Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:64 - ಕನ್ನಡ ಸಮಕಾಲಿಕ ಅನುವಾದ

64 ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ಆತನನ್ನು ಕದ್ದುಕೊಂಡು ಹೋಗಿ, ಯೇಸು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿಯಾರು. ಆಗ ಮೊದಲನೆಯ ಮೋಸಕ್ಕಿಂತ ಕಡೆಯ ಮೋಸವು ಕೆಡುಕಾದೀತು. ಆದಕಾರಣ ಮೂರನೆಯ ದಿನದವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆಕೊಡಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

64 ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ” ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

64 ಆದ್ದರಿಂದ ಮೂರನೆಯ ದಿನದ ತನಕ ಅವನ ಸಮಾಧಿಗೆ ಭದ್ರವಾದ ಕಾವಲಿರಿಸಲು ಅಪ್ಪಣೆಯಾಗಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಅವನನ್ನು ಕದ್ದುಕೊಂಡುಹೋಗಿ, ಸತ್ತವನು ಬದುಕಿಬಂದಿದ್ದಾನೆ ಎಂದು ಜನರಿಗೆ ಹೇಳಬಹುದು; ಆಗ ಮೊದಲನೆಯ ಮೋಸಕ್ಕಿಂತ ಕಡೆಯದೇ ಕಡುಮೋಸವಾದೀತು,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

64 ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ ಎಂದು ಹೇಳಾರು; ಆಗ ಮೊದಲನೆಯ ಮೋಸಕ್ಕಿಂತ ಕಡೆಯ ಮೋಸವು ಕೆಡುಕಾದೀತು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

64 ಆದ್ದರಿಂದ ಮೂರು ದಿನಗಳವರೆಗೆ ಆ ಸಮಾಧಿಯನ್ನು ಭದ್ರವಾಗಿ ಕಾಯಲು ಆಜ್ಞಾಪಿಸಿರಿ. ಅವನ ಶಿಷ್ಯರು ಬಂದು, ಅವನ ದೇಹವನ್ನು ಕದ್ದುಕೊಂಡು ಹೋಗಿ, ಅವನು ಸಮಾಧಿಯಿಂದ ಮೇಲೆದ್ದಿದ್ದಾನೆ ಎಂದು ಜನರಿಗೆ ಹೇಳಬಹುದು. ಆಗ ಮೊದಲನೆಯ ಮೋಸಕ್ಕಿಂತ ಕಡೆಯದೇ ಕಡು ಮೋಸವಾದೀತು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

64 ತಸೆಮನುನ್ ತಿನ್ ದಿಸಾ ಪತರ್ ತೆಚ್ಯಾ ಸಮಾದಿಕ್ ರಾಕುಕ್ ಹುಕುಮ್ ಅಮ್ಕಾ ದಿವಾ. ತೆಚಿ ಶಿಸಾ-ಗಿಸಾ ಜಾವ್ನ್ ತೆಚೆ ಮಡೆ ಚೊರುನ್ ಘೆವ್ನ್ ಜಾತಿಲ್ ಅನಿ ಲೊಕಾಕ್ನಿ ತೊ ಝಿತ್ತೊ ಹೊವ್ನ್ ಉಟ್ಲಾ ಮನುನ್ ಸಾಂಗ್ತಿಲ್. ಹಿ ಝುಟಿ ಖಬರ್ ಪಯ್ಲೆಚ್ಯಾ ಖಬ್ರೆಚ್ಯಾನ್ಕಿ ಜಾಸ್ತಿಚಿ ಮೊಟಿ ಝುಟಿ ಖಬರ್ ಹೊತಲಿ ನಕ್ಕೊ. ಮನುನ್ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:64
5 ತಿಳಿವುಗಳ ಹೋಲಿಕೆ  

“ ‘ನಾವು ನಿದ್ರೆ ಮಾಡುತ್ತಿದ್ದಾಗ ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋದರು,’ ಎಂದು ನೀವು ಹೇಳಿರಿ.


ಆಗ ಅದು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುವವು. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅದರಂತೆಯೇ ಈ ದುಷ್ಟ ಸಂತತಿಗೂ ಆಗುವುದು,” ಎಂದು ಹೇಳಿದರು.


“ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿರುವಾಗ, ‘ಮೂರು ದಿನಗಳಾದ ಮೇಲೆ ನಾನು ತಿರುಗಿ ಏಳುವೆನು,’ ಎಂದು ಹೇಳಿದ್ದು ನಮಗೆ ನೆನಪಿದೆ.


ಪಿಲಾತನು ಅವರಿಗೆ, “ಕಾವಲುಗಾರರು ಇದ್ದಾರಲ್ಲಾ, ಹೋಗಿ ನಿಮಗೆ ತಿಳಿದಮಟ್ಟಿಗೆ ಅದನ್ನು ಭದ್ರಪಡಿಸಿರಿ,” ಎಂದನು.


ಏಕೆಂದರೆ ನಮ್ಮ ಬೋಧನೆಯು ದುರುದ್ದೇಶದಿಂದಲೂ ಇಲ್ಲವೆ ವಂಚನೆಗಳಿಂದಲೂ ತಪ್ಪುಗಳಿಂದಲೂ ಕೂಡಿದ್ದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು