Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಪರಲೋಕದಿಂದ ಇಳಿದುಬಂದು, ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಅದರ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇದ್ದಕ್ಕಿದ್ದಂತೆ ಭೂಮಿ ಗಡಗಡನೆ ನಡುಗಿತು. ಆಗ ದೇವದೂತನು ಸ್ವರ್ಗದಿಂದ ಇಳಿದುಬಂದನು. ಸಮಾಧಿಯ ಕಲ್ಲನ್ನು ಹಿಂದಕ್ಕೆ ಉರುಳಿಸಿ ಅದರ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಭೀಕರ ಭೂಕಂಪವಾಯಿತು. ಪ್ರಭುವಿನ ದೂತನೊಬ್ಬನು ಆಕಾಶದಿಂದ ಇಳಿದುಬಂದನು. ಆ ದೇವದೂತನು ಸಮಾಧಿಯ ಬಳಿಗೆ ಹೋಗಿ, ಸಮಾಧಿಯ ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಆ ಬಂಡೆಯ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಎಗ್ದಮ್ ಮೊಟೆ ಭುಕಂಪ್ ಹೊಲೆ; ಧನಿಯಾಚೊ ಎಕ್ ದುತ್ ಸರ್‍ಗಾ ವೈನಾ ಉತ್ರುನ್ ಯೆಲೊ, ಸಮಾದಿಚ್ಯಾ ದಾರಾರ್ ಹೊತ್ತ್ಯಾ ಗುಂಡ್ಯಾಕ್ ಕಡೆಕ್ ಗುಳ್ವುನ್ ತೆಚೆ ವರ್‍ತಿ ಬಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:2
12 ತಿಳಿವುಗಳ ಹೋಲಿಕೆ  

ಆಗ ತಕ್ಷಣವೇ ಭೀಕರವಾದ ಭೂಕಂಪವಾಗಿ ಸೆರೆಮನೆಯ ಅಸ್ತಿವಾರವು ಕದಲಿತು. ಕೂಡಲೇ ಸೆರೆಮನೆಯ ಎಲ್ಲಾ ಬಾಗಿಲುಗಳು ತೆರೆದವು. ಎಲ್ಲರನ್ನು ಬಂಧಿಸಿದ್ದ ಸರಪಣಿಗಳು ಸಡಿಲಗೊಂಡವು.


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ವಾರದ ಮೊದಲನೆಯ ದಿನದಲ್ಲಿ ಮುಂಜಾನೆ ಇನ್ನೂ ಕತ್ತಲಿರುವಾಗಲೇ ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಬಂಡೆ ತೆಗೆದು ಹಾಕಿರುವುದನ್ನು ಕಂಡಳು.


ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.


ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.


ಬಂಡೆಯಲ್ಲಿ ತಾನು ಕೊರೆದಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು, ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು.


ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ, ಕಾವಲನ್ನು ಇಟ್ಟರು.


ಆದರೆ ರಾತ್ರಿಯಲ್ಲಿ ಕರ್ತದೇವರ ದೂತನೊಬ್ಬನು ಸೆರೆಮೆನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಗೆ ನಡೆಸಿಕೊಂಡು ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು