ಮತ್ತಾಯ 27:11 - ಕನ್ನಡ ಸಮಕಾಲಿಕ ಅನುವಾದ11 ಯೇಸು ರಾಜ್ಯಪಾಲನ ಮುಂದೆ ನಿಂತಿದ್ದರು. ಆಗ ಅವನು ಯೇಸುವಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ, “ನೀನೇ ಹೇಳುತ್ತಿದ್ದಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯೇಸುಸ್ವಾಮಿಯನ್ನು ರಾಜ್ಯಪಾಲನ ಮುಂದೆ ನಿಲ್ಲಿಸಿದರು. “ನೀನು ಯೆಹೂದ್ಯರ ಅರಸನೋ?” ಎಂದು ರಾಜ್ಯಪಾಲ ಪ್ರಶ್ನಿಸಿದನು. ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಮರುನುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಕೇಳಿದನು. ಯೇಸು - ನೀನೇ ಹೇಳಿದ್ದೀ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೇಸುವನ್ನು ರಾಜ್ಯಪಾಲ ಪಿಲಾತನ ಎದುರಿನಲ್ಲಿ ನಿಲ್ಲಿಸಿದರು. ಪಿಲಾತನು ಆತನಿಗೆ, “ನೀನು ಯೆಹೂದ್ಯರ ರಾಜನೇ?” ಎಂದು ಕೇಳಿದನು. ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತನ್ನಾ ಜೆಜು ರೊಮಾಚ್ಯಾ ಅದಿಕಾರ್‍ಯಾ ಪಿಲಾತಾಚ್ಯಾ ಇದ್ರಾಕ್ ಇಬೆ ರ್‍ಹಾಲೊ, ತನ್ನಾ ತೆನಿ ಜೆಜುಕ್,“ ತಿಯಾ ಜುದೆವಾಂಚೊ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ “ತಿಯಾ ಸಾಂಗಲ್ಲ್ಯಾ ಸರ್ಕೆಚ್” ಮನುನ್ ಜೆಜುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |