Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:49 - ಕನ್ನಡ ಸಮಕಾಲಿಕ ಅನುವಾದ

49 ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, “ಗುರುವೇ, ನಮಸ್ಕಾರ,” ಎಂದು ಹೇಳಿ ಅವರಿಗೆ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಕೂಡಲೇ ಅವನು ಯೇಸುವಿನ ಬಳಿಗೆ ಬಂದು, “ಗುರುವೇ ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಅದರಂತೆಯೇ ಅವನು ಯೇಸುಸ್ವಾಮಿಯ ಸಮೀಪಕ್ಕೆ ನೇರವಾಗಿ ಬಂದು, “ಗುರುವೇ, ನಮಸ್ಕಾರ,” ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಕೂಡಲೆ ಅವನು ಯೇಸುವಿನ ಬಳಿಗೆ ಹೋಗಿ - ಗುರುವೇ, ನಮಸ್ಕಾರ ಎಂದು ಹೇಳಿ ಆತನಿಗೆ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಅಂತೆಯೇ ಯೂದನು ಯೇಸುವಿನ ಬಳಿಗೆ ಹೋಗಿ, “ಗುರುವೇ, ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಜುದಾಸ್ ಯೆಲ್ಲೊಚ್ ನಿಟ್ ಜೆಜುಕ್ಡೆ ಗೆಲೊ, ಅನಿ “ಗುರುಜಿ ಶಾಂತಿ ತುಮ್ಕಾ,” ಮಟ್ಲ್ಯಾನ್ ಅನಿ ಜೆಜುಚಿ ಉಪ್ಪಾ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:49
15 ತಿಳಿವುಗಳ ಹೋಲಿಕೆ  

ಪವಿತ್ರವಾದ ಮುದ್ದಿಟ್ಟು ದೇವಜನರೆಲ್ಲರನ್ನೂ ವಂದಿಸಿರಿ.


ಆಗ ಯೇಸುವನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ಅವನು ನಾನಲ್ಲವಲ್ಲಾ?” ಎಂದನು. “ನೀನೇ ಹೇಳಿದ್ದೀ,” ಎಂದು ಯೇಸು ಉತ್ತರಕೊಟ್ಟರು.


“ಯೆಹೂದ್ಯರ ಅರಸನೇ, ನಮಸ್ಕಾರ!” ಎಂದು ಹೇಳಿ ಯೇಸುವಿನ ಕೆನ್ನೆಗೆ ಹೊಡೆದರು.


ನೀನು ನನಗೆ ಮುದ್ದು ಕೊಡಲಿಲ್ಲ. ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವುದನ್ನು ಬಿಡಲಿಲ್ಲ.


ತರುವಾಯ ಅವರು, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ,” ಎಂದರು.


ಸ್ನೇಹಿತನು ಮಾಡುವ ಗಾಯಗಳು ಭರವಸೆಗೆ ಯೋಗ್ಯವಾದದ್ದು; ಆದರೆ ಶತ್ರುವಿನ ಮುದ್ದುಗಳು ಹೇರಳವಾಗಿವೆ.


ಆಗ ಯೋವಾಬನು ಅಮಾಸನಿಗೆ, “ನನ್ನ ಸಹೋದರನೇ, ಕ್ಷೇಮವೋ?” ಎಂದನು. ಯೋವಾಬನು ಅವನನ್ನು ಮುದ್ದಿಟ್ಟುಕೊಳ್ಳಲು ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು.


ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.


ಅವನ ತಂದೆ ಇಸಾಕನು ಅವನಿಗೆ, “ನನ್ನ ಮಗನೇ, ಹತ್ತಿರ ಬಂದು ನನಗೆ ಮುದ್ದಿಡು,” ಎಂದನು.


ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ, ‘ಬೋಧಕರೇ,’ ಎಂದು ಕರೆಯಿಸಿಕೊಳ್ಳಲು ಅವರು ಇಚ್ಛಿಸುತ್ತಾರೆ.


“ಆದರೆ ನೀವು, ‘ಬೋಧಕರು,’ ಎಂದು ಕರೆಯಿಸಿಕೊಳ್ಳಬೇಡಿರಿ. ಏಕೆಂದರೆ ನಿಮಗಿರುವ ಬೋಧಕರು ಒಬ್ಬರೇ ನೀವೆಲ್ಲರೂ ಸಹೋದರರು.


ಯೇಸುವಿಗೆ ದ್ರೋಹಮಾಡುವುದಕ್ಕಿದ್ದವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಯೇಸು; ಆತನನ್ನು ಹಿಡಿಯಿರಿ,” ಎಂದು ಗುರುತು ಹೇಳಿಕೊಟ್ಟಿದ್ದನು.


ಆ ಸಮಯದಲ್ಲಿ ಶಿಷ್ಯರು, “ಗುರುವೇ ಊಟಮಾಡಿರಿ,” ಎಂದು ಯೇಸುವನ್ನು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು