Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:30 - ಕನ್ನಡ ಸಮಕಾಲಿಕ ಅನುವಾದ

30 ಅವರು ಯೇಸುವಿನ ಮೇಲೆ ಉಗುಳಿ, ಆ ಬೆತ್ತವನ್ನು ತೆಗೆದುಕೊಂಡು ಅವರ ತಲೆಯ ಮೇಲೆ ಮತ್ತೆ ಮತ್ತೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವರ ಮೇಲೆ ಉಗುಳಿದರು. ಆ ಕೋಲನ್ನು ಕಿತ್ತುಕೊಂಡು ತಲೆಯಮೇಲೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ಕಸಕೊಂಡು ಆತನ ತಲೆಯ ಮೇಲೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆತನ ಮೇಲೆ ಉಗುಳಿದರು. ಆತನ ಕೈಯಿಂದ ಕೋಲನ್ನು ತೆಗೆದುಕೊಂಡು ತಲೆಯ ಮೇಲೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತೆನಿ ತೆಚ್ಯಾ ತೊಂಡಾರ್ ಥುಕ್ಲ್ಯಾನಿ ಅನಿ ಖಾಟಿ ಘೆವ್ನ್ ತೆಚೆ ಟಕ್ಲೆ-ಟಕ್ಲೆ ಧರುನ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:30
12 ತಿಳಿವುಗಳ ಹೋಲಿಕೆ  

ನಾನು ಹೊಡೆಯುವವರಿಗೆ ಬೆನ್ನನ್ನೂ, ಕೂದಲು ಕೀಳುವವರಿಗೆ ನನ್ನ ಗಡ್ಡವನ್ನೂ ಒಡ್ಡಿದೆನು. ನನ್ನ ಮುಖವನ್ನು ನಿಂದೆಗೂ, ಉಗುಳುವಿಕೆಗೂ ಮರೆಮಾಡಲಿಲ್ಲ.


ಆಮೇಲೆ ಅವರು ಯೇಸುವಿನ ಮುಖದ ಮೇಲೆ ಉಗುಳಿ ಅವರನ್ನು ಗುದ್ದಿದರು. ಬೇರೆ ಕೆಲವರು ಅವರ ಕೆನ್ನೆಗೆ ಹೊಡೆದು,


ಅವರು ಬೆತ್ತದಿಂದ ಯೇಸುವಿನ ತಲೆಯ ಮೇಲೆ ಹೊಡೆದು, ಅವರ ಮೇಲೆ ಉಗುಳಿ ಮೊಣಕಾಲೂರಿ ಅವರಿಗೆ ನಮಸ್ಕರಿಸಿದರು.


ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಬಲಿಗೆ ಎಳೆದುಕೊಂಡು ಹೋಗುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.


ಬೇತ್ಲೆಹೇಮಿನಿಂದ ಒಬ್ಬ ಅಧಿಪತಿಯು ಸೈನ್ಯಗಳ ಪಟ್ಟಣವೇ, ಗುಂಪುಗಳಾಗಿ ಕೂಡಿಕೊಳ್ಳಿರಿ. ನಮ್ಮ ಮೇಲೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.


ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.


ಅವನ ಮುಖವು ಮನುಷ್ಯರಿಗಿಂತಲೂ, ಅವನ ಆಕಾರವು ನರಪುತ್ರರಿಗಿಂತಲೂ ಕುರೂಪವಾಗಿರುವುದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋ,


ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”


ಇವರು ನನ್ನನ್ನು ಹಾಸ್ಯಮಾಡಿ, ನನ್ನ ಮೇಲೆ ಉಗುಳಿ, ಕೊರಡೆಯಿಂದ ಹೊಡೆದು ನನ್ನನ್ನು ಕೊಂದುಹಾಕುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದರು.


ತರುವಾಯ ಕೆಲವರು ಯೇಸುವಿನ ಮೇಲೆ ಉಗುಳಿ ಅವರ ಕಣ್ಣಿಗೆ ಬಟ್ಟೆ ಕಟ್ಟಿ ಅವರನ್ನು ಗುದ್ದುವುದಕ್ಕೆ ಆರಂಭಿಸಿ ಯೇಸುವಿಗೆ, “ಪ್ರವಾದನೆ ಹೇಳು,” ಎಂದರು. ಕಾವಲಾಳುಗಳು ಯೇಸುವನ್ನು ಹಿಡಿದುಕೊಂಡುಹೋಗಿ ಅವರನ್ನು ಹೊಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು