Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:33 - ಕನ್ನಡ ಸಮಕಾಲಿಕ ಅನುವಾದ

33 ಆಗ ಪೇತ್ರನು ಯೇಸುವಿಗೆ, “ಎಲ್ಲರೂ ನಿಮ್ಮನ್ನು ಬಿಟ್ಟು ಹೋದರೂ ನಾನು ನಿಮ್ಮನ್ನು ಬಿಟ್ಟು ಹೋಗುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದರೆ ಪೇತ್ರನು ಆತನಿಗೆ, “ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇದನ್ನು ಕೇಳಿದ ಪೇತ್ರನು, “ಎಲ್ಲರು ತಮ್ಮಲ್ಲಿ ವಿಶ್ವಾಸಕಳೆದುಕೊಂಡು ಹಿಮ್ಮೆಟ್ಟಿದರೂ ನಾನು ಮಾತ್ರ ಎಂದಿಗೂ ಹಾಗೆ ಮಾಡುವುದಿಲ್ಲ,” ಎಂದು ಸಾರಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಪೇತ್ರನು ಆತನಿಗೆ - ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಎಂದಿಗೂ ಹಿಂಜರಿಯುವದಿಲ್ಲ ಎಂದು ಉತ್ತರಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಪೇತ್ರನು, “ಉಳಿದ ಶಿಷ್ಯರೆಲ್ಲರೂ ನಿನ್ನ ದೆಸೆಯಿಂದ ತಮ್ಮ ವಿಶ್ವಾಸವನ್ನು ಕಳೆದುಕೊಳ್ಳಬಹುದು. ಆದರೆ ನಾನು ಮಾತ್ರ ಹಾಗೆ ಮಾಡುವುದಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತನ್ನಾ ಪೆದ್ರು ಜೆಜುಕ್, “ಸಗ್ಳೆ ಜಾನಾ ತುಕಾ ಸೊಡುನ್ ಗೆಲ್ಯಾರ್‍ಬಿ, ಮಿಯಾ ತರ್ ತುಕಾ ಸೊಡುನ್ ಜಾಯ್ನಾ.” ಮನುನ್ ಸಾಂಗುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:33
15 ತಿಳಿವುಗಳ ಹೋಲಿಕೆ  

ಆದರೆ ಅವನು ಯೇಸುವಿಗೆ, “ಕರ್ತದೇವರೇ, ನಾನು ನಿಮ್ಮ ಜೊತೆಯಲ್ಲಿ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ.


ಒಬ್ಬರಿಗೊಬ್ಬರು ಸಹೋದರ ಪ್ರೀತಿಯಲ್ಲಿ ಸಮರ್ಪಿತರಾಗಿರಿ. ಗೌರವಿಸುವುದರಲ್ಲಿ ಒಬ್ಬರಿಗೊಬ್ಬರು ಮುಂದಾಗಿರಿ.


ಪೇತ್ರನು ಯೇಸುವಿಗೆ, “ಎಲ್ಲರೂ ನಿಮ್ಮನ್ನು ಬಿಟ್ಟು ಹೋದರೂ ನಾನು ನಿಮ್ಮನ್ನು ಬಿಟ್ಟು ಹೋಗುವುದಿಲ್ಲ,” ಎಂದು ಹೇಳಿದನು.


ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು?


ಅನೇಕರಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ಪ್ರಾಮಾಣಿಕತೆಯನ್ನು ಸಾರುವನು; ಆದರೆ ನಂಬಿಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?


ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿಮ್ಮ ದಾರಿಯಲ್ಲಿ ಸ್ಥಿರಪಡಿಸಿಕೊಂಡಿದ್ದೇನೆ.


ಅವರು ಉಪಹಾರ ಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ, “ಯೋಹಾನನ ಮಗ ಸೀಮೋನನೇ, ನೀನು ಇವರಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಯೇಸುವಿಗೆ, “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ,” ಎಂದನು. ಅದಕ್ಕೆ ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದು ಹೇಳಿದರು.


ಆದರೆ ನಾನು ಎದ್ದ ಮೇಲೆ, ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗುವೆನು,” ಎಂದು ಹೇಳಿದರು.


ಯೇಸು ಅವನಿಗೆ, “ಈ ರಾತ್ರಿಯಲ್ಲಿ ಹುಂಜ ಕೂಗುವುದಕ್ಕಿಂತ ಮುಂಚೆ, ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು