Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:53 - ಕನ್ನಡ ಸಮಕಾಲಿಕ ಅನುವಾದ

53 ಯೇಸು ಪುನರುತ್ಥಾನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪವಿತ್ರ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಹೀಗೆ ಎದ್ದವರು ಸಮಾಧಿಗಳಿಂದ ಹೊರಗೆಬಂದು, ಯೇಸು ಪುನರುತ್ಥಾನ ಹೊಂದಿದ ಬಳಿಕ ಪವಿತ್ರನಗರಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಮತ್ತು ಆತನು ಎದ್ದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಯೇಸು ಪುನರುತ್ಥಾನ ಹೊಂದಿದ ಬಳಿಕ, ಅವರು ಪವಿತ್ರ ನಗರವಾದ ಜೆರುಸಲೇಮಿಗೆ ಹೋದರು. ಜನರು ಅವರನ್ನು ಕಣ್ಣಾರೆ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ಜೆಜು ಝಿತ್ತೊ ಹೊವ್ನ್ ಉಟಲ್ಲ್ಯಾ ತೆನಿ ತೆಂಕಾ ಮಾಟಿ ದಿಲ್ಲ್ಯಾ ಸಾರಿಯಾ ಸೊಡುನ್ ಉಟ್ಲ್ಯಾನಿ ಅನಿ ಪವಿತ್ರ್ ಶಾರಾಕ್ ಜೆರುಜಲೆಮಾಕ್ ಗೆಲ್ಯಾನಿ. ಥೈ ಸುಮಾರ್ ಲೊಕಾನಿ ತೆಂಕಾ ಬಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:53
7 ತಿಳಿವುಗಳ ಹೋಲಿಕೆ  

ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು. ಏಕೆಂದರೆ ಅದು ಯೆಹೂದ್ಯರಲ್ಲದವರಿಗಾಗಿ ಬಿಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.


ಆಮೇಲೆ ಸೈತಾನನು ಯೇಸುವನ್ನು ಪವಿತ್ರ ನಗರಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ,


ಏಕೆಂದರೆ ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು.


ಯಾರಾದರೂ ಈ ಪ್ರವಾದನಾ ಗ್ರಂಥದಲ್ಲಿರುವ ಮಾತುಗಳನ್ನು ತೆಗೆದುಬಿಟ್ಟರೆ, ಈ ಗ್ರಂಥದಲ್ಲಿ ಬರೆದಿರುವ ಜೀವವೃಕ್ಷದಲ್ಲಿಯೂ ಪವಿತ್ರ ನಗರದಲ್ಲಿಯೂ ಅವರಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.


ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಈಗ ಜನರ ನಾಯಕರು ಯೆರೂಸಲೇಮಿನಲ್ಲಿ ನೆಲೆಸಿದರು. ಉಳಿದ ಜನರೊಳಗೆ ಹತ್ತು ಮಂದಿಯಲ್ಲಿ ಒಂಬತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಹತ್ತರಲ್ಲೊಬ್ಬರು ಪವಿತ್ರ ನಗರವಾದ ಯೆರೂಸಲೇಮಿನಲ್ಲಿ ಬಂದು ವಾಸಿಸಲು ಚೀಟುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು