Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:8 - ಕನ್ನಡ ಸಮಕಾಲಿಕ ಅನುವಾದ

8 ಯೇಸುವಿನ ಶಿಷ್ಯರು ಇದನ್ನು ಕಂಡು ಕೋಪಗೊಂಡು, “ಏಕೆ ಈ ವ್ಯರ್ಥ ಖರ್ಚು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಶಿಷ್ಯರು ಇದನ್ನು ಕಂಡು ಕೋಪಗೊಂಡು, “ಹೀಗೆ ವ್ಯರ್ಥವಾಗಿ ಖರ್ಚುಮಾಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದನ್ನು ಕಂಡ ಶಿಷ್ಯರು ಸಿಟ್ಟಿಗೆದ್ದರು. “ಏಕೆ ಇಷ್ಟೊಂದು ವ್ಯರ್ಥ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಶಿಷ್ಯರು ಇದನ್ನು ಕಂಡು ಕೋಪಗೊಂಡು - ಈ ನಷ್ಟ ಯಾತಕ್ಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದನ್ನು ನೋಡಿದ ಶಿಷ್ಯರು ಆ ಸ್ತ್ರೀಯ ಮೇಲೆ ಕೋಪಗೊಂಡು, “ಆ ಸುಗಂಧತೈಲವನ್ನು ಏಕೆ ಹಾಳು ಮಾಡಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜೆಜುಚ್ಯಾ ಶಿಸಾಕ್ನಿ ಹೆ ಬಗುನ್ ರಾಗ್ ಯೆಲೊ, ಅನಿ ತೆನಿ, “ಕಶ್ಯಾಕ್ ಹೆ ಎವ್ಡೆ ಸಗ್ಳೆ ಹಾಳ್ ಘಾಲ್ತಲೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:8
12 ತಿಳಿವುಗಳ ಹೋಲಿಕೆ  

ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥ ಮಾಡಿದ್ದೇಕೆ?


ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ನೀವು, ‘ನಾವು ಹೋಗಿ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುತ್ತೇವೆ,’ ಎಂದು ಹೇಳುತ್ತೀರಿ.


ನೀವು ಹೇಳುವುದೇನೆಂದರೆ, “ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ? ಗೋಧಿಯನ್ನು ಮಾರುವ ಹಾಗೆ ಸಬ್ಬತ್ ದಿನವು ಯಾವಾಗ ಮುಗಿಯುವುದು? ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ, ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ,


ಮನುಷ್ಯನು ಪಡುವ ಎಲ್ಲಾ ಪ್ರಯಾಸವನ್ನೂ ಸಾಧಿಸುವ ಎಲ್ಲಾ ಕಾರ್ಯಗಳನ್ನೂ ನೋಡಿದಾಗ ಇವು ಪರಸ್ಪರ ಮತ್ಸರಕ್ಕೆ ಕಾರಣವೆಂದು ನಾನು ತಿಳಿದುಕೊಂಡೆನು. ಇದು ಕೂಡ ಗಾಳಿಯನ್ನು ಬೆನ್ನಟ್ಟಿದ ಹಾಗೆ ವ್ಯರ್ಥವೇ.


ಇದಲ್ಲದೆ ನೀವು, ‘ಎಂಥಾ ಭಾರ,’ ಎಂದು ಹೇಳಿ, ನೀವು ಅದನ್ನು ತಿರಸ್ಕಾರದಿಂದ ಊದಿಬಿಟ್ಟಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಗಾಯವಾದದ್ದನ್ನೂ, ಕುಂಟಾದ ರೋಗವುಳ್ಳ ಪಶುವನ್ನೂ ನನಗೆ ಬಲಿಯಾಗಿ ಅರ್ಪಿಸುತ್ತೀರಿ. ನಾನು ಇದನ್ನು ನಿಮ್ಮ ಕೈಯಿಂದ ಅಂಗೀಕರಿಸಬಹುದೋ?” ಎಂದು ಯೆಹೋವ ದೇವರು ಹೇಳುತ್ತಾರೆ.


ಬೇರೆ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ, ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.


ಯೇಸು ಅಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸುಗಂಧ ತೈಲದ ಭರಣಿಯೊಂದಿಗೆ ಯೇಸುವಿನ ಬಳಿಗೆ ಬಂದು, ಅದನ್ನು ಅವರ ತಲೆಯ ಮೇಲೆ ಸುರಿದಳು.


ಈ ತೈಲವನ್ನು ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು