Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:8 - ಕನ್ನಡ ಸಮಕಾಲಿಕ ಅನುವಾದ

8 ಅನಂತರ ಸೈತಾನನು ಯೇಸುವನ್ನು ಬಹಳ ಎತ್ತರವಾದ ಪರ್ವತಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ಮಹಿಮೆಯನ್ನೂ ಅವರಿಗೆ ತೋರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನಂತರ ಪಿಶಾಚಿ ಯೇಸುವನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದು, ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ತೋರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಳಿಕ ಸೈತಾನನು ಯೇಸುವನ್ನು ಎತ್ತರವಾದ ಬೆಟ್ಟದ ತುದಿಗೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಮತ್ತು ಅವುಗಳ ವೈಭವವನ್ನು ತೋರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಸೈತಾನಾನ್ ಜೆಜುಕ್ ಎಕ್ ಲೈ ಮೊಟ್ಯಾ ಮಡ್ಡಿ ವರ್‍ತಿ ಘೆವ್ನ್ ಗೆಲ್ಯಾನ್, ಅನಿ ದುನಿಯಾತ್ಲ್ಯಾ ಸಗ್ಳ್ಯಾ ರಾಜಾಂಚೊ ವೈಭವ್ ದಾಕ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:8
13 ತಿಳಿವುಗಳ ಹೋಲಿಕೆ  

ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


“ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು. ಅದರ ಹೂವು ಉದುರಿ ಹೋಗುವುದು.


ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.


ಹಾಮಾನನು ತನ್ನ ಐಶ್ವರ್ಯದ ಘನವನ್ನೂ, ತನ್ನ ಮಕ್ಕಳ ಹೆಚ್ಚಳವನ್ನೂ, ಅರಸನು ತನ್ನನ್ನು ಹೆಚ್ಚಿಸಿದ್ದನ್ನೂ, ಅರಸನ ಪ್ರಭುಗಳ ಹಾಗೂ ಸೇವಕರ ಮೇಲೆ ಎತ್ತಿದ್ದನ್ನೂ ಹೀಗೆ ಎಲ್ಲವನ್ನೂ ಅವರಿಗೆ ವಿವರವಾಗಿ ಹೇಳಿದನು.


ಅವನು ನೂರ ಎಂಬತ್ತು ದಿವಸಗಳವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ವೈಭವ ಹಾಗು ಆಡಂಬರವನ್ನು ತೋರಿಸಿದನು.


ಆಮೇಲೆ ಸೈತಾನನು ಯೇಸುವನ್ನು ಪವಿತ್ರ ನಗರಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ,


ಆಗ ಬಿಳಾಮನು ಬಾಲಾಕನಿಗೆ, “ನೀನು ನಿನ್ನ ದಹನಬಲಿಯ ಹತ್ತಿರ ನಿಂತುಕೋ, ನಾನು ಸ್ವಲ್ಪ ದೂರಹೋಗಿ ಬರುತ್ತೇನೆ. ಯೆಹೋವ ದೇವರು ನನಗೆ ದರ್ಶನ ಕೊಡಬಹುದು, ಅವರು ನನಗೆ ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುವೆನು,” ಎಂದು ಹೇಳಿ, ಒಂದು ಎತ್ತರವಾದ ಸ್ಥಳಕ್ಕೆ ಹೋದನು.


ತಂದೆ ಪುತ್ರನನ್ನು ಪ್ರೀತಿಸಿ ತಾನು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ನೀವು ಆಶ್ಚರ್ಯಪಡುವಂತೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಪುತ್ರನಿಗೆ ತೋರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು