Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:40 - ಕನ್ನಡ ಸಮಕಾಲಿಕ ಅನುವಾದ

40 “ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ, ನೀನು ದೇವಪುತ್ರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 “ಮಹಾದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟಬಲ್ಲವನೇ, ಈಗ ನಿನ್ನನ್ನು ನೀನೇ ರಕ್ಷಿಸಿಕೋ; ನೀನು ದೇವರ ಪುತ್ರನಾದರೆ ಶಿಲುಬೆಯಿಂದ ಇಳಿದು ಬಾ,” ಎಂದು ಮೂದಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೋ; ದೇವರಮಗನು ಆಗಿದ್ದರೆ ಶಿಲುಬೆಯಿಂದ ಇಳಿದು ಬಾ ಎಂದು ಆತನನ್ನು ಹಂಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆಂದು ಹೇಳುತ್ತಿದ್ದೆ. ಆದರೆ ಈಗ ನಿನ್ನನ್ನು ನೀನೇ ರಕ್ಷಿಸಿಕೊ! ನೀನು ನಿಜವಾಗಿಯೂ ದೇವರ ಮಗನಾಗಿದ್ದರೆ, ಶಿಲುಬೆಯಿಂದ ಕೆಳಗಿಳಿದು ಬಾ!” ಎಂದು ಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 “ತಿಯಾ ದೆವಾಚಿ ಗುಡಿ ಮೊಡುನ್ ತಿನ್ ದಿಸಾತ್ನಿ ಮಟ್ಲ್ಯಾರ್ ಭಾಂದ್‍ನಾರ್ ಹೊತ್ತೆ ನ್ಹಯ್! ತಿಯಾ ದೆವಾಚೊ ಲೆಕ್ ರ್‍ಹಾಲ್ಯಾರ್ ತುಕಾಚ್ ಹುರ್‍ವುನ್ ಘೆ! ಕುರ್ಸಾ ವೈನಾ ಉತ್ರುನ್ ಯೆ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:40
13 ತಿಳಿವುಗಳ ಹೋಲಿಕೆ  

“ನಾನು ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟಬಲ್ಲೆನೆಂದು ಈತನು ಹೇಳಿದನು,” ಎಂದರು.


“ನೀನು ದೇವರ ಪುತ್ರನಾಗಿದ್ದರೆ, ಕೆಳಕ್ಕೆ ಧುಮುಕು. ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ ‘ದೇವರು ನಿನ್ನ ವಿಷಯವಾಗಿ ತಮ್ಮ ದೂತರಿಗೆ ಆಜ್ಞಾಪಿಸುವರು, ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’” ಎಂದನು.


ಆಗ ಶೋಧಕನು ಯೇಸುವಿನ ಬಳಿ ಬಂದು, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲುಗಳು ರೊಟ್ಟಿಗಳಾಗುವಂತೆ ಆಜ್ಞಾಪಿಸು,” ಎಂದನು.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ, ಇದರ ವಿಷಯವಾಗಿ ಭೂನಿವಾಸಿಗಳು ಸಂತೋಷಿಸಿ, ಹರ್ಷಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


“ಅದಕ್ಕೆ ಅಬ್ರಹಾಮನು ಅವನಿಗೆ, ‘ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನೇ ಅವರು ಕೇಳದೆ ಹೋದರೆ, ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವುದಿಲ್ಲ,’ ಎಂದು ಹೇಳಿದನು.”


ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, “ನಿಜವಾಗಿಯೂ ಈತನು ದೇವಪುತ್ರನಾಗಿದ್ದನು,” ಎಂದರು.


“ಈತನು ಬೇರೆಯವರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು! ಈತನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗೆ ಇಳಿದು ಬರಲಿ. ಆಗ ನಾವು ಈತನನ್ನು ನಂಬುವೆವು.


ವ್ಯಭಿಚಾರಿಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ, ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಸಿಕ್ಕುವುದಿಲ್ಲ,” ಎಂದು ಹೇಳಿ, ಯೇಸು ಅವರನ್ನು ಬಿಟ್ಟು ಹೊರಟು ಹೋದರು.


ಅದೇ ಮೇರೆಗೆ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ಯೇಸುವನ್ನು ಹಾಸ್ಯಮಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು