Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:2 - ಕನ್ನಡ ಸಮಕಾಲಿಕ ಅನುವಾದ

2 “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯವು ಸಮೀಪಿಸಿತು,” ಎಂದು ಸಾರಿ ಹೇಳುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪರಲೋಕರಾಜ್ಯವು ಸಮೀಪವಾಯಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಯೂದಾಯದ ಅಡವಿಯಲ್ಲಿ ಸಾರಿ ಹೇಳುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಪರಲೋಕರಾಜ್ಯವು ಸಮೀಪಿಸಿತು. ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಅವನು ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೊ “ತುಮ್ಚೆ ಪಾಪಾಚೆ ಜಿವನ್ ಸೊಡಾ, ಕಶ್ಯಾಕ್ ಮಟ್ಲ್ಯಾರ್ ಸರ್ಗಾಚೊ ರಾಜ್ ಜಗ್ಗೊಳ್ ಯೆಲಾ.” ಮನುನ್ ಸಾಂಗುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:2
61 ತಿಳಿವುಗಳ ಹೋಲಿಕೆ  

ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು.


“ಕಾಲವು ಪರಿಪೂರ್ಣವಾಗಿದೆ, ದೇವರ ರಾಜ್ಯವು ಸಮೀಪಿಸಿದೆ, ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ,” ಎಂದು ಹೇಳಿದರು.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.


ನಿಮ್ಮ ರಾಜ್ಯವು ಬರಲಿ; ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.


ದೈವಿಕ ದುಃಖವು ಪಶ್ಚಾತ್ತಾಪವನ್ನು ತಂದು ರಕ್ಷಣೆಗೆ ನಡೆಸುತ್ತದೆ. ಆ ಪಶ್ಚಾತ್ತಾಪದಲ್ಲಿ ವಿಷಾಧವಿರುವುದಿಲ್ಲ. ಆದರೆ ಪ್ರಾಪಂಚಿಕ ದುಃಖವು ಮರಣಕ್ಕೆ ನಡೆಸುತ್ತದೆ.


ನೀವು ಹೋಗುತ್ತಾ, ‘ಪರಲೋಕ ರಾಜ್ಯವು ಸಮೀಪವಾಯಿತು,’ ಎಂದು ಸಾರಿ ಹೇಳಿರಿ.


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ಅದೇ ಪ್ರಕಾರ, ಪಶ್ಚಾತ್ತಾಪಪಟ್ಟು ದೇವರ ಕಡೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ, ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ.


ನಾನು ದೇವರ ಬಲದಿಂದಲೇ ದೆವ್ವಗಳನ್ನು ಓಡಿಸುವುದಾದರೆ, ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.


ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.


ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ.


ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.


ಯೇಸು ತಮ್ಮ ಶಿಷ್ಯರನ್ನು ನೋಡಿ, ಹೇಳಿದ್ದೇನೆಂದರೆ: “ಬಡವರಾದ ನೀವು ಧನ್ಯರು, ದೇವರ ರಾಜ್ಯವು ನಿಮ್ಮದೇ.


ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.


“ಪರಲೋಕ ರಾಜ್ಯವು, ಸರೋವರದಲ್ಲಿ ಬೀಸಲಾಗಿ ಎಲ್ಲಾ ತರವಾದ ಮೀನುಗಳನ್ನು ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.


ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು.”


ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ನಿಂತು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ.


ವಿರೋಧಿಸುವವರ ಮನಸ್ಸನ್ನು ತಾಳ್ಮೆಯಿಂದ ತಿದ್ದುವವನಾಗಿದ್ದರೆ, ದೇವರು ಒಂದು ವೇಳೆ ಅಂಥವರಿಗೆ ಸತ್ಯದ ತಿಳುವಳಿಕೆಗೆ ನಡೆಸುವ ಪಶ್ಚಾತ್ತಾಪವನ್ನು ಕೊಡುವ ನಿರೀಕ್ಷೆ ಇರುವುದು.


ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು.


ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.


ಅದರಂತೆಯೇ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಲು ಅವಶ್ಯವಿಲ್ಲದ ತೊಂಬತ್ತೊಂಬತ್ತು ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಬಹಳ ಸಂತೋಷ ಉಂಟಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.


ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ,” ಎಂದರು.


ಶಿಷ್ಯರು ದೇವರ ರಾಜ್ಯವನ್ನು ಸಾರುವುದಕ್ಕೂ ರೋಗಿಗಳನ್ನು ಸ್ವಸ್ಥಮಾಡುವುದಕ್ಕೂ ಯೇಸು ಅವರನ್ನು ಕಳುಹಿಸಿಕೊಟ್ಟರು.


ಶಿಷ್ಯರು ಹೊರಟುಹೋಗಿ ಜನರಿಗೆ ದೇವರ ಕಡೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳಿದರು.


ಎಂದು ಬರೆದಿಟ್ಟ ಪ್ರಕಾರ, ಸ್ನಾನಿಕನಾದ ಯೋಹಾನನು ಅರಣ್ಯದಲ್ಲಿ ಪಾಪಗಳ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು, ಸಾರುತ್ತಾ ಬಂದನು.


ನೀತಿಯ ನಿಮಿತ್ತವಾಗಿ ಹಿಂಸೆಗೊಳಗಾಗುವವರು ಧನ್ಯರು, ಪರಲೋಕ ರಾಜ್ಯವು ಅವರದು.


“ಆತ್ಮದಲ್ಲಿ ಬಡವರಾಗಿರುವವರು ಧನ್ಯರು, ಪರಲೋಕ ರಾಜ್ಯವು ಅವರದು.


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.


ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು. ಆದರೆ ದೇವರ ಕಡೆಗೆ ತಿರುಗಿಕೊಂಡು ತನ್ನ ವ್ಯಭಿಚಾರವನ್ನು ಬಿಟ್ಟುಬಿಡಲು ಅವಳಿಗೆ ಮನಸ್ಸಿಲ್ಲ.


ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು, ಒಬ್ಬ ಮನುಷ್ಯನು ಸಾಸಿವೆ ಕಾಳನ್ನು ತೆಗೆದುಕೊಂಡುಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದಕ್ಕೆ ಹೋಲಿಕೆಯಾಗಿದೆ.


ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ, ಅದನ್ನು ಜ್ಞಾಪಿಸಿಕೊಂಡು ಪಶ್ಚಾತ್ತಾಪಪಡು. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನಿನ್ನ ಮನಸ್ಸು ಪರಿವರ್ತನೆ ಹೊಂದದಿದ್ದರೆ, ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.


ಆದ್ದರಿಂದ ಕ್ರಿಸ್ತ ಯೇಸುವಿನ ವಿಷಯವಾದ ಪ್ರಾಥಮಿಕ ಉಪದೇಶಗಳನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ದೇವರ ಕಡೆಗೆ ತಿರುಗಿಕೊಳ್ಳುವುದೂ ದೇವರಲ್ಲಿ ನಂಬಿಕೆಯಿಡುವುದೂ


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


“ಪರಲೋಕ ರಾಜ್ಯವು ಮಗನ ಮದುವೆ ಮಾಡಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.


“ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋದ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವುದು.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


“ಪರಲೋಕ ರಾಜ್ಯವನ್ನು ತನ್ನ ದ್ರಾಕ್ಷಿಯ ತೋಟಕ್ಕೆ ಕೂಲಿಯಾಳುಗಳನ್ನು ಕರೆಯುವುದಕ್ಕಾಗಿ ಬೆಳಿಗ್ಗೆ ಹೊರಟ ಒಬ್ಬ ಯಜಮಾನನಿಗೆ ಹೋಲಿಸಲಾಗಿದೆ.


“ಆದ್ದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕ ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.


ತರುವಾಯ ತಮ್ಮ ಹೆಚ್ಚಾದ ಮಹತ್ಕಾರ್ಯಗಳು ನಡೆದ ಪಟ್ಟಣಗಳು, ದೇವರ ಕಡೆಗೆ ತಿರುಗಿಕೊಳ್ಳದೆ ಇದ್ದುದರಿಂದ ಯೇಸು ಅವುಗಳನ್ನು ಗದರಿಸತೊಡಗಿ,


ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಮಾನಸಾಂತರಪಟ್ಟು, ‘ನಾವು ಪಾಪಮಾಡಿದ್ದೇವೆ, ತಪ್ಪುಮಾಡಿ ದುಷ್ಟರಾಗಿ ನಡೆದಿದ್ದೇವೆ,’ ಎಂದು ಅವರನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿಮಗೆ ಪ್ರಾರ್ಥನೆಮಾಡಿದರೆ,


ಅದೇ ಪ್ರಕಾರ, ಇವೆಲ್ಲ ಸಂಭವಿಸುವುದನ್ನು ನೀವು ಕಾಣುವಾಗ, ದೇವರ ರಾಜ್ಯ ಸಮೀಪಿಸಿತೆಂದು ತಿಳಿದುಕೊಳ್ಳಿರಿ.


“ಆಗ ಅವನು, ‘ಹಾಗಲ್ಲ, ತಂದೆ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಜೀವಂತವಾಗಿ ಅವರ ಬಳಿಗೆ ಹೋದರೆ, ಅವರು ಪಶ್ಚಾತ್ತಾಪ ಪಡುವರು,’ ಎಂದನು.


“ಪರಲೋಕ ರಾಜ್ಯವು ದೂರದೇಶಕ್ಕೆ ಪ್ರಯಾಣ ಮಾಡುವ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.


ಯೇಸು ಮತ್ತೊಂದು ಸಾಮ್ಯವನ್ನು ಹೇಳಿದರು: “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.


ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.


ಅವನು ಇಸ್ರಾಯೇಲರಲ್ಲಿ ಅನೇಕರನ್ನು ಅವರ ಕರ್ತದೇವರ ಕಡೆಗೆ ತಿರುಗಿಸುವನು.


ಅದು ನಿನ್ನ ಧಾನ್ಯ ತೆನೆಗಳನ್ನು ಮನೆಗೆ ತರುವುದೆಂದು ನಂಬುವೆಯಾ? ನಿನ್ನ ಕಣದಲ್ಲಿ ಕಾಳು ಕೂಡಿಸುವದೆಂದೂ ಅದನ್ನು ನಿರೀಕ್ಷಿಸುವೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು