ಮತ್ತಾಯ 3:11 - ಕನ್ನಡ ಸಮಕಾಲಿಕ ಅನುವಾದ11 “ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಅಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಶಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಅರ್ಹನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನಂತೂ ನಿಮ್ಮ ಮನಸ್ಸು ತಿರುಗಿಕೊಳ್ಳಬೇಕೆಂಬದಕ್ಕೆ ನಿಮಗೆ ನೀರಿನಲ್ಲಿ ಸ್ನಾನಮಾಡಿಸುತ್ತೇನೆ. ಆದರೆ ನನ್ನ ಹಿಂದೆ ಬರುವವನು ನನಗಿಂತ ಶಕ್ತನು; ಆತನ ಕೆರಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದಕ್ಕೆ ಗುರುತಾಗಿ ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನನ್ನ ಹಿಂದೆ ಬರುವವನು ನನಗಿಂತ ಹೆಚ್ಚಿನವನು. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತುಮಿ ಪಾಪ್ ಕರ್‍ತಲೆ ಸೊಡ್ಲ್ಯಾಶಿ ಮನುನ್ ಎಕ್ ವಳಕ್ ಮನುನ್ ಮಿಯಾ ತುಮ್ಕಾ ಪಾನಿಯಾನ್ ಬಾಲ್ತಿಮ್ ದಿವ್ಲಾ, ಖರೆ ಮಾಜ್ಯಾ ಮಾನಾ ಅನಿ ಎಕ್ಲೊ ಯೆತಲೊ ಹಾಯ್ ತೊ ಮಾಜ್ಯಾನ್ಕಿ ಮೊಟೊ, ತೆಚ್ಯಾ ಪಾಯಾತ್ಲಿ ವ್ಹಾನಾ ಕಾಡುಕ್ ಸೈತ್ ಮಿಯಾ ಯೊಗ್ಯ್ ನ್ಹಯ್. ತೊ ತುಮ್ಕಾ ಪವಿತ್ರ್ ಆತ್ಮ್ಯಾನ್ ಅನಿ ಆಗಿನ್ ಬಾಲ್ತಿಮ್ ದಿತಾ. ಅಧ್ಯಾಯವನ್ನು ನೋಡಿ |