್ಲಿ ಸೇರುತ್ತಿದ್ದರು.


ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು. ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವುದಕ್ಕಾಗಿ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.


ಅವರು ಗಲಿಲಾಯದಲ್ಲಿ ಒಟ್ಟಿಗೆ ಸೇರಿದ್ದಾಗ ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು.


ಪಸ್ಕಹಬ್ಬಕ್ಕೆ ಆರು ದಿನಗಳ ಮುಂಚೆ ಯೇಸು ಬೇಥಾನ್ಯಕ್ಕೆ ಬಂದರು. ಅಲ್ಲಿಯೇ ಯೇಸು ಮರಣದಿಂದ ಎಬ್ಬಿಸಿದ ಲಾಜರನು ಇದ್ದನು.


ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋದರು.


ಆಗ ಯೇಸು ಅವರಿಗೆ, “ನಾನು ಬಾಧೆಯನ್ನು ಅನುಭವಿಸುವುದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕಭೋಜನ ಮಾಡುವುದಕ್ಕೆ ಕುತೂಹಲದಿಂದ ಅಪೇಕ್ಷಿಸಿದ್ದೇನೆ.


ಅವನು, “ನಾನು ನಿರಪರಾಧಿಯ ರಕ್ತಕ್ಕೆ ದ್ರೋಹ ಬಗೆದು ಪಾಪಮಾಡಿದ್ದೇನೆ,” ಎಂದನು. ಅದಕ್ಕೆ ಅವರು, “ನಮಗೇನು? ನೀನೇ ಅದನ್ನು ನೋಡಿಕೋ,” ಎಂದರು.


“ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕಹಬ್ಬದ ಬಲಿಯಲ್ಲಿ ಯಾವುದೂ ಬೆಳಗಿನವರೆಗೆ ಉಳಿಸಬಾರದು.


ಕಾನಾನ್ಯನಾದ ಸೀಮೋನ ಮತ್ತು ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.


ಹೀಗೆ ಯೇಸು ತಾನು ಎಂಥಾ ಮರಣದಿಂದ ಸಾಯಲಿದ್ದೇನೆಂಬುದನ್ನು ಸೂಚಿಸಿ ಹೇಳಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು