ಮತ್ತಾಯ 27:6 - ಕನ್ನಡ ಸಮಕಾಲಿಕ ಅನುವಾದ6 ಆಗ ಮುಖ್ಯಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು, “ಇವುಗಳನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದು ನ್ಯಾಯವಲ್ಲ. ಅದು ರಕ್ತದ ಕ್ರಯವಾಗಿದೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು, “ಇದು ರಕ್ತದ ಕ್ರಯ. ಇದನ್ನು ಕಾಣಿಕೆ ಕೋಶದಲ್ಲಿ ಹಾಕುವುದು ಸರಿಯಲ್ಲ,” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮಹಾಯಾಜಕರು ಆ ಹಣವನ್ನು ತೆಗೆದುಕೊಂಡು ಅದು ಜೀವಹತ್ಯಕ್ಕೆ ಕೊಟ್ಟ ಕ್ರಯವಾದ್ದರಿಂದ ಅದನ್ನು ಕಾಣಿಕೇಪೆಟ್ಟಿಗೆಯಲ್ಲಿ ಹಾಕಬಾರದು ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಮಹಾಯಾಜಕರು ದೇವಾಲಯದಲ್ಲಿದ್ದ ಬೆಳ್ಳಿಯ ನಾಣ್ಯಗಳನ್ನು ಆಯ್ದುಕೊಂಡು, “ಈ ಹಣವನ್ನು ಒಬ್ಬ ಮನುಷ್ಯನ ಹತ್ಯೆಗಾಗಿ ಕೊಟ್ಟಿದ್ದ ಕಾರಣ ಇದನ್ನು ದೇವಾಲಯದ ಹಣದೊಂದಿಗೆ ಸೇರಿಸುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧ” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಮುಖ್ಯ ಯಾಜಕಾನಿ ಹೆ ಪೈಸೆ ಯೆಚುನ್ ಘೆಟ್ಲ್ಯಾನಿ ಅನಿ, “ಎಕಾ ಮಾನ್ಸಾಚೊ ಜಿವ್ ಕಾಡುಕ್ ಮನುನ್ ದಿಲ್ಲೆ ಪೈಸೆ ಹೆ ಅನಿ ಹೆ ಪೈಸೆ ಕಾನಿಕಿಚ್ಯಾ ಡಬ್ಬ್ಯಾತ್ ಥವ್ತಲೆ ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಚುಕ್ ಹೊತಾ.”ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |