Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:17 - ಕನ್ನಡ ಸಮಕಾಲಿಕ ಅನುವಾದ

17 ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಂದಿನಿಂದ ಯೇಸು, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯ ಸಮೀಪಿಸಿತು,” ಎಂಬ ಸಂದೇಶವನ್ನು ಬೋಧಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅಂದಿನಿಂದ ಯೇಸು - ಪರಲೋಕರಾಜ್ಯವು ಸಮೀಪಿಸಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಂದಿನಿಂದ ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದನು. “ಪರಲೋಕರಾಜ್ಯವು ಬೇಗನೆ ಬರಲಿದೆ. ಆದ್ದರಿಂದ ನೀವು ನಿಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಮಾರ್ಪಡಿಸಿಕೊಳ್ಳಿರಿ” ಎಂದು ಯೇಸು ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತನ್ನಾಚ್ಯಾನ್ ಜೆಜು ಬರಿ ಖಬರ್ ಸಾಂಗುಕ್‍ಲಾಲೊ. ಅನಿ, “ತುಮ್ಚೆ ಪಾಪಾಚೆ ಜಿವನ್ ಸೊಡಾ, ಸರ್ಗಾಚೊ ರಾಜ್ ಜಗ್ಗೊಳ್ ಯೆವ್ನ್ ಪಾವ್ಲಾ,” ಮನುನ್ ಸಾಂಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:17
26 ತಿಳಿವುಗಳ ಹೋಲಿಕೆ  

“ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.


ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನೇ ದೇವರ ಕಡೆಗೆ ತಿರುಗಿಕೊಳ್ಳುವಂತೆ ಕರೆಯಲು ಬಂದೆನು,” ಎಂದರು.


ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.


ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ.


ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


ಅದರಂತೆಯೇ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಲು ಅವಶ್ಯವಿಲ್ಲದ ತೊಂಬತ್ತೊಂಬತ್ತು ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಬಹಳ ಸಂತೋಷ ಉಂಟಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ಅದೇ ಪ್ರಕಾರ, ಪಶ್ಚಾತ್ತಾಪಪಟ್ಟು ದೇವರ ಕಡೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.


ಆದ್ದರಿಂದ ಕ್ರಿಸ್ತ ಯೇಸುವಿನ ವಿಷಯವಾದ ಪ್ರಾಥಮಿಕ ಉಪದೇಶಗಳನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ದೇವರ ಕಡೆಗೆ ತಿರುಗಿಕೊಳ್ಳುವುದೂ ದೇವರಲ್ಲಿ ನಂಬಿಕೆಯಿಡುವುದೂ


ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು.


“ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋದ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವುದು.


“ಪರಲೋಕ ರಾಜ್ಯವು, ಸರೋವರದಲ್ಲಿ ಬೀಸಲಾಗಿ ಎಲ್ಲಾ ತರವಾದ ಮೀನುಗಳನ್ನು ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.


ನೀವು ಹೋಗುತ್ತಾ, ‘ಪರಲೋಕ ರಾಜ್ಯವು ಸಮೀಪವಾಯಿತು,’ ಎಂದು ಸಾರಿ ಹೇಳಿರಿ.


ಶಿಷ್ಯರು ದೇವರ ರಾಜ್ಯವನ್ನು ಸಾರುವುದಕ್ಕೂ ರೋಗಿಗಳನ್ನು ಸ್ವಸ್ಥಮಾಡುವುದಕ್ಕೂ ಯೇಸು ಅವರನ್ನು ಕಳುಹಿಸಿಕೊಟ್ಟರು.


ಸ್ನಾನಿಕನಾದ ಯೋಹಾನನ ದಿನಗಳಿಂದ ಇದುವರೆಗೆ, ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಒಳಗಾಗಿದೆ, ಬಲಾತ್ಕಾರಿಗಳು ಅದನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ.


ಯೇಸು ಮತ್ತೊಂದು ಸಾಮ್ಯವನ್ನು ಹೇಳಿದರು: “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.


ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.”


ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


ನಿಮ್ಮ ರಾಜ್ಯವು ಬರಲಿ; ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.


ಯೇಸು ಸೇವೆಯನ್ನು ಪ್ರಾರಂಭಿಸಿದಾಗ ಹೆಚ್ಚು ಕಡಿಮೆ ಮೂವತ್ತು ವರ್ಷದವರಾಗಿದ್ದರು. ಯೇಸು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು, ಹೇಲೀಯ ಮಗನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು