Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:19 - ಕನ್ನಡ ಸಮಕಾಲಿಕ ಅನುವಾದ

19 ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರಿಗೆ ಆತನು, “ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳುತ್ತಲೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನನ್ನನ್ನು ಹಿಂಬಾಲಿಸಿ ಬನ್ನಿ. ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು,” ಎಂದು ಹೇಳಿ ಯೇಸು ಅವರನ್ನು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರಿಗೆ ಆತನು - ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು ಎಂದು ಹೇಳುತ್ತಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೇಸು, “ಬನ್ನಿರಿ, ನನ್ನನ್ನು ಹಿಂಬಾಲಿಸಿ. ನಿಮ್ಮನ್ನು ಬೇರೆ ರೀತಿಯ ಬೆಸ್ತರನ್ನಾಗಿ ಮಾಡುವೆನು. ನೀವು ಒಟ್ಟುಗೂಡಿಸುವುದು ಮೀನನ್ನಲ್ಲ, ಮನುಷ್ಯರನ್ನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಜೆಜುನ್ ತೆಂಕಾ, “ಮಾಜ್ಯಾ ವಾಂಗ್ಡಾ ಯೆವಾ, ಮಿಯಾ ತುಮ್ಕಾ ಮಾನ್ಸಾಕ್ನಿ ದೆವಾಚ್ಯಾ ರಾಜಾಕ್ಡೆ ಹಾನ್ತಲೆ ಕಶೆ ಮನುನ್ ಶಿಕ್ವುತಾ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:19
17 ತಿಳಿವುಗಳ ಹೋಲಿಕೆ  

ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು,” ಎಂದರು. ಆದರೆ ಅವನು, “ಕರ್ತದೇವರೇ, ಮೊದಲು ನಾನು ಹೋಗಿ ನನ್ನ ತಂದೆಯ ಶವಸಂಸ್ಕಾರ ಮಾಡಿಬರಲು ಅನುಮತಿಕೊಡಿರಿ,” ಎಂದನು.


ಯೇಸು ಅವನಿಗೆ, “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು,” ಎಂದರು.


ಯೇಸು ಮರುದಿನ ಗಲಿಲಾಯಕ್ಕೆ ಹೋಗಬೇಕೆಂದಿದ್ದಾಗ, ಅವರು ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದರು.


ಇವುಗಳಾದ ಮೇಲೆ, ಯೇಸು ಹೊರಟುಹೋಗಿ ತೆರಿಗೆಯ ಕಛೇರಿಯಲ್ಲಿ ಕುಳಿತುಕೊಂಡಿದ್ದ ಲೇವಿ ಎಂಬ ಹೆಸರುಳ್ಳ ಒಬ್ಬ ಸುಂಕದವನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದರು.


ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದ ಕಟ್ಟೆಯಲ್ಲಿ ಕುಳಿತಿದ್ದ ಅಲ್ಫಾಯನ ಮಗ ಲೇವಿಯನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.


ಯೇಸು ಅವನಿಗೆ, “ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ, ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು; ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು.


ಯೇಸು ಅಲ್ಲಿಂದ ಹಾದುಹೋಗುತ್ತಿದ್ದಾಗ, ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವುದನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು. ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.


ಆದರೆ ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ,” ಎಂದು ಹೇಳಿದರು.


ಏನೇ ಇದ್ದರೂ, ನಾನು ನಿಮಗೆ ಭಾರವಾಗಿರಲಿಲ್ಲ; ನಾನು ಯುಕ್ತಿಯುಳ್ಳವನಾಗಿ ನಿಮ್ಮನ್ನು ಉಪಾಯದಿಂದ ಸುಲಿದುಕೊಂಡೆನೋ?


ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಪೇತ್ರ ಎನಿಸಿಕೊಂಡ ಸೀಮೋನನನ್ನೂ ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು.


ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು