ಮತ್ತಾಯ 5:17 - ಕನ್ನಡ ಸಮಕಾಲಿಕ ಅನುವಾದ17 “ಮೋಶೆಯ ನಿಯಮವನ್ನಾಗಲಿ, ಪ್ರವಾದನೆಗಳನ್ನಾಗಲಿ ರದ್ದು ಮಾಡುವುದಕ್ಕೆ ನಾನು ಬಂದೆನೆಂದು ಭಾವಿಸಬೇಡಿರಿ; ನಾನು ಅವುಗಳನ್ನು ರದ್ದುಗೊಳಿಸಲು ಬರಲಿಲ್ಲ, ನೆರವೇರಿಸಲು ಬಂದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಮೋಶೆಯ ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ ಪ್ರವಚನಗಳನ್ನಾಗಲಿ ರದ್ದುಮಾಡಲು ನಾನು ಬಂದೆನೆಂದು ತಿಳಿಯಬೇಡಿ. ರದ್ದುಮಾಡಲು ಅಲ್ಲ, ಅವುಗಳನ್ನು ಸಿದ್ಧಿಗೆ ತರಲು ಬಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮೋಶೆಯ ಧರ್ಮಶಾಸ್ತ್ರವನ್ನಾಗಲಿ ಪ್ರವಾದಿಗಳ ವಚನಗಳನ್ನಾಗಲಿ ತೆಗೆದುಹಾಕುವದಕ್ಕೆ ನಾನು ಬಂದೆನೆಂದು ನೆನಸಬೇಡಿರಿ. ತೆಗೆದುಹಾಕುವದಕ್ಕೆ ಬಂದಿಲ್ಲ; ನೆರವೇರಿಸುವದಕ್ಕೆ ಬಂದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ನಾನು ಮೋಶೆಯ ಧರ್ಮಶಾಸ್ತ್ರವನ್ನಾಗಲಿ ಪ್ರವಾದಿಗಳ ಉಪದೇಶಗಳನ್ನಾಗಲಿ ತೆಗೆದುಹಾಕುವುದಕ್ಕೆ ಬಂದೆನೆಂದು ನೆನೆಸಬೇಡಿರಿ. ನಾನು ಅವುಗಳನ್ನು ನಾಶಮಾಡುವುದಕ್ಕಾಗಿ ಬರದೆ ಅವುಗಳನ್ನು ನೆರವೇರಿಸುವುದಕ್ಕಾಗಿ ಬಂದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಮಿಯಾ ಮೊಯ್ಜೆನ್ ದಿಲ್ಲೆ ಖಾಯ್ದೆ ಹೊಂವ್ದಿ, ಪ್ರವಾದ್ಯಾನಿ ಶಿಕ್ವಲ್ಲೆ ಹೊಂವ್ದಿ ಕಾಡುನ್ ಟಾಕುಕ್ ಯೆಲಾ ಮನುನ್ ಯವ್ಜುನಕಾಶಿ. ಮಿಯಾ ತೆ ಕಾಡುನ್ ಟಾಕುಕ್ ಯೆವ್ಕ್ ನಾ ತೆನಿ ಶಿಕ್ವಲ್ಲೆ ಸಗ್ಳೆ ಪುರಾ ಕರುಕ್ ಮನುನ್ ಯೆಲಾ. ಅಧ್ಯಾಯವನ್ನು ನೋಡಿ |