ಮತ್ತಾಯ 5:24 - ಕನ್ನಡ ಸಮಕಾಲಿಕ ಅನುವಾದ24 ನಿನ್ನ ಕಾಣಿಕೆಯನ್ನು ಬಲಿಪೀಠದ ಮುಂದೆಯೇ ಬಿಟ್ಟು ಹೋಗಿ ಮೊದಲು ಸಹೋದರನೊಡನೆ ಅಥವಾ ಸಹೋದರಿಯೊಡನೆ ಸಂಧಾನಮಾಡಿಕೋ; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಸಮರ್ಪಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ’ ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟುಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಗ ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಬಳಿಯಲ್ಲೇ ಬಿಟ್ಟುಹೋಗಿ, ಮೊದಲು ಅವನೊಂದಿಗೆ ಸಮಾಧಾನ ಮಾಡಿಕೊಳ್ಳಿರಿ. ಆಮೇಲೆ ಬಂದು ನಿಮ್ಮ ಕಾಣಿಕೆಯನ್ನು ಸಲ್ಲಿಸಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತುಜಿ ಕಾನಿಕ್ ಥೈಚ್ ಅಲ್ತಾರಿಕ್ಡೆ ಸೊಡ್ ಅನಿ ತುಜ್ಯಾ ಭಾವಾಕ್ಡೆ ಜಾ ಅನಿ ತೆಚೆ ವಾಂಗ್ಡಾ ಎಕ್ ಹೊ ಅನಿ ಪರ್ತುನ್ ಯೆವ್ನ್ ತುಜಿ ಕಾನಿಕ್ ದೆವಾಕ್ ದಿ. ಅಧ್ಯಾಯವನ್ನು ನೋಡಿ |
ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.