Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಯೇಸು ಅವರಿಗೆ, “ಭಯಪಡಬೇಡಿರಿ, ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ಹೋಗಿ ಅವರಿಗೆ ಹೇಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಯೇಸು ಅವರಿಗೆ, “ಭಯಪಡಬೇಡಿ, ನನ್ನ ಸೋದರರ ಬಳಿಗೆ ಹೋಗಿ ಅವರು ಗಲಿಲೇಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ತಿಳಿಸಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೇಸು ಅವರಿಗೆ - ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ನನ್ನನ್ನು ನೋಡುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೇಸು ಆ ಸ್ತ್ರೀಯರಿಗೆ, “ಹೆದರಬೇಡಿ, ನನ್ನ ಸಹೋದರರ ಬಳಿಗೆ ಹೋಗಿ ಗಲಿಲಾಯಕ್ಕೆ ಬರಲು ತಿಳಿಸಿರಿ. ಅವರು ನನ್ನನ್ನು ಅಲ್ಲಿ ಕಾಣುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆಜುನ್ ತೆಂಕಾ,“ಭಿಂವ್‌ನಕಾಶಿ, ಜಾವಾ ಅನಿ ಮಾಜ್ಯಾ ಭಾವಾಕ್ನಿ ಗಾಲಿಲಿಯಾಕ್ ಜಾವಾ ಮನುನ್ ಸಾಂಗಾ. ಥೈ ತೆಂಕಾ ಮಿಯಾ ಬಗುಕ್ ಗಾವ್ತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:10
18 ತಿಳಿವುಗಳ ಹೋಲಿಕೆ  

ಅನೇಕ ಸಹೋದರರ ಮಧ್ಯೆ ಜ್ಯೇಷ್ಠಪುತ್ರನೆನಿಸುವಂತೆ ದೇವರು ಯಾರನ್ನು ಮೊದಲು ತಿಳಿದುಕೊಂಡರೋ ಅವರನ್ನು ತಮ್ಮ ಪುತ್ರನ ಹೋಲಿಕೆಗೆ ಸಮಾನರಾಗುವಂತೆ ಮುಂದಾಗಿ ನೇಮಿಸಿದರು.


ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.


ಬೇಗನೆ ಹೋಗಿ ಅವರ ಶಿಷ್ಯರಿಗೆ, ‘ಅವರು ಮರಣದಿಂದ ಎದ್ದಿದ್ದಾರೆ. ಅವರು ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತಾರೆ. ನೀವು ಅಲ್ಲಿಯೇ ಅವರನ್ನು ಕಾಣುವಿರಿ,’ ಎಂದು ತಿಳಿಸಿರಿ. ಇದೇ ನಾನು ನಿಮಗೆ ತಿಳಿಸಬೇಕಾದ ಸಂಗತಿ,” ಎಂದನು.


ಆದರೆ ನೀವು ಹೊರಟುಹೋಗಿ ಯೇಸು ನಿಮಗೆ ಹೇಳಿದಂತೆ, ‘ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತಾರೆ, ಅಲ್ಲಿ ನೀವು ಯೇಸುವನ್ನು ಕಾಣುವಿರಿ’ ಎಂದು ಅವರ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ,” ಎಂದನು.


ಆ ದೂತನು ಸ್ತ್ರೀಯರಿಗೆ, “ನೀವು ಭಯಪಡಬೇಡಿರಿ. ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು.


ಯೇಸು ತಕ್ಷಣವೇ ಅವರಿಗೆ, “ಧೈರ್ಯವಾಗಿರಿ, ನಾನೇ, ಭಯಪಡಬೇಡಿರಿ,” ಎಂದರು.


ಆದರೆ ಯೇಸು ಅವರಿಗೆ, “ನಾನೇ, ಭಯಪಡಬೇಡಿರಿ,” ಎಂದರು.


“ಆಗ ನಾನು ಅವರಿಗೆ ಉತ್ತರವಾಗಿ, ‘ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ನೀವು ಇವರಲ್ಲಿ ಅತ್ಯಲ್ಪನಾದ ಒಬ್ಬನಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡಲಿಲ್ಲ,’ ಎಂದು ಹೇಳುವೆನು.


“ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.


ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು, ಯೆಹೋವ ದೇವರನ್ನು ಸೇವಿಸಿದರು. ಆಗ ಯೆಹೋವ ದೇವರು ಇಸ್ರಾಯೇಲಿನ ಕಷ್ಟಕ್ಕೋಸ್ಕರ ಮನಸ್ಸಿನಲ್ಲಿ ಬಹಳ ನೊಂದುಕೊಂಡರು.


ಆದರೆ ನಾನು ಎದ್ದ ಮೇಲೆ, ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗುವೆನು,” ಎಂದು ಹೇಳಿದರು.


ಅವರು ಶಿಷ್ಯರಿಗೆ ತಿಳಿಸುವುದಕ್ಕೆ ಹೋಗುತ್ತಿದ್ದಾಗ, ಯೇಸು ಅವರನ್ನು ಸಂಧಿಸಿ, “ಶುಭವಾಗಲಿ” ಎಂದರು. ಅವರು ಬಂದು ಯೇಸುವಿನ ಪಾದಗಳನ್ನು ಹಿಡಿದು ಅವರನ್ನು ಆರಾಧಿಸಿದರು.


ಆಗ ಹನ್ನೊಂದು ಮಂದಿ ಶಿಷ್ಯರು ಯೇಸು ತಮಗೆ ನೇಮಿಸಿದ ಗಲಿಲಾಯದಲ್ಲಿರುವ ಬೆಟ್ಟಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು