Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:58 - ಕನ್ನಡ ಸಮಕಾಲಿಕ ಅನುವಾದ

58 ಆದರೆ ಪೇತ್ರನು ಮಹಾಯಾಜಕನ ಅರಮನೆಗೆ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ, ಒಳಗೆ ಹೋಗಿ ಅಂತ್ಯವೇನಾಗುವುದೆಂದು ನೋಡಲು ಸೇವಕರೊಂದಿಗೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

58 ಅಲ್ಲಿ ಧರ್ಮಶಾಸ್ತ್ರಿಗಳೂ ಪ್ರಮುಖರೂ ಸಭೆಸೇರಿದ್ದರು. ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು, ಹೊರಾಂಗಣವನ್ನು ಹೊಕ್ಕು ಪಹರೆಯವರ ಜೊತೆ ಕುಳಿತುಕೊಂಡನು. ಇದೆಲ್ಲ ಹೇಗೆ ಕೊನೆಗೊಳ್ಳುವುದೆಂದು ನೋಡಬೇಕೆಂಬ ಉದ್ದೇಶ ಅವನದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿ ಬಂದಿದ್ದರು. ಪೇತ್ರನಾದರೋ ದೂರದಿಂದ ಆತನ ಹಿಂದೆ ಹೋಗುತ್ತಾ ಮಹಾಯಾಜಕನ ಮಠದ ಅಂಗಳದ ತನಕ ಬಂದು ಒಳಗೆ ಹೊಕ್ಕು ಆತನ ಗತಿ ಏನಾಗುವದೋ ನೋಡಬೇಕೆಂದು ಓಲೇಕಾರರ ಸಂಗಡ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಯೇಸುವಿಗೆ ಏನಾಗುತ್ತದೋ ಎಂಬುದನ್ನು ನೋಡಲು ಪೇತ್ರನು ಆತನನ್ನು ದೂರದಿಂದ ಹಿಂಬಾಲಿಸುತ್ತಾ ಪ್ರಧಾನಯಾಜಕನ ಭವನದ ಅಂಗಳದೊಳಗೆ ಬಂದು ಕಾವಲುಗಾರರೊಂದಿಗೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

58 ಪೆದ್ರು ಧುರ್-ಧುರ್‍ನಾಚ್ ತೆಂಚ್ಯಾ ಫಾಟ್ನಾ ಮಹಾಯಾಜಕಾಚ್ಯಾ ಘರಾಚ್ಯಾ ದಾರಾತ್ ಪತರ್ ಯೆಲೊ, ತೊ ದಾರಾತ್ ಭುತ್ತುರ್ ಗುಸ್ಲೊ ಅನಿ ಕಾಯ್ ಕಾಯ್ ಹೊತಾ ಬಗುಸಾಟ್ನಿ ಮನುನ್ ರಾಕ್ವಾಲ್ಯಾಂಚ್ಯಾ ವಾಂಗ್ಡಾ ಬಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:58
10 ತಿಳಿವುಗಳ ಹೋಲಿಕೆ  

ಯೇಸುವಿನ ವಿಷಯವಾಗಿ ಜನರು ತಮ್ಮತಮ್ಮೊಳಗೆ ಮಾತನಾಡುವುದನ್ನು ಫರಿಸಾಯರು ಕೇಳಿದರು. ಫರಿಸಾಯರು ಮತ್ತು ಮುಖ್ಯಯಾಜಕರು ಯೇಸುವನ್ನು ಬಂಧಿಸಲು ಕಾವಲುಗಾರರನ್ನು ಕಳುಹಿಸಿದರು.


ಇತ್ತ ಸೀಮೋನ ಪೇತ್ರನು ಚಳಿಕಾಯಿಸಿಕೊಳ್ಳುತ್ತಾ ನಿಂತಿರುವಾಗ, ಒಬ್ಬನು ಅವನಿಗೆ, “ನೀನು ಸಹ ಆತನ ಶಿಷ್ಯನಲ್ಲವೇ?” ಎಂದು ಕೇಳಿದರು. ಅದಕ್ಕೆ ಅವನು ಅದನ್ನು ನಿರಾಕರಿಸಿ, “ನಾನಲ್ಲ,” ಎಂದನು.


ಬಳಿಕ ಕಾವಲುಗಾರರು, ಮುಖ್ಯಯಾಜಕರ ಹಾಗೂ ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಹಿಡಿದು ತರಲಿಲ್ಲ?” ಎಂದು ಕೇಳಿದರು.


“ನಿನ್ನ ಎದುರಾಳಿ ನಿನ್ನನ್ನು ನ್ಯಾಯಾಲಯಕ್ಕೂ, ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಿ ಸೆರೆಮನೆಗೆ ಹಾಕದಿರುವುದಕ್ಕೂ, ಎದುರಾಳಿಯ ಸಂಗಡ ದಾರಿಯಲ್ಲಿರುವಾಗಲೇ ಬೇಗ ಸಮಾಧಾನ ಮಾಡಿಕೋ.


ಆಗ ಮುಖ್ಯಯಾಜಕರೂ ಜನರ ಹಿರಿಯರೂ ಒಟ್ಟಾಗಿ ಸೇರಿ, ಕಾಯಫನೆಂಬ ಮಹಾಯಾಜಕನ ಅರಮನೆಗೆ ಬಂದು


ಆಗ ಅವರು ಯೇಸುವನ್ನು ಬಂಧಿಸಿ, ಮಹಾಯಾಜಕನ ಭವನಕ್ಕೆ ಕರೆದುಕೊಂಡು ಬಂದರು. ಪೇತ್ರನೋ ದೂರದಿಂದ ಹಿಂಬಾಲಿಸಿದನು.


ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ನೋಡಿದಾಗ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ಶಿಲುಬೆಗೆ ಹಾಕಿರಿ. ಏಕೆಂದರೆ ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ,” ಎಂದನು.


ಆದರೆ ಅಧಿಕಾರಿಗಳು ಸೆರೆಮನೆಗೆ ಬಂದಾಗ, ಅಪೊಸ್ತಲರು ಸೆರೆಮನೆಯಲ್ಲಿ ಇರಲಿಲ್ಲ. ಇವರು ಹಿಂತಿರುಗಿ ಹೋಗಿ,


ಆಗ ದಳಪತಿಯು ತನ್ನ ಅಧಿಕಾರಿಗಳೊಂದಿಗೆ ಹೋಗಿ ಅಪೊಸ್ತಲರನ್ನು ಕರೆದುಕೊಂಡು ಬಂದನು. ಜನರು ತಮಗೆ ಕಲ್ಲೆಸೆದಾರೆಂಬ ಭಯ ಅವರಿಗಿದ್ದುದರಿಂದ ಅಪೊಸ್ತಲರನ್ನು ಬಲವಂತಮಾಡದೆ ಕರೆದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು