Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:66 - ಕನ್ನಡ ಸಮಕಾಲಿಕ ಅನುವಾದ

66 ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ, ಕಾವಲನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

66 ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

66 ಅವರು ಹೋಗಿ, ಸಮಾಧಿಯ ಕಲ್ಲಿಗೆ ಮುದ್ರೆಹಾಕಿ, ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

66 ಅವರು ಹೊರಟು ಕಾವಲುಗಾರರೊಂದಿಗೆ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಭದ್ರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

66 ಅವರು ಹೋಗಿ, ಸಮಾಧಿಗೆ ಮುದ್ರೆ ಹಾಕಿ, ಸೈನಿಕರನ್ನು ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

66 ಅಶೆ ತೆನಿ ಗೆಲ್ಯಾನಿ ಅನಿ ಸಮಾದಿ ರಾಕುಸಾಟ್ನಿ ತಿಚ್ಯಾ ದಾರಾಕ್ ಹೊತ್ತ್ಯಾ ಗುಂಡ್ಯಾಕ್ ಬಂದೊಬಸ್ತ್ ಕರ್‍ಲ್ಯಾನಿ ಅನಿ ಸಮಾದಿ ರಾಕುಕ್ ರಾಕ್ವಾಲ್ಯಾಕ್ನಿ ಥವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:66
10 ತಿಳಿವುಗಳ ಹೋಲಿಕೆ  

ಗುಹೆಯ ಬಾಯಿಯನ್ನು ಬಂಡೆಯಿಂದ ಮುಚ್ಚಲಾಯಿತು. ಇದಲ್ಲದೆ ದಾನಿಯೇಲನ ಪರಿಸ್ಥಿತಿಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನೂ, ತನ್ನ ಪ್ರಧಾನರ ಮುದ್ರೆಯನ್ನೂ ಅದಕ್ಕೆ ಹಾಕಿದನು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಪರಲೋಕದಿಂದ ಇಳಿದುಬಂದು, ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಅದರ ಮೇಲೆ ಕುಳಿತುಕೊಂಡನು.


ಬಂಡೆಯಲ್ಲಿ ತಾನು ಕೊರೆದಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು, ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು.


ಅವರು ಹೋಗುತ್ತಿರುವಾಗ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಮುಖ್ಯಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.


ಪಿಲಾತನು ಅವರಿಗೆ, “ಕಾವಲುಗಾರರು ಇದ್ದಾರಲ್ಲಾ, ಹೋಗಿ ನಿಮಗೆ ತಿಳಿದಮಟ್ಟಿಗೆ ಅದನ್ನು ಭದ್ರಪಡಿಸಿರಿ,” ಎಂದನು.


ಏಕೆಂದರೆ ಆ ಬಂಡೆ ಬಹಳ ದೊಡ್ಡದಾಗಿತ್ತು. ಆದರೆ ಅವರು ಮತ್ತೆ ಕಂಡಾಗ ಆ ಬಂಡೆ ಉರುಳಿಸಲಾಗಿತ್ತು.


ವಾರದ ಮೊದಲನೆಯ ದಿನದಲ್ಲಿ ಮುಂಜಾನೆ ಇನ್ನೂ ಕತ್ತಲಿರುವಾಗಲೇ ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಬಂಡೆ ತೆಗೆದು ಹಾಕಿರುವುದನ್ನು ಕಂಡಳು.


ಆ ಸಾವಿರ ವರ್ಷ ತೀರುವ ತನಕ ಅವನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೂತನು ಅವನನ್ನು ಅಧೋಲೋಕದಲ್ಲಿ ತಳ್ಳಿ, ಬಾಗಿಲು ಮುಚ್ಚಿ ಅದಕ್ಕೆ ಮುದ್ರೆ ಹಾಕಿದನು. ಇವುಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆಯಾಗತಕ್ಕದ್ದು.


ಆಗ ಯೆಹೋಶುವನು, “ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಹೊರಳಿಸಿರಿ. ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಕೆಲವರನ್ನು ನೇಮಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು