Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:24 - ಕನ್ನಡ ಸಮಕಾಲಿಕ ಅನುವಾದ

24 ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ; ಹಾಗೆ ಆತನ ವಿಷಯವಾಗಿ ಬರೆದದೆಯಲ್ಲಾ. ಆದರೆ ಯಾವನು ಮನುಷ್ಯಕುಮಾರನನ್ನು ಹಿಡುಕೊಡುವನೋ ಅವನ ಗತಿಯನ್ನು ಏನು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಅವನಿಗೆ ಒಳ್ಳೇದಾಗಿತ್ತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗಿ ಮರಣ ಹೊಂದುತ್ತಾನೆ. ಆದರೆ ಆತನನ್ನು ಕೊಲ್ಲಲು ಒಪ್ಪಿಸುವವನಿಗೆ ಬಹಳ ಕೇಡಾಗುತ್ತದೆ. ಅವನು ಹುಟ್ಟದೆ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸರ್ಕೆ ಮಾನ್ಸಾಚೊ ಲೆಕ್ ಮರುಕುಚ್ ಮಾಜೆ, ಅನಿ ತೊ ಮರ್‍ತಾಚ್ ಖರೆ ಮಾನ್ಸಾಚ್ಯಾ ಲೆಕಾಕ್ ವಿಶ್ವಾಸ್ ಘಾತ್ ಕರ್‍ತಲ್ಯಾಚಿ ಗತ್ ಕಾಯ್ ಸಾಂಗು! ತೊ ಉಪ್ಜುಕುಚ್ ನಸ್ಲ್ಯಾರ್ ತ್ಯಾ ಮಾನ್ಸಾಕುಚ್ ಬರೆ ಹೊತ್ತೆ!” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:24
34 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ಕ್ರಿಸ್ತನು ಹೀಗೆ ಬಾಧೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವುದು ಅಗತ್ಯವಾಗಿತ್ತೆಂತಲೂ


ಪಾಪಕ್ಕೆ ಕಾರಣವಾಗಿರುವ ಜಗತ್ತಿಗೆ ಕಷ್ಟ! ಇಂಥ ವಿಷಯಗಳು ಅನಿವಾರ್ಯ. ಆದರೆ ಪಾಪಕ್ಕೆ ಕಾರಣವಾಗಿರುವವರ ಗತಿಯನ್ನು ಏನೆಂದು ಹೇಳಲಿ!


ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು,


ನಾನು ಇವರೊಡನೆ ಇದ್ದಾಗ ನೀವು ನನಗೆ ಕೊಟ್ಟ ನಿಮ್ಮ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಪವಿತ್ರ ವಾಕ್ಯವು ನೆರವೇರುವಂತೆ ಆ ನಾಶದ ಮಗನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


ನೇಮಕವಾದ ಪ್ರಕಾರ ಮನುಷ್ಯಪುತ್ರನಾದ ನಾನು ಹೊರಟುಹೋಗುತ್ತೇನೆ; ಆದರೆ ನನಗೆ ದ್ರೋಹಬಗೆಯುವವನಿಗೋ ಎಷ್ಟೋ ಕಷ್ಟ!” ಎಂದು ಹೇಳಿದರು.


ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೇ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದು ಹೇಳಿದರು.


ಹಾಗಾದರೆ ಇವುಗಳು ಹೀಗೆಯೇ ಆಗಬೇಕೆಂಬ ಪವಿತ್ರ ವೇದದ ವಾಕ್ಯಗಳು ನೆರವೇರುವುದು ಹೇಗೆ?” ಎಂದರು.


ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.


ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನೂ ಸರಿಪಡಿಸುತ್ತಾನೆಂಬ ಮಾತು ನಿಜವೇ. ಆದರೆ ಮನುಷ್ಯಪುತ್ರನಾದ ನಾನು ಬಹಳ ಯಾತನೆಗಳನ್ನು ಅನುಭವಿಸಿ ತಿರಸ್ಕರಿಸಲಾಗಬೇಕೆಂದು ನನ್ನ ವಿಷಯವಾಗಿ ಬರೆದಿರುವುದು ಹೇಗೆ?


ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.


“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.


ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.


ಮರಣ ನನ್ನ ವೈರಿಗಳನ್ನು ತಟ್ಟನೆ ಹಿಡಿಯಲಿ. ಜೀವಸಹಿತ ಪಾತಾಳಕ್ಕೆ ಅವರು ಇಳಿಯಲಿ, ಅವರ ಮನೆಯಲ್ಲಿ ದುಷ್ಟತನವು ಇದೆ.


ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.


ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.


ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.


ಇದಾದ ಮೇಲೆ ಯೇಸು ಈಗ ಎಲ್ಲವೂ ಪೂರ್ತಿಯಾಗಿದೆಯೆಂದು ತಿಳಿದು, ಪವಿತ್ರ ವೇದದ ವಾಕ್ಯವು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದರು.


ಆದ್ದರಿಂದ ಅವರು, “ನಾವು ಅದನ್ನು ಹರಿಯುವುದು ಬೇಡ. ಆದರೆ ಅದು ಯಾರಿಗಾಗುವುದೋ ಎಂದು ನೋಡುವುದಕ್ಕಾಗಿ ಚೀಟು ಹಾಕಿಕೊಳ್ಳೋಣ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಹೀಗೆ, “ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿಕೊಂಡರು. ನನ್ನ ಒಳ ಅಂಗಿಗಾಗಿ ಚೀಟುಹಾಕಿದರು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆ, ಸೈನಿಕರು ಚೀಟುಹಾಕಿ ಪಾಲುಮಾಡಿಕೊಂಡರು.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಆಗ ಯೇಸು ಅವರಿಗೆ, “ನೀವೆಲ್ಲರೂ ಈ ರಾತ್ರಿ ನನ್ನನ್ನು ಬಿಟ್ಟು ಓಡಿಹೋಗುವಿರಿ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ಏಕೆಂದರೆ ನಾನು ಕುರುಬನನ್ನು ಹೊಡೆಯುವೆನು, ಮಂದೆಯ ಕುರಿಗಳು ಚದರಿಹೋಗುವುವು,’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು