Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:25 - ಕನ್ನಡ ಸಮಕಾಲಿಕ ಅನುವಾದ

25 ಆಗ ಯೇಸುವನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ಅವನು ನಾನಲ್ಲವಲ್ಲಾ?” ಎಂದನು. “ನೀನೇ ಹೇಳಿದ್ದೀ,” ಎಂದು ಯೇಸು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ನಾನೋ?” ಎಂದು ಕೇಳಲು ಯೇಸು ಅವನಿಗೆ, “ನೀನೇ ಹಾಗೆ ಹೇಳಿದ್ದೀ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಗುರುದ್ರೋಹಿಯಾದ ಯೂದನು ಆಗ, “ಗುರುವೇ, ಅವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಅದು ನಿನ್ನ ಬಾಯಿಂದಲೇ ಬಂದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಆತನನ್ನು ಹಿಡುಕೊಡಬೆಕೆಂದಿದ್ದ ಯೂದನು - ಗುರುವೇ, ನಾನಲ್ಲವಲ್ಲ? ಅನ್ನಲಾಗಿ ಯೇಸು ಅವನಿಗೆ - ನೀನೇ ಹೇಳಿದ್ದೀ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ, ಯೇಸುವನ್ನು ಆತನ ಶತ್ರುಗಳಿಗೆ ಒಪ್ಪಿಸಿಕೊಡಲಿದ್ದ ಯೂದನು, “ಗುರುವೇ, ನಿನಗೆ ವಿರೋಧವಾಗಿರುವವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಹೌದು, ಅವನು ನೀನೇ?” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ವಿಶ್ವಾಸ್ ಘಾತ್ ಕರ್‍ತಲೊ ಜುದಾಸ್ ಬೊಲುಲಾಲೊ ಅನಿ “ಗುರುಜಿ, ಖರೆಬಿ ಮಿಯಾ ತರ್ ನ್ಹಯ್, ನ್ಹಯ್ ತೊ?” ಮನುನ್ ಜೆಜುಕ್ ಇಚಾರ್‍ಲ್ಯಾನ್. ತನ್ನಾ ಜೆಜುನ್, “ತಿಯಾ ಸಾಂಗ್ಲೆ ತಸೆಚ್.” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:25
11 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು ಅವನಿಗೆ, “ನೀನೇ ಹೇಳಿದ್ದೀ; ಆದರೂ ಇನ್ನು ಮೇಲೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀವು ಕಾಣುವಿರಿ ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಯೇಸು ರಾಜ್ಯಪಾಲನ ಮುಂದೆ ನಿಂತಿದ್ದರು. ಆಗ ಅವನು ಯೇಸುವಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ, “ನೀನೇ ಹೇಳುತ್ತಿದ್ದಿ,” ಎಂದರು.


ಪಿಲಾತನು ಯೇಸುವಿಗೆ, “ನೀನು ಅರಸನೋ?” ಎಂದು ಕೇಳಲು, ಯೇಸು, “ನಾನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿ, ಇದಕ್ಕಾಗಿಯೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸೇರಿದ ಎಲ್ಲರೂ ನನ್ನ ಸ್ವರವನ್ನು ಕೇಳುತ್ತಾರೆ,” ಎಂದರು.


ಆಗ ಅವರೆಲ್ಲರೂ, “ಹಾಗಾದರೆ ನೀನು ದೇವರ ಪುತ್ರನೋ?” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ, “ನಾನೇ ಆತನು ಎಂದು ನೀವೇ ಹೇಳುತ್ತಿದ್ದೀರಿ,” ಎಂದು ಉತ್ತರಕೊಟ್ಟರು.


ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, “ಗುರುವೇ, ನಮಸ್ಕಾರ,” ಎಂದು ಹೇಳಿ ಅವರಿಗೆ ಮುದ್ದಿಟ್ಟನು.


ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ, ‘ಬೋಧಕರೇ,’ ಎಂದು ಕರೆಯಿಸಿಕೊಳ್ಳಲು ಅವರು ಇಚ್ಛಿಸುತ್ತಾರೆ.


“ಜಾರಸ್ತ್ರೀಯ ನಡತೆಯು ಹೀಗಿದೆ: ಅವಳು ತಿಂದು, ತನ್ನ ಬಾಯನ್ನು ಒರೆಸಿಕೊಂಡು ‘ನಾನು ಯಾವುದೇ ತಪ್ಪು ಮಾಡಿಲ್ಲ,’ ಎಂದು ಹೇಳುತ್ತಾಳೆ.


ಆಗ ಗೇಹಜಿಯು ಒಳಗೆ ಪ್ರವೇಶಿಸಿ, ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದನು. ಅದಕ್ಕೆ ಗೇಹಜಿಯು, “ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ,” ಎಂದನು.


“ಆದರೆ ನೀವು, ‘ಬೋಧಕರು,’ ಎಂದು ಕರೆಯಿಸಿಕೊಳ್ಳಬೇಡಿರಿ. ಏಕೆಂದರೆ ನಿಮಗಿರುವ ಬೋಧಕರು ಒಬ್ಬರೇ ನೀವೆಲ್ಲರೂ ಸಹೋದರರು.


ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದ ಇಸ್ಕರಿಯೋತ ಎಂಬುವನು ಮುಖ್ಯಯಾಜಕರ ಬಳಿಗೆ ಹೋಗಿ,


ಆ ಸಮಯದಲ್ಲಿ ಶಿಷ್ಯರು, “ಗುರುವೇ ಊಟಮಾಡಿರಿ,” ಎಂದು ಯೇಸುವನ್ನು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು