Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:25 - ಕನ್ನಡ ಸಮಕಾಲಿಕ ಅನುವಾದ

25 “ನಿನ್ನ ಎದುರಾಳಿ ನಿನ್ನನ್ನು ನ್ಯಾಯಾಲಯಕ್ಕೂ, ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಿ ಸೆರೆಮನೆಗೆ ಹಾಕದಿರುವುದಕ್ಕೂ, ಎದುರಾಳಿಯ ಸಂಗಡ ದಾರಿಯಲ್ಲಿರುವಾಗಲೇ ಬೇಗ ಸಮಾಧಾನ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಮಾಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೊಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಿನ್ನ ವಾದಿಯ ಸಂಗಡ ಇನ್ನೂ ದಾರಿಯಲ್ಲಿರುವಾಗಲೇ ಅವನ ಕೂಡ ಬೇಗ ಸಮಾಧಾನ ಮಾಡಿಕೋ; ಇಲ್ಲದಿದ್ದರೆ ಆ ವಾದಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು; ನ್ಯಾಯಾಧಿಪತಿಯು ನಿನ್ನನ್ನು ಓಲೇಕಾರನ ಕೈಗೆ ಒಪ್ಪಿಸಿಕೊಟ್ಟಾನು; ಆಗ ನೀನು ಸೆರೆಯಲ್ಲಿ ಬಿದ್ದೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನಿಮ್ಮ ವಿರೋಧಿಯು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯುವಾಗ ಬೇಗನೆ ಅವನೊಂದಿಗೆ ಸ್ನೇಹಿತರಾಗಿ. ನೀವು ನ್ಯಾಯಾಲಯಕ್ಕೆ ಹೋಗುವ ಮೊದಲೇ ಇದನ್ನು ಮಾಡಬೇಕು. ನೀವು ಅವನ ಸ್ನೇಹಿತರಾಗದಿದ್ದರೆ, ಅವನು ನಿಮ್ಮನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿಯು ನಿಮ್ಮನ್ನು ಸೆರೆಮನೆಗೆ ಹಾಕಲು ಕಾವಲುಗಾರನಿಗೆ ಒಪ್ಪಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 “ಕೊನ್ ತರ್ ತುಜ್ಯಾ ವಿರೊದ್ ಪಿರ್ಯಾದ್ ದಿವ್ನ್ ತುಕಾ ನ್ಯಾಯ್ ಕರ್‍ತಲ್ಯಾ ಜಾಗ್ಯಾಕ್ ಘೆವ್ನ್ ಜವ್ಚ್ಯಾ ಅದ್ದಿಚ್ ತೆಚ್ಯಾಕ್ನಾ ರಾಜಿ ಹೊ. ಎಗ್ದಾ ತಿಯಾ ನ್ಯಾಯ್ ಕರ್‍ತಲ್ಯಾ ಜಾಗ್ಯಾಕ್ ಜಾವ್ನ್ ಪಾವ್ಲೆ ತರ್, ತೊ ತುಕಾ ನ್ಯಾಯ್ ಕರ್‍ತಲ್ಯಾ ಮಾನ್ಸಾಚ್ಯಾ ಹಾತಿತ್ ದಿತಾ, ಅನಿ ತೊ ತುಕಾ ಅದಿಕಾರ್‍ಯಾಂಚ್ಯಾ ಹಾತಿತ್ ದಿತಾ, ಅನಿ ತುಕಾ ಬಂದಿಖಾನ್ಯಾತ್ ಘಾಲ್ತ್ಯಾತ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:25
19 ತಿಳಿವುಗಳ ಹೋಲಿಕೆ  

ದುಡುಕಿ ವ್ಯಾಜ್ಯಮಾಡುವುದಕ್ಕಾಗಿ ಹೋಗಬೇಡ. ಏಕೆಂದರೆ ನಿನ್ನ ನೆರೆಯವನು ನಿನ್ನನ್ನು ಅವಮಾನ ಮಾಡಿದಾಗ, ನೀನು ಕಡೆಯಲ್ಲಿ ಏನು ಮಾಡುವೆ?


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ, “ಈ ಹೊತ್ತು” ಎಂಬುದು ಇರುವವರೆಗೆ ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,


ತರುವಾಯ ಅವನು ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಬಯಸಿ, ಕಣ್ಣೀರನ್ನು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲಾದವನೆಂದು ನೀವು ಬಲ್ಲಿರಿ.


“ದೇವರಿಗೆ ಅಧೀನವಾಗಿ, ದೇವರೊಂದಿಗೆ ಸಮಾಧಾನದಿಂದಿರು; ಇದರಿಂದ ನಿನಗೆ ಸಮೃದ್ಧಿ ಬರುವುದು.


ಏಕೆಂದರೆ ದೇವರು ಹೇಳಿದ ಹಾಗೆ, “ಪ್ರಸನ್ನತೆಯ ಕಾಲದಲ್ಲಿ ನಿನ್ನ ಪ್ರಾರ್ಥನೆಯನ್ನು ನಾನು ಲಾಲಿಸಿದೆನು. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು,” ಇಗೋ, ಇದೇ ದೇವರ ಮೆಚ್ಚುಗೆಯ ಕಾಲ, ಈಗಲೇ ರಕ್ಷಣೆಯ ದಿನ.


ಆದುದರಿಂದ ಭಕ್ತರೆಲ್ಲರು ನೀವು ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ; ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು ಅವರ ಸಮೀಪಕ್ಕೆ ಬರುವುದಿಲ್ಲ.


ಆದರೆ ಪೇತ್ರನು ಮಹಾಯಾಜಕನ ಅರಮನೆಗೆ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ, ಒಳಗೆ ಹೋಗಿ ಅಂತ್ಯವೇನಾಗುವುದೆಂದು ನೋಡಲು ಸೇವಕರೊಂದಿಗೆ ಕುಳಿತುಕೊಂಡನು.


ಅದೇ ಪಟ್ಟಣದಲ್ಲಿ ಒಬ್ಬ ವಿಧವೆಯಿದ್ದಳು. ಆಕೆ ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿಯ ಎದುರಾಗಿ ನನಗೆ ನ್ಯಾಯ ದೊರಕಿಸಿಕೊಡು,’ ಎಂದು ಕೇಳಿಕೊಳ್ಳುತ್ತಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು