Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:29 - ಕನ್ನಡ ಸಮಕಾಲಿಕ ಅನುವಾದ

29 ಆದ್ದರಿಂದ ನಿನ್ನ ಬಲಗಣ್ಣು ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕಿತ್ತೆಸೆದುಬಿಡು. ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಿನ್ನ ಬಲಗಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತೆಸೆದುಬಿಡು; ನಿನ್ನ ಇಡೀ ದೇಹ ನರಕಕ್ಕೆ ತುತ್ತಾಗುವುದಕ್ಕಿಂತ ನಿನ್ನ ಒಂದು ಅಂಗ ನಾಶವಾಗುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಟುಬಿಡು; ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವದಕ್ಕಿಂತ ಅವಯವಗಳಲ್ಲಿ ಒಂದು ಹೋಗುವದು ನಿನಗೆ ಹಿತವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಿನ್ನ ಬಲಗಣ್ಣು ನಿನ್ನನ್ನು ಪಾಪಕ್ಕೊಳಗಾಗುವಂತೆ ಮಾಡಿದರೆ, ಅದನ್ನು ಕಿತ್ತು ಬಿಸಾಡು. ನಿನ್ನ ಪೂರ್ಣಶರೀರವು ನರಕಕ್ಕೆ ಬೀಳುವುದಕ್ಕಿಂತ ನಿನ್ನ ಶರೀರದ ಒಂದು ಭಾಗವನ್ನು ಕಳೆದುಕೊಳ್ಳುವುದೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತುಜೊ ಉಜ್ವ್ಯಾ ಬಾಜುಚೊ ಡೊಳೊ ತುಕಾ ಪಾಪ್ ಕರುಕ್ ಕಾರನ್ ಹೊತಾ ಜಾಲ್ಯಾರ್, ತೊ ಮೆಟ್ಟುನ್ ಕಾಡ್ ಅನಿ ಧುರ್ ಟಾಕ್. ತುಜೆ ಸಗ್ಳೆ ಆಂಗ್ ನರ್‍ಕಾತ್ ನ್ಹೆವ್ನ್ ಟಾಕ್ತಲ್ಯಾಚ್ಯಾನ್ಕಿ ತುಜ್ಯಾ ಆಂಗಾಚೊ ಖಲೊಬಿ ಎಕ್ ಭಾಗ್ ನಸ್ತಾನಾ ರ್‍ಹಾತಲೆ ತುಕಾ ಕವ್ಡೆಕಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:29
22 ತಿಳಿವುಗಳ ಹೋಲಿಕೆ  

ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ.


ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.


ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ.


ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು.


ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.


ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು?


ತಮ್ಮ ತಾಯಿಯ ಗರ್ಭದಿಂದ ಹುಟ್ಟಿದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಕೆಲವರು ಮನುಷ್ಯರಿಂದ ಮಾಡಲಾದ ನಪುಂಸಕರು ಇದ್ದಾರೆ. ಇನ್ನು ಕೆಲವರು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರೂ ಇದ್ದಾರೆ. ಇದನ್ನು ಸ್ವೀಕರಿಸಬಲ್ಲವನು ಸ್ವೀಕರಿಸಲಿ,” ಎಂದರು.


ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ ನಿಮಗೆ ಕಷ್ಟ! ಏಕೆಂದರೆ ಒಬ್ಬನನ್ನು ಮತಾಂತರ ಮಾಡುವುದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ. ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ.


ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?


ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


“ಹಾವುಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆಯಿಂದ ಹೇಗೆ ತಪ್ಪಿಸಿಕೊಂಡೀರಿ?


ಆದರೆ ಯಾರಿಗೆ ನೀವು ಭಯಪಡಬೇಕೆಂದು ನಾನು ನಿಮಗೆ ತೋರಿಸುತ್ತೇನೆ: ನಿಮ್ಮ ದೇಹವನ್ನು ಕೊಂದ ಮೇಲೆ, ನರಕದಲ್ಲಿ ಹಾಕುವುದಕ್ಕೆ ಅಧಿಕಾರವಿರುವ ದೇವರಿಗೆ ಭಯಪಡಿರಿ. ಹೌದು, ದೇವರಿಗೇ ಭಯಪಡಿರಿ, ಎಂದು ನಾನು ನಿಮಗೆ ಹೇಳುತ್ತೇನೆ.


ನಿನ್ನ ಬಲಗೈ ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕತ್ತರಿಸಿ ಬಿಸಾಡಿಬಿಡು; ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು.


ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.


ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದು ಹೇಳಿದರು.


ಅದನ್ನು ಬಿಟ್ಟುಕೊಡಲು ಇಷ್ಟಪಡದೆ, ತನ್ನ ಬಾಯಿಯೊಳಗೆ ದೀರ್ಘಸಮಯ ಇಟ್ಟುಕೊಂಡರೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು