Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:26 - ಕನ್ನಡ ಸಮಕಾಲಿಕ ಅನುವಾದ

26 ಇಲ್ಲದಿದ್ದರೆ, ನೀನು ಕೊನೆಯ ಪೈಸೆಯನ್ನಾದರೂ ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು ನಿನಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನೀನು ಒಂದು ಕಾಸನ್ನಾದರೂ ನಿಲ್ಲಿಸಿಕೊಳ್ಳದೆ ಎಲ್ಲಾ ಸಲ್ಲಿಸುವ ತನಕ ಅಲ್ಲಿಂದ ಬರುವದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ನೀವು ನಿಮ್ಮ ಸಾಲವನ್ನೆಲ್ಲ ತೀರಿಸುವ ತನಕ ಸೆರೆಯಿಂದ ಬಿಡುಗಡೆ ಆಗುವುದಿಲ್ಲವೆಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ತುಜ್ಯಾ ದಂಡಾಚೊ ಎಕ್-ಎಕ್ ಪೈಸೊ ಸೈತ್ ಭರುನ್ ಹೊಯ್ ಪತರ್ ತಿಯಾ ಥೈಚ್ ರ್‍ಹಾತೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:26
10 ತಿಳಿವುಗಳ ಹೋಲಿಕೆ  

ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅರಸನು ಅವನನ್ನು ಕಠಿಣ ಶಿಕ್ಷೆಗೆ ಒಳಪಡಿಸಲು ಸೆರೆಮನೆಯ ಅಧಿಕಾರಿಯ ವಶಕ್ಕೆ ಒಪ್ಪಿಸಿದನು.


ನೀನು ಕೊನೆಯ ರೂಪಾಯಿಯನ್ನು ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು, ನಾನು ನಿನಗೆ ಹೇಳುತ್ತೇನೆ,” ಎಂದರು.


ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


ಅಂಥವರು ಕರ್ತ ಯೇಸುವಿನ ಸನ್ನಿಧಿಯಿಂದಲೂ ಅವರ ಮಹಿಮೆಯ ಬಲದಿಂದಲೂ ಬಹಿಷ್ಕೃತರಾಗಿ ನಿತ್ಯನಾಶದ ಶಿಕ್ಷೆಯನ್ನು ಅನುಭವಿಸುವರು.


ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಂತರ ಸ್ಥಾಪಿಸಿದೆ,’ ಎಂದನು.


“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಒಂದು ರೂಪಾಯಿಗೆ ಎರಡು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ.


ಆದರೆ ಒಬ್ಬ ಬಡ ವಿಧವೆಯು ಬಂದು ಎರಡು ಚಿಕ್ಕ ನಾಣ್ಯಗಳನ್ನು ಹಾಕಿದಳು.


ನೀನು ನಿನ್ನ ವಿರೋಧಿಯ ಸಂಗಡ ನ್ಯಾಯಾಧಿಪತಿಯ ಎದುರಿಗೆ ಹೋಗುವಾಗ, ಮಾರ್ಗದಲ್ಲಿಯೇ ಅವನಿಂದ ವ್ಯಾಜ್ಯ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡು, ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆಯಬಹುದು, ಆಗ ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆಯ ಅಧಿಕಾರಿಗೆ ಒಪ್ಪಿಸಬಹುದು ಮತ್ತು ಅಧಿಕಾರಿಯು ನಿನ್ನನ್ನು ಸೆರೆಯಲ್ಲಿ ಹಾಕಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು