Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:17 - ಕನ್ನಡ ಸಮಕಾಲಿಕ ಅನುವಾದ

17 ಜನಸಮೂಹ ಕೂಡಿಬಂದಿದ್ದಾಗ ಪಿಲಾತನು ಅವರಿಗೆ, “ನಿಮಗೆ ಯಾರನ್ನು ಬಿಡುಗಡೆ ಮಾಡಬೇಕೆನ್ನುತ್ತೀರಿ? ಬರಬ್ಬನನ್ನೋ? ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗಿರಲಾಗಿ, ಪಿಲಾತನು ಅಲ್ಲಿ ಕೂಡಿದ್ದ ಜನರನ್ನು ಉದ್ದೇಶಿಸಿ, “ನಾನು ಯಾರನ್ನು ಬಿಡುಗಡೆ ಮಾಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನೋ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17-18 ಹೀಗಿರಲಾಗಿ ಅವರು ಕೂಡಿಬಂದ ಸಮಯದಲ್ಲಿ ಪಿಲಾತನು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ತಿಳಿದು - ನಿಮಗೆ ಯಾರನ್ನು ಬಿಟ್ಟುಕೊಡಬೇಕನ್ನುತ್ತೀರಿ? ಬರಬ್ಬನನ್ನೋ? ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನೋ ಎಂದು ಅವರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜನರೆಲ್ಲರೂ ಪಿಲಾತನ ಭವನದ ಬಳಿ ನೆರೆದಿದ್ದರು. ಪಿಲಾತನು ಅವರಿಗೆ, “ನಾನು ನಿಮಗಾಗಿ ಯಾವ ಕೈದಿಯನ್ನು ಬಿಡುಗಡೆ ಮಾಡಲಿ, ಬರಬ್ಬನನ್ನೋ ಅಥವಾ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆಚೆಸಾಟ್ನಿ ಲೊಕಾ ಥೈ ಜಮಾ ಹೊಲ್ಲ್ಯಾ ತನ್ನಾ, ಪಿಲಾತಾನ್ ತೆಂಕಾ, “ತುಮ್ಚ್ಯಾಸಾಟ್ನಿ ಮಿಯಾ ಕೊನಾಕ್ ಸೊಡುನ್ ದಿವ್ಚೆ? ಬಾರಾಬ್ಬಾಸಾಕ್ ಕಾಯ್ ಕ್ರಿಸ್ತ್ ಮನ್ತಲ್ಯಾ ಜೆಜುಕ್ ಸೊಡುನ್ ದಿವ್ಚೆ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:17
9 ತಿಳಿವುಗಳ ಹೋಲಿಕೆ  

ಆದರೆ ಅವರು, “ಆತನನ್ನು ಕೊಲ್ಲಿಸು ಕೊಲ್ಲಿಸು! ಆತನನ್ನು ಶಿಲುಬೆಗೆ ಹಾಕು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಬೇಕೆ?” ಎಂದು ಕೇಳಿದನು. ಆಗ ಮುಖ್ಯಯಾಜಕರು, “ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.


ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.


ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.


ಯಾಕೋಬನು ಯೋಸೇಫನ ತಂದೆ, ಯೋಸೇಫನು ಮರಿಯಳ ಪತಿ, ಮರಿಯಳು ಕ್ರಿಸ್ತ ಎಂದು ಕರೆಯಲಾದ, ಯೇಸುಸ್ವಾಮಿಯ ತಾಯಿ.


ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧ ಸೆರೆಯಾಳು ಅವರಲ್ಲಿ ಇದ್ದನು.


ಯೇಸುವನ್ನು ಅವರು ಹೊಟ್ಟೆಕಿಚ್ಚಿನಿಂದ ಒಪ್ಪಿಸಿಕೊಟ್ಟಿದ್ದರೆಂದು ಪಿಲಾತನಿಗೆ ತಿಳಿದಿತ್ತು.


ಆ ಸ್ತ್ರೀಯು ಯೇಸುವಿಗೆ, “ಕ್ರಿಸ್ತ ಎಂದು ಕರೆಯಲಾಗುವ ಮೆಸ್ಸೀಯ ಬರುತ್ತಾರೆಂದು ನಾನು ಬಲ್ಲೆನು. ಅವರು ಬಂದಾಗ ನಮಗೆ ಎಲ್ಲವನ್ನೂ ತಿಳಿಸುವರು,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು