Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:37 - ಕನ್ನಡ ಸಮಕಾಲಿಕ ಅನುವಾದ

37 ಯೇಸು ತಮ್ಮ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಪುತ್ರರನ್ನೂ ಕರೆದುಕೊಂಡು ಹೋಗಿ, ದುಃಖಿಸುವುದಕ್ಕೂ ಬಹು ವ್ಯಥೆಪಡುವುದಕ್ಕೂ ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ಕರೆದುಕೊಂಡು ಮುಂದಕ್ಕೆ ಹೋಗಿ ದುಃಖಪಟ್ಟು ಮನಗುಂದಿದವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಬಳಿಕ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ತಮ್ಮೊಂದಿಗೆ ಕರೆದುಕೊಂಡು ಮುಂದಕ್ಕೆಹೋದರು. ಅಲ್ಲಿ ಸ್ವಾಮಿ ಚಿಂತಾಕ್ರಾಂತರಾದರು, ದುಃಖಭರಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಪೇತ್ರನನ್ನೂ ಜೆಬೆದಾಯನ ಇಬ್ಬರು ಮಕ್ಕಳನ್ನೂ ಕರಕೊಂಡು ಹೋಗಿ ದುಃಖಪಟ್ಟು ಮನಗುಂದಿದವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೇಸುವು ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ಆಗ ಯೇಸು ಬಹಳ ದುಃಖದಿಂದ ಮನಗುಂದಿದವನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಪೆದ್ರುಕ್ ಅನಿ ಜೆಬೆದೆವಾಚ್ಯಾ ದೊಗ್ಯಾ ಲೆಕಾಕ್ನಿ ತೆನಿ ಅಪ್ನಾಚ್ಯಾ ವಾಂಗ್ಡಾ ಬಲ್ವುನ್ ಘೆಟ್ಲ್ಯಾನ್. ದುಕ್ ಅನಿ ವಳ್ವಳೊ ತೆಚ್ಯಾ ಭುತ್ತುರ್ ಭರಲ್ಲೊ ಹೊತ್ತೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:37
8 ತಿಳಿವುಗಳ ಹೋಲಿಕೆ  

ಯೇಸು ಅಲ್ಲಿಂದ ಮುಂದೆ ಹೋಗುತ್ತಿದ್ದಾಗ ಇನ್ನಿಬ್ಬರು ಅಣ್ಣತಮ್ಮಂದಿರನ್ನು ಅಂದರೆ, ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನನನ್ನು ಕಂಡರು. ಅವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಅವರನ್ನೂ ಕರೆದರು.


ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಅವನ ಸಹೋದರ ಯೋಹಾನನನ್ನೂ ಪ್ರತ್ಯೇಕವಾಗಿ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರು.


ಯೇಸು ತಮ್ಮ ಸಂಗಡ ಪೇತ್ರ, ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಹೊರತು ಬೇರೆ ಯಾರನ್ನೂ ಬರುವುದಕ್ಕೆ ಅನುಮತಿಸಲಿಲ್ಲ.


“ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸಿರಿ’ ಎಂದು ಹೇಳಲೋ? ಇಲ್ಲ. ನಾನು ಈ ಗಳಿಗೆಗಾಗಿಯೇ ಬಂದಿದ್ದೇನಲ್ಲಾ?


ಯೇಸು ವೇದನೆಯಲ್ಲಿದ್ದು ಬಹಳ ಆಸಕ್ತಿಯಿಂದ ಪ್ರಾರ್ಥಿಸಿದರು. ಯೇಸುವಿನ ಬೆವರು ನೆಲಕ್ಕೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳಂತಿದ್ದವು.


ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರ ಸಮೇತ ಯೇಸುವಿನ ಬಳಿಗೆ ಬಂದು, ಅವರ ಮುಂದೆ ಮೊಣಕಾಲೂರಿ ಬೇಡಿಕೊಂಡಳು.


ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಪೇತ್ರ ಎನಿಸಿಕೊಂಡ ಸೀಮೋನನನ್ನೂ ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು