Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:55 - ಕನ್ನಡ ಸಮಕಾಲಿಕ ಅನುವಾದ

55 ಅದೇ ಗಳಿಗೆಯಲ್ಲಿ ಯೇಸು ಜನಸಮೂಹಕ್ಕೆ, “ಒಬ್ಬ ಕಳ್ಳನನ್ನು ಹಿಡಿಯುವುದಕ್ಕೆ ಬರುವಂತೆ ಖಡ್ಗಗಳೊಂದಿಗೆ ದೊಣ್ಣೆಗಳೊಂದಿಗೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ? ನಾನು ದಿನಾಲು ನಿಮ್ಮ ಸಂಗಡ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, “ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಅದೇ ಸಂದರ್ಭದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ಉದ್ದೇಶಿಸಿ, “ದರೋಡೆಗಾರನನ್ನು ಹಿಡಿಯುವುದಕ್ಕೋ ಎಂಬಂತೆ ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ನನ್ನನ್ನು ಬಂಧಿಸಲು ಬರಬೇಕಾಗಿತ್ತೆ? ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ಕುಳಿತು ಬೋಧನೆಮಾಡುತ್ತಾ ಇದ್ದೆ. ಆಗ ನೀವು ನನ್ನನ್ನು ಬಂಧಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಅದೇ ಗಳಿಗೆಯಲ್ಲಿ ಯೇಸು ಗುಂಪುಗುಂಪಾಗಿ ಕೂಡಿದ್ದ ಜನರಿಗೆ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವದಕ್ಕೆ ಬಂದಿರಾ? ನಾನು ದಿನಾಲು ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ನಂತರ ಯೇಸು ಆ ಜನರಿಗೆ, “ನೀವು ಅಪರಾಧಿಯನ್ನು ಬಂಧಿಸುವವರಂತೆ ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡು ಇಲ್ಲಿಗೆ ಬಂದಿದ್ದೀರಿ. ನಾನು ಪ್ರತಿದಿನವೂ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಅಲ್ಲಿ ಬಂಧಿಸಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ತನ್ನಾ ಜೆಜುನ್ ತ್ಯಾ ಲೊಕಾಂಚ್ಯಾ ತಾಂಡ್ಯಾಕ್, “ಎಕ್ ಚೊರಾಕ್ ಧರುಕ್ ಯೆಲ್ಯಾ ಸರ್ಕೆ ಕೊಯ್ತೆ ಅನಿ ಟೊನೆ ಘೆವ್ನ್ ತುಮಿ ಮಾಕಾ ಧರುಕ್ ಯೆಲ್ಯಾಶಿ? ಸದ್ದಿಚ್ ಮಿಯಾ ದೆವಾಚ್ಯಾ ಗುಡಿತ್ ತುಮ್ಚ್ಯಾ ಮದ್ದಿಚ್ ಬಸುನ್ ತುಮ್ಕಾ ಶಿಕ್ವಿ, ತನ್ನಾ ತುಮಿ ಮಾಕಾ ಧರುಕ್‍ನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:55
15 ತಿಳಿವುಗಳ ಹೋಲಿಕೆ  

ಬೆಳಿಗ್ಗೆ ಯೇಸು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಅವರ ಬಳಿಗೆ ಬಂದರು. ಯೇಸು ಕುಳಿತುಕೊಂಡು ಅವರಿಗೆ ಬೋಧಿಸಿದರು.


ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ, “ಕ್ರಿಸ್ತನು ದಾವೀದನ ಪುತ್ರನು ಎಂದು ನಿಯಮ ಬೋಧಕರು ಹೇಳುತ್ತಿರುವುದು ಹೇಗೆ?


ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ. ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ತಂದೆಯನ್ನು ನೀವು ಅರಿತವರಲ್ಲ.


ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾಲಯಕ್ಕೆ ಹೋಗಿ ಬೋಧಿಸಿದರು.


ಅನಂತರ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿದ್ದಾಗ, ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿನ ಬಳಿಗೆ ಬಂದು, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.


ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು.


ಯೇಸು ಅಲ್ಲಿಂದ ಹೊರಟು ಯೊರ್ದನ್ ನದಿಯ ಆಚೆಯ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಜನರು ತಿರುಗಿ ಅವರ ಬಳಿಗೆ ಬರಲು, ಯೇಸು ತಮ್ಮ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದರು.


ಯೇಸು ಗ್ರಂಥದ ಸುರುಳಿಯನ್ನು ಸುತ್ತಿ, ಪರಿಚಾರಕನ ಕೈಗೆ ಕೊಟ್ಟು ಕುಳಿತುಕೊಂಡರು. ಆಗ ಆ ಸಭಾಮಂದಿರದಲ್ಲಿ ಇದ್ದವರೆಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು.


ಯೇಸು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಿದ್ದರು. ಆದರೆ ಮುಖ್ಯಯಾಜಕರೂ ನಿಯಮ ಬೋಧಕರೂ ಜನರ ಪ್ರಮುಖರೂ ಯೇಸುವನ್ನು ಕೊಲ್ಲುವುದಕ್ಕೆ ಹವಣಿಸುತ್ತಿದ್ದರು.


ಆ ದಿವಸಗಳಲ್ಲಿ ಒಂದು ದಿನ ಯೇಸು ದೇವಾಲಯದ ಅಂಗಳದಲ್ಲಿ ಜನರಿಗೆ ಬೋಧಿಸುತ್ತಾ, ಸುವಾರ್ತೆಯನ್ನು ಸಾರುತ್ತಿದ್ದರು. ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೊಂದಿಗೆ ಅವರ ಬಳಿಗೆ ಬಂದು


ಯೇಸು ದೇವಾಲಯದ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಸ್ಥಳದಲ್ಲಿ ಬೋಧಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದರು. ಆದರೆ ಯೇಸುವಿನ ಸಮಯ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು