Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:25 - ಕನ್ನಡ ಸಮಕಾಲಿಕ ಅನುವಾದ

25 ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಹಾಗೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಜನರು ದೊಡ್ಡ ಗುಂಪಾಗಿ ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಗಲಿಲೇಯ, ದೆಕಪೊಲಿ, ಜೆರುಸಲೇಮ್, ಜುದೇಯ ಎಂಬ ಸ್ಥಳಗಳಿಂದಲೂ ಜೋರ್ಡನ್ ನದಿಯ ಆಚೆಕಡೆಯಿಂದಲೂ ಜನರು ತಂಡೋಪತಂಡವಾಗಿ ಬಂದು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮತ್ತು ಗಲಿಲಾಯ ದೆಕಪೊಲಿ ಯೆರೂಸಲೇಮ್ ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅನೇಕಾನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಈ ಜನರು ಗಲಿಲಾಯದಿಂದಲೂ ದೆಕಪೊಲಿ ಎಂಬ ಹತ್ತು ಊರುಗಳಿಂದಲೂ ಜೆರುಸಲೇಮಿನಿಂದಲೂ ಜುದೇಯದಿಂದಲೂ ಮತ್ತು ಜೋರ್ಡನ್ ನದಿಯ ಆಚೆಕಡೆಯ ಪ್ರದೇಶದಿಂದಲೂ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಗಾಲಿಲಿಯಾತ್ನಾ, ಧಾ ಶಾರಾನಿತ್ನಾ, ಜೆರುಜಲೆಮಾತ್ನಾ, ಜುದೆಯಾತ್ನಾ, ಜೊರ್ದಾನ್ ನ್ಹಯ್ಚ್ಯಾ ತಿಕುಲ್ಯಾ ಬಾಜುಚ್ಯಾ ಜಾಗ್ಯಾತ್ನಾ ಯೆಲ್ಲ್ಯಾ ಲೊಕಾಂಚೊ ಮೊಟೊ ತಾಂಡೊ ಜೆಜುಚ್ಯಾ ಫಾಟ್ನಾ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:25
11 ತಿಳಿವುಗಳ ಹೋಲಿಕೆ  

ಯೇಸು ಅವರೊಂದಿಗೆ ಕೆಳಗಿಳಿದು ಸಮತಟ್ಟಾದ ಭೂಮಿಯ ಮೇಲೆ ನಿಂತಿದ್ದಾಗ, ಅವರ ಶಿಷ್ಯರ ಗುಂಪು ಅಲ್ಲದೆ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಟೈರ್, ಸೀದೋನ್ ಪಟ್ಟಣಗಳಿರುವ ಸಮುದ್ರ ತೀರದಿಂದಲೂ


ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ದೆಕಪೊಲಿಯಲ್ಲಿ ಸಾರಲಾರಂಭಿಸಿದನು ಮತ್ತು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.


ಆಮೇಲೆ ಯೇಸು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶದಿಂದ ಹೊರಟು ಸೀದೋನಿನ ಮಾರ್ಗವಾಗಿ ಗಲಿಲಾಯ ಸರೋವರ ತೀರವನ್ನು ಹಾದು ದೆಕಪೊಲಿ ಪ್ರದೇಶಕ್ಕೆ ಬಂದರು.


ಆಗ ಸಮೂಹದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು, ಏಕೆಂದರೆ ಅವರಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥಮಾಡುತ್ತಿತ್ತು.


ಸಬ್ಬತ್ ದಿನ ಬಂದಾಗ, ಯೇಸು ಸಭಾಮಂದಿರದಲ್ಲಿ ಬೋಧಿಸಲಾರಂಭಿಸಿದರು. ಅದನ್ನು ಕೇಳಿದ ಅನೇಕರು ವಿಸ್ಮಯಗೊಂಡು, “ಈತನು ಇವೆಲ್ಲವನ್ನು ಎಲ್ಲಿಂದ ಪಡೆದಿದ್ದಾನೆ? ಈತನ ಕೈಗಳಿಂದ ಇಂಥ ಅದ್ಭುತಕಾರ್ಯಗಳನ್ನು ಮಾಡುವ ಜ್ಞಾನವು ಈತನಿಗೆ ಎಲ್ಲಿಂದ ಬಂತು?


ಜನರ ದೊಡ್ಡ ಸಮೂಹಗಳು ಅವರನ್ನು ಹಿಂಬಾಲಿಸಿದವು, ಯೇಸು ಅವರನ್ನು ಅಲ್ಲಿ ಸ್ವಸ್ಥಮಾಡಿದರು.


ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದರು. ದೊಡ್ಡ ಜನರ ಗುಂಪು ಅವರನ್ನು ಹಿಂಬಾಲಿಸಿತು. ಯೇಸು ಅವರಲ್ಲಿ ಅಸ್ವಸ್ಥರಾದವರನ್ನು ಗುಣಪಡಿಸಿದರು.


ಯೇಸು ಪರ್ವತವನ್ನು ಇಳಿದು ಬಂದಾಗ, ಜನರು ದೊಡ್ಡ ಸಮೂಹವಾಗಿ ಅವರನ್ನು ಹಿಂಬಾಲಿಸಿದರು.


ಯೇಸು ಜನರ ಗುಂಪನ್ನು ಕಂಡು, ಒಂದು ಬೆಟ್ಟವನ್ನೇರಿ ಕುಳಿತುಕೊಂಡರು. ಶಿಷ್ಯರು ಅವರ ಬಳಿಗೆ ಬಂದರು.


“ಜೆಬುಲೂನ್ ನಾಡು ಮತ್ತು ನೆಫ್ತಲೀಮ್ ನಾಡು, ಯೊರ್ದನ್ ನದಿಯ ಆಚೆ ಸರೋವರದ ಕಡೆ, ಯೆಹೂದ್ಯರಲ್ಲದವರಿರುವ ಗಲಿಲಾಯ ನಾಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು