Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:23 - ಕನ್ನಡ ಸಮಕಾಲಿಕ ಅನುವಾದ

23 “ಆದ್ದರಿಂದ, ನೀನು ನಿನ್ನ ಕಾಣಿಕೆಯನ್ನು ಸಮರ್ಪಿಸಲು ಬಲಿಪೀಠದ ಬಳಿಗೆ ತಂದಾಗ, ನಿನ್ನ ಸಹೋದರನಿಗೆ ಅಥವಾ ನಿನ್ನ ಸಹೋದರಿಗೆ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವದೆ ಎಂಬದು ನಿನ್ನ ನೆನಪಿಗೆ ಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಆದ್ದರಿಂದ ನೀವು ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಮುಂದೆ ದೇವರಿಗೆ ಅರ್ಪಿಸುವಾಗ, ನಿಮ್ಮ ಸಹೋದರನಿಗೆ ನಿಮ್ಮ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿಮ್ಮ ನೆನಪಿಗೆ ಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತೆಚೆಸಾಟ್ನಿ ತಿಯಾ ದೆವಾಕ್ ಕಾನಿಕ್ ದಿವ್ಕ್ ಮನುನ್ ಅಲ್ತಾರಿಕ್ಡೆ ಗೆಲ್ಲ್ಯಾ ತನ್ನಾ ತುಜ್ಯಾ ಭಾವಾಚ್ಯಾ ವಿರೊದ್ ಕಾಯ್ತರ್ ಹಾಯ್ ಮನುನ್ ತುಕಾ ಯಾದ್ ಯೆಲ್ಯಾರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:23
17 ತಿಳಿವುಗಳ ಹೋಲಿಕೆ  

ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರಿಗಾದರೂ ವಿರೋಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ಸಹ ನಿಮ್ಮ ಅಪರಾಧಗಳನ್ನು ಕ್ಷಮಿಸುವರು.


ನಿನ್ನ ಕಾಣಿಕೆಯನ್ನು ಬಲಿಪೀಠದ ಮುಂದೆಯೇ ಬಿಟ್ಟು ಹೋಗಿ ಮೊದಲು ಸಹೋದರನೊಡನೆ ಅಥವಾ ಸಹೋದರಿಯೊಡನೆ ಸಂಧಾನಮಾಡಿಕೋ; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಸಮರ್ಪಿಸು.


ಆಗ ಯೇಸು ಅವನಿಗೆ, “ನೋಡು ಇದನ್ನು ನೀನು ಯಾರಿಗೂ ಹೇಳಬೇಡ, ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಜನರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು,” ಎಂದು ಹೇಳಿದರು.


ಕುರುಡರೇ, ಯಾವುದು ದೊಡ್ಡದು? ಕಾಣಿಕೆಯೋ ಕಾಣಿಕೆಯನ್ನು ಪಾವನ ಮಾಡುವ ಬಲಿಪೀಠವೋ?


ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಏಕೆಂದರೆ ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ. ದಹನಬಲಿಗಳಿಗಿಂತ ದೇವರ ಅಂಗೀಕಾರವನ್ನೇ ಅಪೇಕ್ಷಿಸುತ್ತೇನೆ.


ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.


ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ.


ಅರಸನು ಶಿಮ್ಮಿಗೆ, “ನೀನು ನನ್ನ ತಂದೆ ದಾವೀದನಿಗೆ ಮಾಡಿದ ಕೇಡನ್ನು ನಿನ್ನ ಹೃದಯವು ತಿಳಿದಿದೆ. ಯೆಹೋವ ದೇವರು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವರು.


ಆಗ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದು ಎಂದು ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಆಗ ಪಾನದಾಯಕರ ಮುಖ್ಯಸ್ಥನು ಫರೋಹನಿಗೆ, “ಈ ಹೊತ್ತು ನನ್ನ ತಪ್ಪನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು